ಕೊಲೆ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್.. ಎಲ್ಲಿ?

  • Updated On - 7:57 am, Tue, 1 September 20
ಕೊಲೆ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್.. ಎಲ್ಲಿ?

ಹಾಸನ: ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನದಾಳಿ ನಡೆಸಿದ್ದಾರೆ. ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಮೇಲೆ ಫೈರಿಂಗ್ ಮಾಡಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಣ್ಣೇನಹಳ್ಳಿಯಲ್ಲಿ ಕೊಲೆ ಆರೋಪಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ಬೇಲೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ.

ಇನ್ಸ್‌ಪೆಕ್ಟರ್‌ಗೆ ಚಾಕುವಿನಿಂದ ಅಟ್ಯಾಕ್ ಮಾಡಿದ್ದ. ಶರಣಾಗುವಂತೆ ಆರೋಪಿಗೆ ಸೂಚಿಸಿದರೂ ಕೇಳದ ಹಿನ್ನೆಲೆಯಲ್ಲಿ ಸಿಪಿಐ ಸಿದ್ದರಾಮಪ್ಪ ಆರೋಪಿ ಕಾಲಿಗೆ ಗುಂಡು ಹಾರಿಸಿದ್ರು. ನಂತರ ವಶಕ್ಕೆ ಪಡೆದ್ರು. ಹಾಸನದ ಹಿಮ್ಸ್‌ನಲ್ಲಿ ಗಾಯಾಳು ಇನ್ಸ್‌ಪೆಕ್ಟರ್ ವಿನಯ್ ಹಾಗೂ ಆರೋಪಿ ಪ್ರಸಾದ್ ಅಲಿಯಾಸ್ ಗುಂಡಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಹಾಸನ: ವೃದ್ಧ ದಂಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಕಿಡಿಗೇಡಿಗಳು, ಯಾಕೆ?

Published On - 7:55 am, Tue, 1 September 20

Click on your DTH Provider to Add TV9 Kannada