ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ
ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ
Follow us
TV9 Web
| Updated By: preethi shettigar

Updated on:Nov 27, 2021 | 2:13 PM

ಹಾಸನ: ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿರುವುದಾಗಿ ಯುವತಿ ವಿರುದ್ಧ ಆರೋಪ ಮಾಡಿದ ಪ್ರೇಮಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈಗ ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟುಹಬ್ಬಕ್ಕೆ ತಾನೇ ಕೇಕ್‌ ಕಟ್ ಮಾಡಿಸುತ್ತಿದ್ದೆ. ತಾನೇ ಆಕೆಗೆ ಮೊದಲ ಶುಭಾಶಯ ಹೇಳುತ್ತಿದ್ದೆ. ನೆನ್ನೆ ಆಕೆ ಹುಟ್ಟುಹಬ್ಬದಂದು ಆಕೆ ಸಿಕ್ಕಿಲ್ಲ ಎಂದು ನೊಂದು ಜೀವಿತ್ ವಿಷ ಸೇವಿಸಿದ್ದಾನೆ. ಸದ್ಯ ಅಸ್ವಸ್ಥಗೊಂಡಿರುವ‌ ಪ್ರೇಮಿ ಜೀವಿತ್​ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಯುವತಿಗೆ ತನ್ನನ್ನು ಮದುವೆಯಾಗು ಎಂದು ಜೀವಿತ್ ಪೀಡಿಸುತ್ತಿರುವುದಾಗಿ ಆರೋಪಿಸಿ ಯುವತಿ ಪೋಷಕರು ದೂರು ನೀಡಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದೂರು ಸ್ವೀಕರಿಸಿ ಗಂಡಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ ಕಲಬುರಗಿ ಗ್ರಾಮೀಣ ಠಾಣೆ ಕಾನ್ಸ್​ಟೇಬಲ್ ಶ್ರೀನಾಥ್(25) ಕಲಬುರಗಿ ತಾಲೂಕಿನ ಸಾವಳಗಿ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಶ್ರೀನಾಥ್ ಅವರ ವಿವಾಹ ಡಿಸೆಂಬರ್ 1ಕ್ಕೆ ನಿಶ್ಚಯವಾಗಿತ್ತು. ಮದುವೆಗೆ 4 ದಿನ ಬಾಕಿಯಿರುವಾಗಲೇ ಶವವಾಗಿ ಪತ್ತೆಯಾಗಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ ಒಂದರಂದು ಕಲಬುರಗಿ ನಗರದಲ್ಲಿ ವಿವಾಹ ನಿಶ್ಚಯವಾಗಿತ್ತು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

Published On - 1:14 pm, Sat, 27 November 21

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ