AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಗೊಂಡನಹಳ್ಳಿಯಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣ; ಐಎಫ್‌ಎಸ್‌ ಅಧಿಕಾರಿ ಅಮಾನತು

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ವೆ ನಂಬರ್‌ 16ರಲ್ಲಿದ್ದ ಕೋಟ್ಯಂತರ ರೂ. ಬೆಲೆಬಾಳುವ 126 ಮರವನ್ನು ಅಕ್ರಮವಾಗಿ ಕಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪ ಹಿನ್ನೆಲೆ ಐಎಫ್‌ಎಸ್‌(IFS) ಅಧಿಕಾರಿ ಮೋಹನ್ ಕುಮಾರ್ ಅವರನ್ನು ಅಮಾನತುಗೊಳಿಸಿ (Suspend) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಆದೇಶಿಸಿದ್ದಾರೆ.

ನಂದಗೊಂಡನಹಳ್ಳಿಯಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣ; ಐಎಫ್‌ಎಸ್‌ ಅಧಿಕಾರಿ ಅಮಾನತು
ಪ್ರಾತಿನಿಧಿಕ ಚಿತ್ರ
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 29, 2023 | 7:57 PM

Share

ಹಾಸನ, ಡಿ.29: ನಂದಗೊಂಡನಹಳ್ಳಿ(Nagondanahalli) ಯಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪ ಹಿನ್ನೆಲೆ ಐಎಫ್‌ಎಸ್‌(IFS) ಅಧಿಕಾರಿ ಮೋಹನ್ ಕುಮಾರ್ ಅವರನ್ನು ಅಮಾನತುಗೊಳಿಸಿ (Suspend) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಆದೇಶಿಸಿದ್ದಾರೆ. ನಿನ್ನೆ(ಡಿ.28) ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಭುಗೌಡ ಬಿರಾದಾರ್​, ಬೇಲೂರು ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಬೇಲೂರು ಉಪ ವಲಯ ಅರಣ್ಯಾಧಿಕಾರಿ ಗುರುರಾಜ್ ಹಾಗೂ ಅರಣ್ಯ ಗಸ್ತುಪಾಲಕ ರಘುಕುಮಾರ್‌ ಸೇರಿ ನಾಲ್ವರನ್ನು ಅಮಾನತುಗೊಳಿಸಿದ್ದರು.

ಘಟನೆ ವಿವರ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ವೆ ನಂಬರ್‌ 16ರಲ್ಲಿದ್ದ ಕೋಟ್ಯಂತರ ರೂ. ಬೆಲೆಬಾಳುವ 126 ಮರವನ್ನು ಅಕ್ರಮವಾಗಿ ಕಡಿದಿದ್ದು, ಬೇರೆಡೆಗೆ ಸಾಗಿಸಲು ಯತ್ನಿಸಿದ್ದರು. ತಹಶೀಲ್ದಾರ್‌ ಮಮತಾ ಅವರ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಹೆಸರು ಸಹ ಕೇಳಿಬಂದಿತ್ತು.

ಇದನ್ನೂ ಓದಿ:ನಂದಗೋಡನಹಳ್ಳಿಯಲ್ಲಿ 126 ಮರ ಕಡಿದ ಕೇಸ್​: ಅರಣ್ಯ ಇಲಾಖೆಯ 4 ಅಧಿಕಾರಿಗಳ ಅಮಾನತು

ಶುಂಠಿ ಬೆಳೆಯಲು ಜಯಮ್ಮ ಎಂಬುವವರಿಂದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರು 3 ಎಕರೆ ಭೂಮಿ ಗುತ್ತಿಗೆ ಪಡೆದಿದ್ದರು. ಶುಂಠಿ ಬೆಳೆಗೆ ಗುತ್ತಿಗೆ ಪಡೆದ ಭೂಮಿ ಜೊತೆಗೆ ಸರ್ಕಾರಿ ಗೋಮಾಳ ಸೇರಿ 12 ಎಕರೆಯಲ್ಲಿದ್ದ ಮರ ಕಡಿದು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಆರೋಪ ಕೇಳಿಬಂದ ಹಿನ್ನಲೆ ಅರೇಹಳ್ಳಿ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇನ್ನು ಕರ್ತವ್ಯ ನಿರ್ಲಕ್ಷ್ಯದ ಮೇಲೆ ಈವರೆಗೆ ಸರ್ಕಾರ ಐವರು ಅಧಿಕಾರಿಗಳನ್ನು ಅಮಾನತು ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Manjunath KB
Manjunath KB
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು