ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ

ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗಿದೆ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಶ್ರೇಯಸ್ ಪಟೇಲ್​ ಅವರಿಗೆ ಘೋಷಿಸಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ದಿ.ಜಿ.ಪುಟ್ಟಸ್ವಾಮಿಗೌಡ ಅವರ ಪುತ್ರಿ ಪಿ ರಾಜೇಶ್ವರಿ ಅವರು ಸೋದರಳಿಯ ಶ್ರೇಯಸ್ ವಿರುದ್ಧವೇ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ
ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on: Mar 17, 2024 | 3:28 PM

ಹಾಸನ, ಮಾ.17: ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ (Hassan) ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಸನ ಕ್ಷೇತ್ರದಲ್ಲಿ ಮಾಜಿ ಸಂಸದ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ (Shreyas Patel)​ ಅವರಿಗೆ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿರುವ ಪುಟ್ಟಸ್ವಾಮಿಗೌಡ ಪುತ್ರಿ ಪಿ ರಾಜೇಶ್ವರಿ (P Rajeshwari) ಅವರು ಸೋದರಳಿಯ ಶ್ರೇಯಸ್ ವಿರುದ್ಧವೇ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜೇಶ್ವರಿ ಅವರು ಕಾಂಗ್ರೆಸ್ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಸಿದ್ದರೂ ಕೈತಪ್ಪಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲೂ ಹಾಸನ ಕ್ಷೇತ್ರದ ಟಿಕೆಟ್​ಗಾಗಿ ಲಾಭಿ ನಡೆಸಿದ್ದರು. ಇನ್ನೊಂದೆಡೆ, ಇವರ ಸೋದರಳಿ ಶ್ರೇಯಸ್ ಪಟೇಲ್ ಕೂಡ ಟಿಕೆಟ್​ಗಾಗಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಶ್ರೇಯಸ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಹಾಸನ ಕ್ಷೇತ್ರದ ಗೆಲುವಿಗೆ ನಿರ್ಣಾಯಕವಾಗಿರುವ ಕಡೂರಿನಲ್ಲಿ ದಳಪತಿ ದೇವೇಗೌಡ ರಣತಂತ್ರ

ಪದೇ ಪದೇ ಕಾಂಗ್ರೆಸ್ ಹೈ ಕಮಾಂಡ್​ನಿಂದ ಅನ್ಯಾಯವಾಗುತ್ತಿದೆ ಎಂದು ಆಕ್ರೋಶಗೊಂಡಿರುವ ರಾಜೇಶ್ವರಿ ಅವರು ಹಾಸನದಲ್ಲಿ ಪಕ್ಷೇತರರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಆ ಮೂಲಕ ಸೋದರಳಿಯನ ವಿರುದ್ದವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ರಾಜೇಶ್ವರಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಬೆಂಬಲಿಗರ ಸಭೆ ಕರೆದು ತೀರ್ಮಾನ ಮಾಡಲು ರಾಜೇಶ್ವರಿ ಮತ್ತು ಕುಟುಂಬಸ್ಥರು ಮುಂದಾಗಿದ್ದಾರೆ. ಇದು ಸಹಜವಾಗಿ ಜಿಲ್ಲಾ ಕಾಂಗ್ರೆಸ್, ರಾಜ್ಯ ಹಾಗೂ ಹೈಕಮಾಂಡ್ ನಾಯಕರಿಗೆ ತಲೆಬಿಸಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ