Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan Mixer Blast: ಕೊರಿಯರ್​​ ಮೂಲಕ ಬಂದಿದ್ದ ಹೊಸ ಮಿಕ್ಸರ್​ ನಿಗೂಢ ಸ್ಫೋಟ; ಸ್ಥಳಕ್ಕೆ ಎಸ್ಪಿ ಭೇಟಿ

ಕೊರಿಯರ್​​ ಮೂಲಕ ಬಂದಿದ್ದ ಮಿಕ್ಸರ್​ ನಿಗೂಢವಾಗಿ ಸ್ಫೋಟಗೊಂಡಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ಕೊರಿಯರ್ ಶಾಪ್​ನಲ್ಲಿ ನಡೆದಿದೆ.

Hassan Mixer Blast: ಕೊರಿಯರ್​​ ಮೂಲಕ ಬಂದಿದ್ದ ಹೊಸ ಮಿಕ್ಸರ್​ ನಿಗೂಢ ಸ್ಫೋಟ; ಸ್ಥಳಕ್ಕೆ ಎಸ್ಪಿ ಭೇಟಿ
ಮಿಕ್ಸರ್ ಸ್ಫೋಟ ಸಂಭವಿಸಿದ ಹಾಸನದ ಕೊರಿಯರ್​ ಅಂಗಡಿ
Follow us
TV9 Web
| Updated By: Digi Tech Desk

Updated on:Dec 27, 2022 | 8:34 AM

ಹಾಸನ: ಮಂಗಳೂರಿನ ಕುಕ್ಕರ್​ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ (Hassan) ಕೊರಿಯರ್ (Courier)​ ಮೂಲಕ ಬಂದಿದ್ದ ಮಿಕ್ಸರ್​ ನಿಗೂಢವಾಗಿ ಸ್ಫೋಟಗೊಂಡಿರುವ (Blast) ಘಟನೆ ಇಂದು (ಡಿ.26) ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಶಾಪ್​ನಲ್ಲಿ ನಡೆದಿದೆ. ಕೊರಿಯರ್​​ ಮೂಲಕ ಬಂದಿದ್ದ ಹೊಸ ಮಿಕ್ಸರ್​​ ಟೆಸ್ಟ್​ ಮಾಡುತ್ತಿರುವಾಗ  ಸ್ಫೋಟಗೊಂಡಿದೆ. ಕೊರಿಯರ್ ಮಾಲೀಕ ಶಶಿಗೆ ಗಂಭೀರ ಗಾಯಗಳಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ.

ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ

ಮಂಗಳೂರು ಬ್ಲಾಸ್ಟ್ ಕೇವಲ ರಾಜ್ಯ ಮಾತ್ರವಲ್ಲ ದೇಶದಲ್ಲಿ ಸುದ್ದಿಯಾಗಿದೆ. ಆ ಸುದ್ದಿ ಇನ್ನು ಮಾಸುವ ಮುನ್ನವೇ ಇಲ್ಲಿ ನಿಗೂಢವಾಗಿ ಮಿಕ್ಸರ್​ ಸ್ಫೋಟಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಹಾಸನ ಪೊಲೀಸ್​ ವರಿಷ್ಠಾಧಿಕಾರಿ (ಎಸ್​ಪಿ) ಹರಿರಾಮ್ ದೌಡಾಯಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಾಂಬ್ ಸ್ಫೋಟ ನೆನಪಿಸಿಕೊಂಡ ಬೆಂಗಳೂರು ಪೊಲೀಸ್ ಕಮಿಷನರ್: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬಿಗಿ ಬಂದೋಬಸ್ತ್

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್​ನಲ್ಲಿ ಸಂಜೆ 7-30 ಕ್ಕೆ ಮಿಕ್ಸಿ ಬ್ಲಾಸ್ಟ್ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಆಫೀಸ್​ನಲ್ಲಿ ಕೆಲಸ ಮಾಡುವ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಗಯಾಳುಗೆ ಯಾವುದೇ ಪ್ರಾಣಾಪಾಯ ಇಲ್ಲ. ಮಿಕ್ಸಿಯ ಬ್ಲೇಡ್ ತಾಗಿ ಅವರಿಗೆ ಪೆಟ್ಟಾಗಿದೆ. ಬ್ಲಾಸ್ಟ್​ಗೆ ಬೇರೆ ಏನೂ ಇದೆ ಎಂದು ಕಂಡು ಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ನವರು ಬರುತ್ತಿದ್ದು, ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತೆ ಎಂದು ಹೇಳಿದರು.

ಇದನ್ನೂ ಓದಿ:  ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕಂದಕ: ಸಂಚಾರಕ್ಕೆ ಸಂಚಕಾರ, 3 ತಿಂಗಳು ಕಳೆದ್ರೂ ಸಿಗದ ಪರಿಹಾರ

ಕೊರಿಯರ್ ಎಲ್ಲಿಂದ ಬಂತು ಎನ್ನುವ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕ್ಯೂಟ್ ಆಗಿದೆಯೋ ಬೇರೆ ಏನಾದರು ಇದೆಯೋ ಪರಿಶೀಲನೆ ನಡೆಸುತ್ತೇವೆ. ಎಲ್ಲಿಂದ ಯಾರಿಗೆ ಕೊರಿಯರ್ ಬಂದಿತ್ತು ಎಂದು ತನಿಖೆ ಬಳಿಕ ಗೊತ್ತಾಗುತ್ತೆ. ಸದ್ಯಕ್ಕೆ ಯಾವುದೇ ಆತಂಕ ಇಲ್ಲ. ಎಫ್.ಎಸ್ ಎಲ್​ನವರು ಬಂದು ವೈಜ್ಞಾನಿಕ ಸಾಕ್ಷ್ಯ ಪಡೆದ ಬಳಿಕ ಎಲ್ಲವೂ ಗೊತ್ತಾಗುತ್ತೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:30 pm, Mon, 26 December 22