ಹಾಸನ: 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ; ಕೆರೆಗೆ ಹರಿದ ಗೋವುಗಳ ರಕ್ತ

ರಾಜ್ಯದ ಹಲವೆಡೆ ಜಾನುಮಾರುಗಳ ಅಕ್ರಮ ವಧೆ ಹಾಗೂ ಅಕ್ರಮ ಗೋಮಾಂಸ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಅಕ್ರಮ ಗೋಮಾಂಸ ಮಾರಾಟಕ್ಕಾಗಿ 60ಕ್ಕೂ ಹೆಚ್ಚು ಜಾನುವಾರಗಳ ಮಾರಾಣಹೋಮ ಮಾಡಿರುವ ಪ್ರಕರಣ ಪೊಲೀಸರ ದಾಳಿಯಿಂದ ತಿಳಿದುಬಂದಿದೆ.

ಹಾಸನ: 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ; ಕೆರೆಗೆ ಹರಿದ ಗೋವುಗಳ ರಕ್ತ
ಹಾಸನದ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ; ಕೆರೆಗೆ ಹರಿದ ಗೋವುಗಳ ರಕ್ತ (ಸಾಂದರ್ಭಿಕ ಚಿತ್ರ)
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on: Mar 29, 2024 | 9:51 AM

ಹಾಸನ, ಮಾ.29: ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ (Cattle Slaughter) ನಡೆಸಿದ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ.

ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

ಕೆರೆಗೆ ಹರಿದ ಗೋವುಗಳ ರಕ್ತ!

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋವುಗಳ ಮಾರಣಹೋಮ ನಡೆದಿದೆ. ಗೋವುಗಳನ್ನು ಹತ್ಯೆ ಮಾಡಿದ ನಂತರ ಗೋಹಂತಕರು ಗೋವುಗಳ ರಕ್ತವನ್ನು ಪಕ್ಕದ ಕೆರೆಗೆ ಹರಿಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಗೋಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ