AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ​ ವಿಡಿಯೋ ಕೇಸ್​ ಹೊಸ ತಿರುವು: ಪ್ರೀತಂಗೌಡ ಆಪ್ತರು ಎಸ್​ಐಟಿ ವಶಕ್ಕೆ

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಮಧ್ಯೆ ವಾಗ್ಯುದ್ಧ ನಡೆಯುತ್ತಿದೆ. ಇತ್ತ ಪ್ರಕರಣದ ತನಿಖೆಯನ್ನು ಚುರುಕುಗೊಳಿರುವ ಎಸ್​ಐಟಿ ಅಧಿಕಾರಿಗಳು ಬಿಜೆಪಿಯ ಪ್ರಭಾವಿ ನಾಯಕನ ಆಪ್ತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ​ ವಿಡಿಯೋ ಕೇಸ್​ ಹೊಸ ತಿರುವು: ಪ್ರೀತಂಗೌಡ ಆಪ್ತರು ಎಸ್​ಐಟಿ ವಶಕ್ಕೆ
ಚೇತನ್​, ಲಿಖಿತ್​, ಪ್ರಜ್ವಲ್​ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on:May 12, 2024 | 12:23 PM

Share

ಹಾಸನ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್​ ಚಲ್​ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್​ ಟ್ವಿಸ್ಟ್​ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಕಚೇರಿಯ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿತು. ಬಳಿಕ ಪ್ರಕರಣ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ‌ ವಿಡಿಯೋ ಕೇಸ್: 3 ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ ದೇವರಾಜೇಗೌಡ

ಸದ್ಯ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತಂಡ ಹಾಸನದಲ್ಲಿ ಬೀಡು ಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಇದೀಗ ಅಧಿಕಾರಿಗಳು ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್​ ಹಾಗೂ ಆಪ್ತ ಲಿಖಿತ್​ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ. ಲಿಖಿತ್ ಮತ್ತು ಚೇತನ್​ ಪ್ರೀತಂಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಎಸ್​ಐಟಿ ಅಧಿಕಾರಿಗಳು ಸದ್ಯ ಹಾಸನ ನಗರ ಪೊಲೀಸ್​ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಇದರ ಹಿಂದೆ ಯಾರು ಯಾರು ಇದ್ದಾರೆ ಎಂದು ಜಾಲಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದವ ಬಂಧನ

ಇನ್ನು ಈ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದರು. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Sun, 12 May 24

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ