AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ: ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆಯೇ ಸುತ್ತಿಕೊಳ್ಳುತ್ತಿದೆ. ಪ್ರಜ್ವಲ್ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಎಲ್ಲಿ ನಡೆದಿದೆ? ಏನೇನು ಆರೋಪಗಳು ವ್ಯಕ್ತವಾಗಿವೆ? ಪೊಲೀಸರು ಹೇಳುವುದೇನು ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ: ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು
ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ
ಮಂಜುನಾಥ ಕೆಬಿ
| Updated By: Ganapathi Sharma|

Updated on: May 10, 2024 | 11:36 AM

Share

ಹಾಸನ, ಮೇ 10: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ (Rape Case) ದಾಖಲಾಗಿದೆ. ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ ಈ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಂತರ ಸ್ಥಳ ಮಹಜರು ಕೂಡ ಮಾಡಲಾಗಿದೆ. ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಪಾಟ್ ಮಹಜರ್ ಮಾಡಲಾಗಿದೆ. ಸಂತ್ರಸ್ತೆ ಗನ್ನಿಕಡದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಭಾರತಕ್ಕೆ ಕರೆದೊಂದು ಬಂಧಿಸುವ ವಿಚಾರವಾಗಿ ವಿಶೇಷ ತನಿಖಾ ತಂಡ ಕಾರ್ಯ ಪ್ರವೃತ್ತವಾಗಿದೆ. ಕಿಡ್ನಾಪ್ ಪ್ರಕರಣದ ಆರೋಪಿ, ಮಾಜಿ ಸಚಿವ ಹೆಚ್ ಡಿ ರೇವಣ್ಣ ನ್ಯಾಯಾಂಗ ಬಂಧನ ಮುಂದುವರಿದಿದ್ದು, ಜಾಮೀನು ಅರ್ಜಿಯ ವಿಚಾರಣೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದೆ.

ಎಲ್ಲ ಬೆಳವಣಿಗೆಗಳ ಮಧ್ಯೆಯೇ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಗುರುವಾರ ಮಹತ್ವದ ತಿರುವು ದೊರೆತಿತ್ತು. ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಒಬ್ಬರು, ರೇವಣ್ಣ ವಿರುದ್ಧ ದೂರು ನೀಡುವಂತೆ ತಮ್ಮ ಮೇಲೆ ಬಲವಂತ ಮಾಡಲಾಗುತ್ತಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಮಹಿಳೆಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ರಾಜ್ಯ ಪೊಲೀಸರಿಗೆ ಮಹಿಳಾ ಆಯೋಗ ಸೂಚನೆ ನೀಡಿದೆ. ಇದೆಲ್ಲದರ ಬೆನ್ನಲ್ಲೇ, ಮಹಿಳೆಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬರೆದ ಪತ್ರದ ಪ್ರತಿ ‘ಟಿವಿ9’ಗೆ ಲಭ್ಯವಾಗಿದೆ.

ಇದನ್ನೂ ಓದಿ: ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಬೆದರಿಕೆ ಹಾಕುತ್ತಿರುವ ಕುಮಾರಸ್ವಾಮಿ: ಎಸ್​​ಐಟಿಗೆ ಕಾಂಗ್ರೆಸ್ ದೂರು

ಇನ್ನು, ವಿಡಿಯೋ ಲೀಕ್ ಮಾಡಿದವರ ವಿರುದ್ಧ ಹೋರಾಟ ನಡೆಸುತ್ತಿರುವ ಜೆಡಿಎಸ್ ರಾಜ್ಯ ಅಧ್ಯಕ್ಷ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ವಿಶೇಷ ತನಿಖಾ ತಂಡಕ್ಕೆ ದೂರು ನೀಡಿದ್ದು, ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ