ಪ್ರಜ್ವಲ್ ಪೆನ್​ಡ್ರೈವ್ ಹಂಚಿಕೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 12, 2024 | 11:07 PM

ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ JMFC ಕೋರ್ಟ್ ಜಡ್ಜ್ ಆದೇಶಿಸಿದ್ದಾರೆ.

ಪ್ರಜ್ವಲ್ ಪೆನ್​ಡ್ರೈವ್ ಹಂಚಿಕೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಆರೋಪಿಗಳಾದ ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ
Follow us on

ಹಾಸನ, ಮೇ.12: ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ JMFC ಕೋರ್ಟ್ ಜಡ್ಜ್ ಆದೇಶಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾಗಿರುವ ಲಿಖಿತ್​ಗೌಡ ಮತ್ತು ಚೇತನ್ ಅವರ ಮೇಲೆ ಏಪ್ರಿಲ್ 23ರಂದು ಹಾಸನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಹಸ್ತಾಂತರ ಮಾಡಿಕೊಂಡು SIT ಪೊಲೀಸರು ತನಿಖೆ ನಡೆಸುತ್ತಿದ್ದು, ಇಂದು ಬೆಳಗ್ಗೆ ಲಿಖಿತ್​ಗೌಡ, ಚೇತನ್​ನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿ, ಸ್ಥಳ ಮಹಜರು ನಂತರ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಇದೀಗ ಇಬ್ಬರು ಆರೋಪಿಗಳಿಗೆ ಮೇ.25 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಡಿಯೋ ವೈರಲ್ ಕೇಸ್ ಸಂಬಂಧ ಮತ್ತಿಬ್ಬರು ವಶಕ್ಕೆ

ಇನ್ನು ರಾಜ್ಯವೇ ಬೆಚ್ಚಿ ಬೀಳಿಸೊ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಇದೇ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣದ ಬೆನ್ನತ್ತಿರುವ SIT ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿ ಚೇತನ್ ಸೇರಿದಂತೆ ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನಲೆ ಹಾಸನ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿರುವ SIT, 20ಕ್ಕೂ ಹೆಚ್ಚು SIT ಅಧಿಕಾರಿಗಳ ತಂಡದಿಂದ ತನಿಖೆ ಶುರುವಾಗಿದೆ.

ಇದನ್ನೂ ಓದಿ:ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು: ಸಂತ್ರಸ್ತೆಗೆ ಬೆದರಿಕೆ, ಮಹಿಳಾ ಆಯೋಗದಿಂದ ಬಹಿರಂಗ

ಈ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದರು. ಈ ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಕೂಡ ಆಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Sun, 12 May 24