AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕತಿರುಪತಿ ದೇಗುಲದಲ್ಲಿ ಜಾತ್ರೆ ವೇಳೆ ಭಾನುವಾರ ರಾತ್ರಿ ಆಹಾರ ಸೇವಿಸಿದ್ದ 50 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಅದೃಷ್ಟವಶಾತ್ 20 ಮಂದಿ ಚೇತರಿಸಿದ್ದು, 30ಕ್ಕೂ ಹೆಚ್ಚು ಮಂದಿ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಹಾಸನ: ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಅಸ್ವಸ್ಥರಿಗೆ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಜುನಾಥ ಕೆಬಿ
| Updated By: Ganapathi Sharma|

Updated on:Jul 15, 2025 | 9:36 AM

Share

ಹಾಸನ, ಜುಲೈ 15: ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವೆಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ. ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಈ ದೇಗುಲ ಚಿಕ್ಕ ತಿರುಪತಿ ಇಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದರು.

ಖಾಸಗಿ ಸಂಸ್ಥೆಯೊಂದರ ವತಿಯಿಂದ ಭಕ್ತರಿಗೆ ಮೊಸರನ್ನ ಹಾಗೂ ಬಿಸಿಬೇಳೆ ಬಾತ್ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30 ರಿಂದ ಆಹಾರ ವಿತರಣೆ ಮಾಡಲಾಗಿತ್ತು.

ಜಾತ್ರೆಯಲ್ಲಿ ಆಹಾರ ಸೇವಿಸಿದ ಸುಮಾರು 50ಕ್ಕೂ ಹೆಚ್ಚು ಭಕ್ತರಲ್ಲಿ ಸೋಮವಾರ ಮುಂಜಾನೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ
Image
ಕೂಡಲಸಂಗಮ ಪೀಠಕ್ಕೆ ಬೀಗ, ಈವರೆಗೆ ಏನೇನಾಯ್ತು? ಇಲ್ಲಿದೆ ಸಮಗ್ರ ವಿವರ
Image
ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗ
Image
ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ
Image
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ

ಅಸ್ವಸ್ಥರಾದವರ ಪೈಕಿ 20 ಮಂದಿ ಗುಣಮುಖರಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಭಕ್ತರಿಗೆ ನೀಡಿದ್ದ ಆಹಾರದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ. ತಕ್ಷಣವೇ ಚಿಕಿತ್ಸೆ ದೊರೆತಿದ್ದರಿಂದ ಅನೇಕ ಭಕ್ತರು ಅಪಾಯದಿಂದ ಪಾರಾಗಿದ್ದಾರೆ.

ರಾಜ್ಯದಲ್ಲಿ ಹಲವು ದೇಗುಲಗಳಲ್ಲಿ ಪ್ರಸಾದ ಅಥವಾ ಆಹಾರ ಸೇವಿಸಿ ಭಕ್ತರು ಅಸ್ವಸ್ಥರಾದ ಮತ್ತು ಮೃತಪಟ್ಟ ಘಟನೆಗಳು ಈ ಹಿಂದೆ ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಚಿಕ್ಕ ತಿರುಪತಿ ಘಟನೆ ಭಕ್ತರಲ್ಲಿ ತೀವ್ರ ಆತಂಕ ಮೂಡಿಸಿತ್ತು.

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕರ್ನಾಟಕದ ಈ ಭಾಗದಿಂದ ಸಿಕಂದರಾಬಾದ್, ಹೈದರಾಬಾದ್​ಗೆ ವಿಶೇಷ ರೈಲು

2018 ರಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿದ್ದ ನೂರಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದರು. 17 ಜನರು ಸಾವನ್ನಪ್ಪಿದ್ದರು. ಆದರೆ, ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಘಟನೆಯಲ್ಲಿ ಪ್ರಸಾದಕ್ಕೆ ಉದ್ದೇಶಪೂರ್ವಕ ವಿಷ ಬೆರೆಸಿರುವುದು ತನಿಖೆಯಲ್ಲಿ ದೃಢಪಟ್ಟಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:31 am, Tue, 15 July 25