ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಬಿಗ್ ಟ್ವಿಸ್ಟ್, ಸಂತ್ರಸ್ತೆಯ ಗಂಡನ ತಾಯಿ ಸ್ಫೋಟಕ ಹೇಳಿಕೆ

Prajwal revanna Video Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ, ಇದರ ಮಧ್ಯೆ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್​ಡಿ ರೇವಣ್ಣ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆ ಮಹಿಳೆ ಗಂಡನ ತಾಯಿ ಸ್ಫೋಟಕ ಹೇಳಿಕೆ ನೀಡಿದ್ದು, ಈ ಪ್ರಕರಣಕ್ಕೆಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಬಿಗ್ ಟ್ವಿಸ್ಟ್, ಸಂತ್ರಸ್ತೆಯ ಗಂಡನ ತಾಯಿ ಸ್ಫೋಟಕ ಹೇಳಿಕೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Apr 29, 2024 | 3:31 PM

ಹಾಸನ ,(ಏಪ್ರಿಲ್ 29): ಹಾಸನ (Hassan) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ರೇವಣ್ಣ‌, ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಗಂಡನ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಇಂದು(ಏಪ್ರಿಲ್ 29) ಹಾಸನದಲ್ಲಿ ಸಂತ್ರಸ್ತೆ ಗಂಡನ ತಾಯಿ ಗೌರಮ್ಮ ಶಿಲ್ಪ ಸುದ್ದಿಗೋಷ್ಠಿ ನಡೆಸಿದ್ದು, 5 ವರ್ಷದ ಹಿಂದೆ ಸುಮ್ನೆ ಇದ್ದು ದೂರು ನೀಡಿದ್ದಾರೆ. ಭಾವನಿ ಅಮ್ಮ ನಮ್ಮ ಕುಟುಂಬಕ್ಕೆ ತುಂಬಾ ಸಹಾಯ ಮಾಡಿದ್ದಾರೆ. ಅವರು ನಮ್ಮ ಕುಟುಂಬದ ಜೊತೆ ಇದ್ದರು. ಹೆದರಿಸಿ ಇವರನ್ನ ಕಳೆದುಕೊಂಡು ಹೋಗಿ ದೂರು ಕೊಡಿಸಿದ್ದಾರೆ. ನಾವು ಶ್ರೀರಾಮಪುರದಲ್ಲಿ ಜೊತೆ ಒಟ್ಟಿಗೆ ಇದ್ವಿ. ಚುನಾವಣೆ ಸಮಯದಲ್ಲಿ ಗೌಡರ ಮನೆಗೆ ಕಪ್ಪು ಚುಕ್ಕೆ ತರಲು ಈ ಕೆಲಸ ಮಾಡಿದ್ದಾರೆ. ಇದೆಲ್ಲ ಸುಳ್ಳು ದೂರು. ರೇವಣ್ಣ ಕುಟುಂಬ ನಮಗೆ ಸಂಬಂಧಿಕರು ಎಂದು ರೇವಣ್ಣ‌ ,ಪ್ರಜ್ವಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ದೂರು ನೀಡಿರುವ ಮಹಿಳೆ ಸರಿಯಿಲ್ಲ

ಅಶ್ಲೀಲ ವಿಡಿಯೋ ಸಂಬಂಧ ದೂರು ನೀಡಿರುವ ಮಹಿಳೆ ಸರಿಯಿಲ್ಲ. ತುಂಬಾ ಸಾಲ ಮಾಡಿಕೊಂಡಿದ್ದರು, ಜಮೀನು ಸಹ ಮಾರಾಟ ಮಾಡಿದ್ರು ಹೆಚ್‌.ಡಿ.ದೇವೇಗೌಡ ಕುಟುಂಬಕ್ಕೆ ಕಪ್ಪುಚುಕ್ಕೆ ತರಲು ದೂರು ನೀಡಿದ್ದಾರೆ. ಕೆಟ್ಟ ಹೆಸರು ತರಲು ಈ ಕೆಲಸ ಮಾಡುತ್ತಿದ್ದಾರೆ. ನಮ್ಮನೆಯಿಂದ ಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ಬರಬಾರದು. ಅ ಮಹಿಳೆ ಸುಳ್ಳು ಹೇಳುತ್ತಿದ್ದಾರೆ. ಮಂಜುನಾಥ ಸ್ವಾಮಿ ಮೇಲೆ ಪ್ರಮಾಣ ಮಾಡುತ್ತೇವೆ ಗೌಡರ ಕುಟುಂಬ ತಪ್ಪು ಮಾಡಿಲ್ಲ. ನಮ್ಮ ಕಷ್ಟ-ಸುಖವನ್ನ ಭವಾನಿ ಅಮ್ಮಾ ನೋಡಿದ್ದಾರೆ. ದೂರುದಾರರ ನಡೆತೆ ಕೂಡ ಸರಿ ಇರಲಿಲ್ಲ. ಅವರಿಗೆ ಯಾವ ದೌರ್ಜನ್ಯ ಆಗಿಲ್ಲ ಎಂದರು.

ಇದನ್ನೂ ಓದಿ: ಇದೆಲ್ಲಾ ರಾಜಕೀಯ; ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ: ಎಚ್.ಡಿ. ರೇವಣ್ಣ ಪ್ರತಿಕ್ರಿಯೆ

ಗೌಡರ ಮನೆಗೆ ಕಪ್ಪು ಚುಕ್ಕೆ ತರಬೇಕು ಎಂದು ಈ ರೀತಿ ಮಾಡಿದ್ದಾಳೆ

ಐದು ವರ್ಷದಿಂದ ಏನು ಮಾಡುತ್ತಿದ್ದರು, ಈಗ ಏಕೆ ದೂರು ನೀಡಿದ್ದಾರೆ. ಅವರು ಏನು ಮಾಡಿಲ್ಲ. ನಮಗೆ ಸಹಾಯ ಮಾಡಿದ್ದಾರೆ . ಅವರು ನಮಗೆ ಚೆನ್ನಾಗಿ ನೋಡಿಕೊಂಡಿದ್ದಾರೆ. ದೂರು ನೀಡಿರುವವರದ್ದೇ ತಪ್ಪು. ಗೌಡರ ಮನೆಗೆ ಕಪ್ಪು ಚುಕ್ಕೆ ತರಬೇಕು ಎಂದು ಈ ರೀತಿ ಮಾಡಿದ್ದಾಳೆ. ಇಷ್ಟು ವರ್ಷ ರಾಜಕೀಯ ಮಾಡಿದ್ದಾರೆ, ಯಾವುದೇ ಕಪ್ಪು ಚುಕ್ಕೆ ಇಲ್ಲ. ಭವಾನಿ ಅಕ್ಕ ಅವರಿಗೆ ತುಂಬಾ ಸಹಾಯ ಮಾಡಿದ್ದಾರೆ. ಮೇಡಂ, ಸಾಹೇಬ್ರು ನಮಗೆ ದೇವರಿದ್ದಂತೆ. ವಿಡಿಯೋ ಸತ್ಯದ ಬಗ್ಗೆ ಪ್ರಶ್ನಿಸಿದ ದೂರುದಾರರ ವಿರುದ್ಧದವರು ಟೆಕ್ನಾಲಜಿ ಬಳಸಿ ಏನು ಬೇಕಾದ್ರು ಮಾಡಿರಬಹುದು. ಆಕೆ ಐದು ವರ್ಷದ ಹಿಂದೆಯೇ ಮನೆ ಬಿಟ್ಟಿದ್ದಾಳೆ. ಇಂದು ಏಕೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಹೆಣ್ಣಾದವಳು 5 ವರ್ಷದ ಹಿಂದೆಯೇ ಹೇಳಬೇಕಿತ್ತು ಎಂದು ದೂರುದಾರ ಸಂತ್ರಸ್ತೆ ವಿರುದ್ಧವೇ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಗೆ ದೂರು ನೀಡಿರುವ ಮಹಿಳೆ ವಿರುದ್ಧ ಮಾತ್ರ ಸುದ್ದಿಗೋಷ್ಠಿ ನಡೆಸಿದ್ದೇವೆ. ಉಳಿದ ಅಶ್ಲೀಲ ವಿಡಿಯೋಗೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸಂತ್ರಸ್ತೆಯ ಕುಟುಂಬದವರು ಸ್ಪಷ್ಟಪಡಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ