ಹಾಸನ: ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದು ಕೂಗಿದ ಮುಸ್ಲಿಂ ಯುವಕ ಅರೆಸ್ಟ್

ಮುಸ್ಲಿಂ ಯುವಕ ಬೈಕ್​ನಲ್ಲಿ ಬಂದು ‘ಕುರಾನ್ ಜಿಂದಾಬಾದ್​’ ಎಂದು ಕೂಗಿದ್ದಾನೆ. ಈ ವೇಳೆ ಕಾರ್ಯಕರ್ತರು ಮತ್ತು ಯುವಕನ ನಡುವೆ ವಾಗ್ವಾದವಾಗಿದ್ದು ಬೇಲೂರು ಪೊಲೀಸರು ಠಾಣೆ ಚಾರ್ಜ್ ಮಾಡಿ ಯುವಕನನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಹಾಸನ: ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದು ಕೂಗಿದ ಮುಸ್ಲಿಂ ಯುವಕ ಅರೆಸ್ಟ್
ಘಟನಾ ಸ್ಥಳ
Follow us
ಆಯೇಷಾ ಬಾನು
|

Updated on:Mar 28, 2023 | 2:06 PM

ಹಾಸನ: ಐತಿಹಾಸಿಕ ಬೇಲೂರು ಚನ್ನಕೇಶವ ರಥೋತ್ಸವದ (Beluru Channakeshava Temple) ಸಂದರ್ಭದಲ್ಲಿ ಕುರಾನ್ ಪಠಣಕ್ಕೆ (Quran) ವಿರೋಧ ವ್ಯಕ್ತಪಡಿಸಿ ಇಂದು ಹಿಂದೂಪರ ಸಂಘಟನೆ (Hindu Organizations) ಕಾರ್ಯಕರ್ತರು ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ರಥೋತ್ಸವದ ವೇಳೆ ಕುರಾನ್ ಪಠಣೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ಈ ವೇಳೆ ಮುಸ್ಲಿಂ ಯುವಕ ಬೈಕ್​ನಲ್ಲಿ ಬಂದು ‘ಕುರಾನ್ ಜಿಂದಾಬಾದ್​’ ಎಂದು ಕೂಗಿದ್ದಾನೆ. ಈ ವೇಳೆ ಕಾರ್ಯಕರ್ತರು ಮತ್ತು ಯುವಕನ ನಡುವೆ ವಾಗ್ವಾದವಾಗಿದ್ದು ಬೇಲೂರು ಪೊಲೀಸರು ಠಾಣೆ ಚಾರ್ಜ್ ಮಾಡಿ ಯುವಕನನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈಗ ಐಪಿಸಿ ಸೆಕ್ಷನ್ 107 ರ ಅಡಿಯಲ್ಲಿ ಮುಂಜಾಗ್ರತಾ ಕ್ರಮದ ಬಂಧನ ಮಾಡಿ ತಹಶೀಲ್ದಾರ್ ಮುಂದೆ ಹಾಜರುಪಡಿಸಲಿದ್ದಾರೆ.

ಬೇಲೂರಿನ ಚನ್ನಕೇಶವ ಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಶಾಕಿಬ್ ಹುಸೇನ್(33) ಎಂಬ ಯುವಕ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಸದ್ಯ ಈತನನ್ನು ವಶಕ್ಕೆ ಪಡೆಯಲಾಗಿದೆ. ಈತ ಬೇಲೂರು ಪಟ್ಟಣದ ಮೀನುಮಾರುಕಟ್ಟೆ ಪ್ರದೇಶದ ನಿವಾಸಿ. ಗುಜರಿ ಅಂಗಡಿ ನಡೆಸುತ್ತಿರುವ ಶಾಕಿಬ್ ಹುಸೇನ್ ಪ್ರತಿಭಟನೆ ವೇಳೆ ಮೆರವಣಿಗೆಗೆ ಎದುರಾಗಿ ಬೈಕ್ ನಲ್ಲಿ ತೆರಳುತ್ತಿದ್ದ. ಆಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಕುರಾನ್ ಪಠಣ ರದ್ದಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಅವರಿಗೆ ಕೌಂಟರ್ ನೀಡುವ ಸಲುವಾಗಿ ಏಕಾ ಏಕಿ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಘೋಷಣೆ ಕೂಗುತ್ತಲೆ ಯುವಕನನ್ನ ಅಟ್ಟಿಸಿಕೊಂಡು ಹೋಗಿ ಆತನ ಮೇಲೆ ಹಲ್ಲೆ ಮಾಡಲು ಹೋರಾಟಗಾರರು ಮುಂದಾಗಿದ್ದಾರೆ. ಆಗ ಹೋರಾಟಗಾರರು ಮತ್ತು ಯುವಕನ ನಡುವೆ ಮಾತಿನ ಚಕಮಕಿಯಾಗಿದೆ. ಕೂಡಲೆ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ಅನಾಹುತ ತಪ್ಫಿಸಿದ್ದಾರೆ.

ಸದ್ಯ ಈಗ ಐಪಿಸಿ ಸೆಕ್ಷನ್ 107 ರ ಅಡಿಯಲ್ಲಿ ಮುಂಜಾಗ್ರತಾ ಕ್ರಮದ ಬಂಧನ ಮಾಡಿ ಪೊಲೀಸರು ಯುವಕನ್ನು ಬಂಧಿಸಿ ತಹಶೀಲ್ದಾರ್ ಮುಂದೆ ಹಾಜರುಪಡಿಸಲಿದ್ದಾರೆ. ಏಪ್ರಿಲ್ 4 ರ ಬೇಲೂರು ಜಾತ್ರೆ ವರೆಗೆ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅರಸ್ಟ್ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:02 pm, Tue, 28 March 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್