ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ; ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಸ್ಪಷ್ಟನೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 25, 2023 | 2:52 PM

ಒಂದು ತಿಂಗಳಿನಿಂದ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ಗಮನಿಸುತ್ತೀದ್ದೀರಾ,  ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈ ಮೂಲಕ ನನ್ನ ಅಣ್ಣನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದೆಲ್ಲವೂ ರಾಜಕೀಯ ಪ್ರೇರಿತವಾದದ್ದು, ಮರ ಕಡಿದಿರುವುದರ ಹಿಂದೆ ನನ್ನ ಕೈವಾಡವಿಲ್ಲ ಎಂದು ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ(Vikram Simha) ಸ್ಪಷ್ಟನೆ ನೀಡಿದ್ದಾರೆ.

ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ; ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಸ್ಪಷ್ಟನೆ
ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ
Follow us on

ಹಾಸನ, ಡಿ.25: ಮರಗಳ ಮಾರಣಹೋಮ‌ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ(Pratap Simha)ತಮ್ಮನ ಹೆಸರು ಪ್ರಸ್ತಾಪ ವಿಚಾರಕ್ಕೆ ಸಂಬಂಧಪಟ್ಟಂತೆ ‘ಮರಗಳ ಮಾರಣಹೋಮಕ್ಕೂ‌ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ(Vikram Simha) ಸ್ಪಷ್ಟನೆ ನೀಡಿದ್ದಾರೆ. ನಾನು ಶುಂಠಿ ಬೆಳೆಯಲು ಜುಲೈ 24 ರಿಂದ ಆ ಭೂಮಿಯನ್ನು ಒಂದು ವರ್ಷಕ್ಕೆ ಅಗ್ರಿಮೆಂಟ್ ಮಾಡಿಕೊಂಡಿದ್ದೇನೆ. ಆದರೆ, ಮರಗಳನ್ನು ಕಡಿದಿರುವುದು ನನಗೆ ಗೊತ್ತಿಲ್ಲ ಎಂದಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿರುವುದರಿಂದ ನನ್ನ ಅಣ್ಣನ ಟಾರ್ಗೆಟ್

ಹಾಸನದಲ್ಲಿ ಮಾತನಾಡಿದ  ಅವರು ‘ಒಂದು ತಿಂಗಳಿನಿಂದ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ಗಮನಿಸುತ್ತೀದ್ದೀರಾ,  ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈ ಮೂಲಕ ನನ್ನ ಅಣ್ಣನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದೆಲ್ಲವೂ ರಾಜಕೀಯ ಪ್ರೇರಿತವಾದದ್ದು, ಮರ ಕಡಿದಿರುವುದರ ಹಿಂದೆ ನನ್ನ ಕೈವಾಡವಿಲ್ಲ. ಮರ ಕಡೆದಿರುವ ವಿಚಾರವೇ ನನಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ:ರಾತ್ರೋರಾತ್ರಿ ವಿಶಾಲ ಕೆರೆಯಲ್ಲಿ ನೂರಾರು ಮರಗಳ ಮಾರಣಹೋಮ.. ಕಣ್ಮುಚ್ಚಿ ಕುಳಿತ ಅಧಿಕಾರಿಗಳ ಧೋರಣೆ ಏನು?

ಮರಗಳ ಕಡಿದಿರುವ ಬಗ್ಗೆ ತನಿಖೆ ಮಾಡಲಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಮರಗಳನ್ನು ಕಡಿದಿರುವ ಬಗ್ಗೆ ತನಿಖೆ ಮಾಡಲಿ. ಕಾಂಗ್ರೆಸ್ ಸೋಶಿಯಲ್ ಮಿಡಿಯಾ ವಿರುದ್ಧ ನಾನು ಲೀಗಲ್ ನೋಟೀಸ್ ನೀಡುತ್ತೇನೆ. ಪ್ರತಾಪ್ ಸಿಂಹ ಅವರನ್ನು ಈಗ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಬಗ್ಗೆ ಬೇಲೂರು ತಹಸೀಲ್ದಾರ್ ಜೊತೆಯೂ ಮಾತನಾಡುತ್ತೇನೆ. ನನ್ನ ವಿರುದ್ಧ ಅರಣ್ಯ ಸಚಿವರಿಗೆ ದೂರು ನೀಡಿರುವ ದೀಪಕ್ ಯಾರು ಎಂದು ನನಗೆ ಗೊತ್ತೇ ಇಲ್ಲ. ನನ್ನ ವಿರುದ್ಧ ಆರೋಪ ಸತ್ಯಕ್ಕೆ ದೂರವಾದದ್ದು, ಕಾಂಗ್ರೆಸ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದು ವಿಕ್ರಮ್ ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ