ಪುತ್ರ ಪ್ರಜ್ವಲ್​​ ವಿರುದ್ಧದ ಆರೋಪದ ಕುರಿತು ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಹೇಳಿದ್ದಿಷ್ಟು

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ಇದೀಗ, ಪುತ್ರನ ವಿರುದ್ಧ ಕುರಿತು ಕೇಳಿಬಂದಿರುವ ಆರೋಪಕ್ಕೆ ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪುತ್ರ ಪ್ರಜ್ವಲ್​​ ವಿರುದ್ಧದ ಆರೋಪದ ಕುರಿತು ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಹೇಳಿದ್ದಿಷ್ಟು
ಮಾಜಿ ಸಚಿವ ಹೆಚ್​​ಡಿ ರೇವಣ್ಣ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on: May 22, 2024 | 12:47 PM

ಹಾಸನ, ಮೇ 22: ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಪುತ್ರ, ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ (Pen Drive) ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ತಮ್ಮ ಮಗನ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ತಂದೆ, ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ವಿಚಾರ ಏನು ಗೊತ್ತಿಲ್ಲ. ನಾನು ಯಾರ ಬಗ್ಗೆ ಮಾತನಾಡಲ್ಲ ನನಗೇನೂ ಗೊತ್ತಿಲ್ಲ. ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ವಿಚಾರವಾಗಿ ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು, ನಾನು ಯಾರ ಬಗ್ಗೆಯೂ ಮಾತನಾಡಲ್ಲ. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಪ್ರಜ್ವಲ್‌ ರೇವಣ್ಣ ವಿಚಾರ ಏನು ಗೊತ್ತಿಲ್ಲ ಎಂದರು.

ಇದನ್ನೂ ಓದಿ: ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕುಮಾರಸ್ವಾಮಿ

ಹಾಸನ ಜಿಲ್ಲೆಯ ನಮಗೆ ಶಕ್ತಿ ಕೊಟ್ಟಿದ್ದಾರೆ. 25 ವರ್ಷ ನಾನು ಶಾಸಕನಾಗಿ ಇಲ್ಲಿ ಕೆಲಸ ಮಾಡಿದ್ದೇನೆ. ಯಾರೂ ಧೃತಿಗೆಡುವುದು ಬೇಡ. ಇಂದು (ಮೇ 22) ಜಿಲ್ಲೆಯ ನಾಲ್ಕು ಶಾಸಕರ ಜೊತೆ ಜೊತೆ ಚರ್ಚಿಸುತ್ತೇನೆ. ಪ್ರಕರಣ ಕೋರ್ಟ್​​ನಲ್ಲಿರುವುದರಿಂದ ಏನೂ ಹೇಳಲ್ಲ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಾನು ಅದರ ಬಗ್ಗೆ ಏನೂ ಮಾತನಾಡಲ್ಲ ಎಂದು ಹೇಳಿದರು.

ಈ ವೇಳೆ ಬೆಂಬಲಿಗರು ಜೈಕಾರ ಹಾಕುತ್ತಿದ್ದಂತೆ ಹೆಚ್​​ಡಿ ರೇವಣ್ಣ ಅವರು ಭಾವುಕರಾದರು.

ದೇವಸ್ಥಾನಗಳಿಗೆ ಭೇಟಿ

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಅಪಹರಣ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ದಿನದಿಂದ ಇಂದಿನವರೆಗೂ ಹಾಸನ, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಮೇ 22) ಸಹ ಹೊಳೆನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ ಹೆಚ್​ಡಿ ರೇವಣ್ಣ ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್