ನಮ್ಮ ತೆರಿಗೆ ನಮ್ಮ ಹಕ್ಕು: ಕೇಂದ್ರ ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ, ನಮ್ಮ ತೆರಿಗೆ ನಮಗೆ ಕೊಡಿ ಎಂದು ದೊಡ್ಡ ಹೋರಾಟಕ್ಕೆ ಸಜ್ಜಾಗುತ್ತೇವೆ. ಕರ್ನಾಟಕ ಭಾರತದ ಒಕ್ಕೂಟದಲ್ಲಿ ಇದೇ ಅನ್ನುವುದನ್ನು ಕೇಂದ್ರ ಸರ್ಕಾರ ಮರೆಯಬಾರದು, ಯಾರೂ ಮರೆಯಬಾರದು. ನಮಗೆ ಹೆಚ್ಚು ಅನುದಾನ ಕೊಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಸುತ್ತೇವೆ ಎಂದಿದ್ದಾರೆ.  

ನಮ್ಮ ತೆರಿಗೆ ನಮ್ಮ ಹಕ್ಕು: ಕೇಂದ್ರ ಸರ್ಕಾರ ವಿರುದ್ಧ ಹೋರಾಟಕ್ಕೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 08, 2024 | 8:21 PM

ಹಾಸನ, ಫೆಬ್ರವರಿ 8: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ತಾಳಿದೆ ಎಂದು ಅದರ ವಿರುದ್ಧ ದೆಹಲಿಯ ಜಂತರ್ ಮಂತರ್​ನಲ್ಲಿ ರಾಜ್ಯ ಸರ್ಕಾರ (Karnataka Government) ಬೃಹತ್ ಪ್ರತಿಭಟನೆ ಮಾಡಿತ್ತು. ಈ ವಿಚಾರ ಕಾಂಗ್ರೆಸ್​ ಮತ್ತು ಬಿಜೆಪಿ ನಡೆವೆ ವಾದ-ಪ್ರತಿವಾದಕ್ಕೂ ಕಾರಣವಾಗಿತ್ತು. ಅನುದಾನ ಹಂಚಿಕೆ ವಿಚಾರವಾಗಿ ಸದ್ಯ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಪ್ರತಿಭಟನೆಗೆ ಸಜ್ಜಾಗುತ್ತಿರುವುದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಮುಂದೆ ಹೋರಾಟ ಮಾಡಲಿದೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ, ನಮ್ಮ ತೆರಿಗೆ ನಮಗೆ ಕೊಡಿ ಎಂದು ದೊಡ್ಡ ಹೋರಾಟಕ್ಕೆ ಸಜ್ಜಾಗುತ್ತೇವೆ. ಕರ್ನಾಟಕ ಭಾರತದ ಒಕ್ಕೂಟದಲ್ಲಿ ಇದೇ ಅನ್ನುವುದನ್ನು ಕೇಂದ್ರ ಸರ್ಕಾರ ಮರೆಯಬಾರದು, ಯಾರೂ ಮರೆಯಬಾರದು ಎಂದು ಹೇಳಿದ್ದಾರೆ.

ನೀವು ತಾರತಮ್ಯ ಮಾಡಬೇಡಿ, ನಮ್ಮ ಹಣವನ್ನು ತೆಗೆದುಕೊಂಡು ಹೋಗಿ ಉತ್ತರ ಭಾರತದ ಯಾವುದೋ ರಾಜ್ಯಗಳಿಗೆ ಕೊಡುವ ಕೆಲಸ ಮಾಡಬೇಡಿ. ನಮಗೆ ಹೆಚ್ಚು ಅನುದಾನ ಕೊಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಸುತ್ತೇವೆ ಎಂದಿದ್ದಾರೆ.

ಸರ್ಕಾರ ಮಾಡುವ ಹೋರಾಟಗಳು ರಾಜಕೀಯ ಪ್ರೇರಿತ

ಸರ್ಕಾರ ಮಾಡುವ ಹೋರಾಟಗಳು ರಾಜಕೀಯ ಪ್ರೇರಿತವಾದವು. ಇವತ್ತು ಕರ್ನಾಟಕ ಸರ್ಕಾರದ ಜೊತೆ ಯಾರೂ ಇಲ್ಲ. ಯಾವ ಕನ್ನಡಪರ, ರೈತಪರ, ದಲಿತಪರ ಚಳುವಳಿಗಾರರು ಇಲ್ಲ ಅವರಿಗೆ ಗೊತ್ತಾಗಿದೆ. ಚುನಾವಣೆ ವೇಳೆ ಏನು ಆಶ್ವಾಸನೆ ನೀಡಿದರು. ನಾವು ನಿಷ್ಠೆಯಿಂದ, ಬದ್ದತೆಯಿಂದ, ಕನ್ನಡ ಕಳಕಳಿಯಿಂದ ಕೆಲಸ ಮಾಡುತ್ತೇವೆ ಅಂತ ಸಿದ್ದರಾಮಯ್ಯ ಅವರು ಮಾತು ಕೊಟ್ಟಿದ್ದರು. ಆದರೆ ಇವತ್ತು ಸಿದ್ದರಾಮಯ್ಯ ಅವರು ಮಾತು ತಪ್ಪಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇಂದ್ರದ ಸ್ಪಂದನೆ ಸಿಗುವ ಖಾತ್ರಿಯಿಲ್ಲ, ಆದರೆ ರಾಜ್ಯಕ್ಕಾಗುತ್ತಿರುವ ಅನ್ಯಾಯ ಮುಂದುವರಿಯಬಾರದು: ಸಿದ್ದರಾಮಯ್ಯ

ನಾವು ಮಾಡಬೇಕಾದ ಹೋರಾಟ ಸರ್ಕಾರ ಮಾಡುತ್ತಿದೆ ಅಂದರೆ ಕನ್ನಡಪರ ಸಂಘಟನೆಗಳು ಸಿದ್ದರಾಮಯ್ಯ ಪರ ನಿಂತಿಲ್ಲ. ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇವತ್ತು ಹೋರಾಟಕ್ಕೆ ಇಳಿದಿದ್ದಾರೆ. ಈ ಹೋರಾಟವನ್ನು ಕರವೇ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ. ಕೇಂದ್ರದ ಅನುದಾನದಲ್ಲಿ ಅನ್ಯಾಯ ಆಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕವೆ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಎಂದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕಚೇರಿಯೊಳಗೆ ನುಗ್ಗಲು, ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದ ಅಶೋಕ್​, ವಿಜಯೇಂದ್ರ

ನಮಗೆ ಕೊಡುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಆಗಿದೆ. ಕರ್ನಾಟಕವನ್ನು ಕೇವಲವಾಗಿ ಕೇಂದ್ರ ಸರ್ಕಾರ ನೋಡುತ್ತಿದೆ. ನಾವು ಹಿಂದಿನಿಂದಲೂ ಹೋರಾಟವನ್ನು ಮಾಡಿಕೊಂಡು ಬಂದಿದ್ದೇವೆ. ಈಗ ಕಾಂಗ್ರೆಸ್‌ನವರು, ಸಿದ್ದರಾಮಯ್ಯ ಅವರ ಸರ್ಕಾರ ಕಾಣುತ್ತಿದ್ದಾರೆ. ಇವತ್ತು ದೆಹಲಿಗೆ ಹೋಗಿ ಒಂದು ದಿನದ ಹೋರಾಟ ಮಾಡಿ ವಾಪಾಸ್ ಬಂದಿದ್ದಾರೆ, ಅಲ್ಲಿಗೆ ಮುಗಿಯಿತು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:18 pm, Thu, 8 February 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ