ಆರೋಪಿಗಳ ರಕ್ಷಣೆಗೆ ಒತ್ತಡ; ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಪತ್ರ
ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.
ಹಾಸನ: ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಸಂಸದೆ ಮನೇಕಾ ಗಾಂಧಿ (Maneka Gandhi) ಪತ್ರ ಬರೆದಿದ್ದಾರೆ. ಆರೋಪಿಗಳು ಜಿಲ್ಲೆಯಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗ ಕೊಂದು ಹೂತಿದ್ದರು. ಬಳಿಕ ಸತ್ತ ಆನೆಯಿಂದ ದಂತ ಕತ್ತರಿಸಿ ಮಾರಾಟ ಮಾಡಲು ಯತ್ನಿಸುವ ವೇಳೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಆದರೆ ಪ್ರಕರಣದ ಆರೋಪಿಗಳನ್ನ ರಕ್ಷಣೆ ಮಾಡುವಂತೆ ಪ್ರಜ್ವಲ್ ರೇವಣ್ಣ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.
ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿರುವ ಮನೇಕಾ ಗಾಂಧಿ, ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ
ಕೇಸ್ನಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್ಎಫ್ಓ ಪ್ರಯತ್ನ ಮಾಡಿದ್ದಾರೆ. ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಒತ್ತಡ ಹಾಕಿದ್ದಾರೆ. ಆರೋಪಿಗಳು ತಮ್ಮ ಪಾರ್ಟಿಯ ಬೆಂಬಲಿಗರು ಎನ್ನುವ ಕಾರಣಕ್ಕೆ ಅವರ ಪರವಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹಾಕುತ್ತಿದ್ದಾರೆ ಎಂದು ಮನೇಕಾ ಗಾಂಧಿ ದೂರು ನೀಡಿದ್ದಾರೆ. ಹಾಗೇ ತಕ್ಷಣ ಸಿಎಂ ಮಧ್ಯ ಪ್ರವೇಶಿಸಿ ನಿಷ್ಪಕ್ಷಪಾತ ರೀತಿಯಲ್ಲಿ ತನಿಕೆ ನಡೆಸಬೇಕೆಂದು ಪತ್ರ ದಲ್ಲಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು ಪ್ರಕರಣ: ಲವರ್ ಜೊತೆ ಸೇರಿ ಗಂಡನಿಗೆ ಮಸಣದ ಹಾದಿ ತೋರಿದ ಪತ್ನಿ
Published On - 8:55 am, Tue, 19 July 22