ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಜ್ವಲ್‌ ರೇವಣ್ಣ, ‘ ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ
ಪ್ರಜ್ವಲ್​ ರೇವಣ್ಣ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 07, 2024 | 8:36 AM

ಹಾಸನ, ಏ.07: ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಈ ಸಭೆಯಲ್ಲಿ RSS ಮುಖಂಡರು ಅಥವಾ ಕಾರ್ಯಕರ್ತರಿದ್ದರೆ ನನ್ನನ್ನು ಕ್ಷಮಿಸಿ ಎಂದು ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಹೇಳಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

‘ನಾನು ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು, ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ​ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರೂ ಪ್ರಶ್ನೆ ಮಾಡಲ್ಲ. ಪ್ರಜ್ವಲ್‌ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮ ರಾದಾ ಮೋಹನ್ ದಾಸ್ ಅವರು ಹೇಳಿದ್ದಾರೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಎಂದು.  ಜೆಡಿಎಸ್-ಬಿಜೆಪಿ ಪ್ರತಿಯೊಬ್ಬರನ್ನೂ ಕಾರ್ಯಕರ್ತರನ್ನು ಗೌರವಿಸಿ, ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

ಇದನ್ನೂ ಓದಿ:ಸಂಸದ ಪ್ರಜ್ವಲ್ ರೇವಣ್ಣರ 5 ವರ್ಷದ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ನಾನು ಐದು ವರ್ಷದಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ, ಒಬ್ಬ ಯುವಕ ನಡೆಯುವಾಗ ಎಡವುತ್ತಾನೆ, ಈಗ ಎಡವಿರಬಹುದು. ಸಣ್ಣಪುಟ್ಟ ವಿಚಾರಗಳಲ್ಲಿ ಎಡವಿದ್ರೆ, ತಪ್ಪು ತಿದ್ದಿಕೋ‌ ಎಂದು ಸಂದೇಶ ಕೊಟ್ಟರೆ ಕೈ ಮುಗಿದು ನಮಸ್ಕಾರ ಮಾಡುತ್ತೇನೆ. ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ. ತಪ್ಪುಗಳನ್ನು ಸರಿ ಮಾಡಿಕೊಂಡು ಯಾರಿಗೂ ಕೆಟ್ಟ ಹೆಸರು ಬಾರದೆ ಕೆಲಸ ಮಾಡುತ್ತೇನೆ. ಒಬ್ಬ ಸಂಸದನಾಗಿ ಅಲ್ಲ, ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 400 ಸೀಟ್ ಗೆಲ್ಲಿಸುವ ಮೂಲಕ ಮತ್ತೊಮ್ಮೆ ನರೇಂದ್ರಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು. ಅದರಲ್ಲಿ ನಾನೊಬ್ಬ ಇರಲು ಅವಕಾಶ ಮಾಡಿ ಕೊಡಿ‌ ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್