ಹಾಸನ, ಮಾ.29: ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ (Cattle Slaughter) ನಡೆಸಿದ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋವುಗಳ ಮಾರಣಹೋಮ ನಡೆದಿದೆ. ಗೋವುಗಳನ್ನು ಹತ್ಯೆ ಮಾಡಿದ ನಂತರ ಗೋಹಂತಕರು ಗೋವುಗಳ ರಕ್ತವನ್ನು ಪಕ್ಕದ ಕೆರೆಗೆ ಹರಿಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಗೋಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ