ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 05, 2023 | 3:25 PM

ಮೈಸೂರಿನ ಬಳ್ಳೆ ಸಾಕಾನೆ ಶಿಭಿರಕ್ಕೆ ಮೃತ ಅರ್ಜುನ ಆನೆ(Arjuna Elephant)ಯನ್ನು ಕೊಂಡೊಯ್ಯಲು ಮಾವುತರು ಒತ್ತಾಯಿಸಿದರೆ, ಇತ್ತ ಸ್ಥಳೀಯರು ಸೂಕ್ತ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಿ ಸ್ಮಾರಕ ಮಾಡಲು ಆಗ್ರಹಿಸಿದ್ದರು. ಇದಕ್ಕೆ ಒಪ್ಪದ ಅರಣ್ಯ ಅಧಿಕಾರಿಗಳು, ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್
ಹಾಸನ ಲಾಠಿ ಚಾರ್ಜ್​
Follow us on

ಹಾಸನ, ಡಿ.05: ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಮೈಸೂರಿನ ಬಳ್ಳೆ ಸಾಕಾನೆ ಶಿಭಿರಕ್ಕೆ ಮೃತ ಅರ್ಜುನ ಆನೆ(Arjuna Elephant)ಯನ್ನು ಕೊಂಡೊಯ್ಯಲು ಮಾವುತರು ಒತ್ತಾಯಿಸಿದರೆ, ಇತ್ತ ಸ್ಥಳೀಯರು ಸೂಕ್ತ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಿ ಸ್ಮಾರಕ ಮಾಡಲು ಆಗ್ರಹಿಸಿದ್ದರು. ಇದಕ್ಕೆ ಒಪ್ಪದ ಅರಣ್ಯ ಅಧಿಕಾರಿಗಳು, ಮೃತಪಟ್ಟ ಸ್ಥಳವಾದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿಯೇ ಅಂತ್ಯಕ್ರಿಯೆ ನಡೆಸಲು ಜೆಸಿಬಿ ಮೂಲಕ ಗುಂಡಿ ತೆಗೆಸುತ್ತಿದ್ದಾರೆ.

ಅಗಲಿದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಗೆ ಅಂತಿಮ ವಿದಾಯ; ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ

ಇನ್ನು ಕಣ್ಣೀರಿಡುತ್ತಲೇ ಮೃತ ಅರ್ಜುನ ಆನೆಗೆ ಮಾವುತ ವಿನು ಪೂಜೆ ಸಲ್ಲಿಸಿ, ದುಃಖ ತುಂಬಿದ ಮನದಲ್ಲೇ ಪ್ರದಕ್ಷಿಣಿ ಹಾಕಿದ್ದಾರೆ.ಜೊತೆಗೆ  ಅರ್ಜುನನ ಕಳೆದುಕೊಂಡ ದುಃಖದಲ್ಲೇ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಹಾಸನ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಿದ್ದು, ಪೊಲೀಸ್ ಇಲಾಖೆಯ ಸಿಬ್ಬಂದಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತಾ, ಡಿಸಿಎಫ್ ಮೋಹನ್ ಕುಮಾರ್ ಸಮ್ಕುಖದಲ್ಲಿ ಗೌರವಾರ್ಪಣೆ ಸಲ್ಲಿಸಿದರು. ಈ ವೇಳೆ ರಾಜ್ಯ ಅರಣ್ಯ ಇಲಾಖೆ ಭಾಗವಾಗಿ ಅಂತ್ಯಕ್ರಿಯೆಯಲ್ಲಿ ಸಹಾಯಕ ಅರಣ್ಯ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ತ ಹಾಜರಿದ್ದರು.

ಇದನ್ನೂ ಓದಿ:ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ ಬಗ್ಗೆ ನಿಮ್ಮಗೆಷ್ಟು ಗೊತ್ತು? ಇಲ್ಲಿದೆ ಮಾಜಿ ಕ್ಯಾಪ್ಟನ್​ನ ಹೆಜ್ಜೆ ಗುರುತು

ಘಟನೆ ವಿವರ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ, ಇಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಅರ್ಜುನ ಮೃತಪಟ್ಟಿದೆ ಎನ್ನಲಾಗಿತ್ತು. ಆದರೆ, ಅರ್ಜುನ ಸಾವಿನ ಬಗ್ಗೆ ಮಾವುತರೊಬ್ಬರು ಹೇಳಿದ ಪ್ರಕಾರ ‘ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ, ಇದೇ ವೇಳೆ ಒಂಟಿ ಸಲಗ ದಾಳಿ ಮಾಡಿದ್ದರಿಂದ ಸಾವಾಗಿದೆ ಎಂದಿದ್ದರು. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಆ ಕಾಡಾನೆ ಹುಚ್ಚನಂತೆ ಆಡುತ್ತಿದೆ ಎಂಬ ಮಾಹಿತಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಪ್ಪು ನಿರ್ಧಾರ ಮಾಡಿದ್ದಾರೆ ಎಂಬ ಬಗ್ಗೆ ತಜ್ಞರು ಟೀಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Tue, 5 December 23