AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್: ಸೀಗೆಗುಡ್ಡಕ್ಕೆ ನಿರ್ಬಂಧದ ಭೀತಿ

ಬ್ಲಾಕ್‌ಬಸ್ಟರ್ 'ಪ್ರೇಮದ ಊರಲಿ' ಸಿನಿಮಾ ಶೂಟಿಂಗ್ ಸ್ಪಾಟ್ ಸೀಗೆಗುಡ್ಡಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದೆ. ಇದರಿಂದ ಹಾಸನ ಜಿಲ್ಲಾಡಳಿತಕ್ಕೆ ಮೂಲಭೂತ ಸೌಕರ್ಯ ಒದಗಿಸುವುದು ದೊಡ್ಡ ಸವಾಲಾಗಿದೆ. ಮೀಸಲು ಅರಣ್ಯವಾಗಿರುವ ಕಾರಣ ಅರಣ್ಯ ಇಲಾಖೆ ನಿರ್ಬಂಧದ ಭೀತಿ ವ್ಯಕ್ತವಾಗಿದೆ. ಕಾಡು ಪ್ರಾಣಿಗಳ ರಕ್ಷಣೆ ಮತ್ತು ಮಾನವ-ಪ್ರಾಣಿ ಸಂಘರ್ಷ ತಪ್ಪಿಸಲು ಜನರಿಗೆ ಪ್ರವೇಶ ನಿಷೇಧಿಸುವ ಸಾಧ್ಯತೆಯಿದೆ.

‘ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್: ಸೀಗೆಗುಡ್ಡಕ್ಕೆ ನಿರ್ಬಂಧದ ಭೀತಿ
ಸೀಗೆಗುಡ್ಡ
ಮಂಜುನಾಥ ಕೆಬಿ
| Edited By: |

Updated on: Oct 26, 2026 | 10:41 PM

Share

ಹಾಸನ, ಅಕ್ಟೋಬರ್​​ 26: ಸ್ಯಾಂಡಲ್ ವುಡ್​ನಲ್ಲಿ ಬ್ಲಾಕ್ ಬಸ್ಟರ್ ಆಗಿರುವ ‘ಪ್ರೇಮದ ಊರಲಿ’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿದೆ. ಕೋಟಿ ಕೋಟಿ ಸಿನಿಪ್ರಿಯರ ಮನ ಗೆದ್ದಿದೆ. ಬೆಳ್ಳಿ ಪರದೆಯಲ್ಲಿ ಚಿತ್ರ ನೋಡಿ ಸಂಭ್ರಮಿಸಿದ ಜನರು, ಸಿನಿಮಾ ಚಿತ್ರೀಕರಣವಾದ ಸೀಗೆಗುಡ್ಡಕ್ಕೆ ಇದೀಗ ಲಗ್ಗೆಯಿಡುತ್ತಿದ್ದು, ಹಾಸನ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಿರಿದಾದ ರಸ್ತೆ, ಪಾರ್ಕಿಂಗ್ ಸಮಸ್ಯೆ ಸರಿಮಾಡಲು ಅರಣ್ಯ ಇಲಾಖೆಗೆ ಕಂದಾಯ ಇಲಾಖೆ ಪತ್ರ ಬರೆದಿದೆ. ಮೀಸಲು ಅರಣ್ಯದೊಳಗೆ ಜನರು ಪ್ರವೇಶ ಮಾಡುವಂತಿಲ್ಲ. ಚಿರತೆ, ಕರಡಿ ಇರುವ ತಾಣದಲ್ಲಿ ಅನಾಹುತ ಸಂಭವಿಸುವುದಕ್ಕೂ ಮುನ್ನ ಜನರಿಗೆ ನಿರ್ಬಂಧ ಹೇರಿ ಎನ್ನುವ ಅಭಿಪ್ರಾಯ ವ್ಯಕ್ತವಾಗಿದ್ದು, ಜನರ ನೆಚ್ಚಿನ ತಾಣ ಇದೀಗ ನಿಷೇಧಿತ ಪ್ರದೇಶವಾಗಲಿದೆಯಾ ಎಂಬ ಆತಂಕ ಎದುರಾಗಿದೆ.

ಪ್ರೇಮದ ಊರಲಿ ಶೂಟಿಂಗ್ ಸ್ಪಾಟ್​ಗೆ ಜನರ ಪ್ರವೇಶಕ್ಕೆ ನಿರ್ಬಂಧ ಭೀತಿ

‘ಪ್ರೇಮದ ಊರಲ್ಲಿ’ ಸಿನಿಮಾ ಚಿತ್ರೀಕರಣಗೊಂಡಿರುವ ಸುಂದರ ತಾಣ ಸೀಗೆಗುಡ್ಡ ನೋಡಲು ಜನರು ಮುಗಿಬೀಳುತ್ತಿದ್ದಾರೆ. ಕಳದ ಮೂರುವಾರಗಳಿಂದ ಸಾಗರೋಪಾದಿಯಲ್ಲಿ ಬರುತ್ತಿರುವ ಜನರನ್ನ ನಿಯಂತ್ರಣ ಮಾಡುವುದೇ ಇದೀಗ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪಾರ್ಕಿಂಗ್​ಗೆ ಜಾಗ ಇಲ್ಲ, ರಸ್ತೆ ಸರಿಯಿಲ್ಲ, ಕುಡಿಯುವ ನೀರು, ಶೌಚಾಲಯವಿಲ್ಲ ಎಂದು ಜನರಿಂದ ದೂರು ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಸೀಗೆಗುಡ್ಡದಲ್ಲಿ ಜನವೋ ಜನ…ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ ಸಿನಿಮಾ

ಅರಣ್ಯ ಇಲಾಖೆಗೆ ಸೇರಿದ ಜಾಗವಾಗಿರುವ ಕಾರಣ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಆದರೆ ಅರಣ್ಯ ಸಂರಕ್ಷಣಾ ಕಾಯಿದೆ ಪ್ರಕಾರ ಮೀಸಲು ಅರಣ್ಯದಲ್ಲಿ ರಸ್ತೆ, ಪಾರ್ಕಿಂಗ್, ಇತರೆ ಮೂಲ ಸೌಲಭ್ಯ ನೀಡಲು ಸರ್ಕಾರದ ಅನುಮತಿ ಬೇಕು, ಸೀಗೆಗುಡ್ಡ ಮೀಸಲು ಅರಣ್ಯವಾಗಿದ್ದು, ಚಿರತೆ, ಕರಡಿಗಳಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಬಂದರೆ ಕಾಡು ಪ್ರಾಣಿಗಳಿಗೆ ಸಮಸ್ಯೆಯುಂಟಾಗಿ ಕಾಡು ಪ್ರಾಣಿಗಳು, ಮಾನವ ಸಂಘರ್ಷ ಎದುರಾಗುವ ಸಾಧ್ಯತೆಯಿದೆ. ಹಾಗಾಗಿ ಈ ಪ್ರದೇಶಕ್ಕೆ ಜನರ ಪ್ರವೇಶ ನಿರ್ಬಂಧ ಹೇರಬೇಕು ಎಂದು ಪತ್ರದ ಮೂಲಕ ತಿಳಿಸಲಾಗಿದ್ದು, ಇಡೀ ಪ್ರದೇಶಕ್ಕೆ ಜನರ ಪ್ರವೇಶ ನಿರ್ಬಂಧಿಸಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ.

LIVE TV

ಸೀಗೆಗುಡ್ಡ ಇರುವುದೆಲ್ಲಿ?

ಹಾಸನದಿಂದ 15 ಕಿ.ಮೀ ದೂರದಲ್ಲಿರುವ ಸೀಗೆ ಗ್ರಾಮದ ಸಮೀಪವಿರುವ ಸೀಗೆಗುಡ್ಡ ಪ್ರಕೃತಿ ಸೌಂದರ್ಯದ ತಾಣ. ಇಂತಹ ಸುಂದರ ತಾಣದಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಚಿತ್ರೀಕರಣವಾಗಿದೆ. ಇದೇ ಬೆಟ್ಟದಲ್ಲಿ ಪುರಾಣ ಪ್ರಸಿದ್ಧ ಮಳೆ ಮಲ್ಲೇಶ್ವರ ದೇಗುಲ ಕೂಡ ಇದ್ದು, ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬಂದು ಹೋಗುತ್ತಾರೆ. ಕಡಿಮೆ ಸಂಖ್ಯೆಯಲ್ಲಿ ಭಕ್ತರು ಬಂದು ಹೋಗುವ ವೇಳೆ ಏನು ಸಮಸ್ಯೆ ಇರಲಿಲ್ಲ. ಆದರೆ ಯಾವಾಗ ‘ಪ್ರೇಮದ ಊರಲಿ’ ಸಿನಿಮಾ ಹಿಟ್ ಆಯಿತೋ, ಇಲ್ಲಿಗೆ ಬರುವ ಜನರ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿತ್ಯವೂ ಸಾವಿರಾರು ವಾಹನಗಳು ಸಂಚಾರದಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ಹಾಸನ ತಾಲೂಕು ತಹಶೀಲ್ದಾರ್ ಗೀತಾ ಹೇಳಿದ್ದಿಷ್ಟು 

ಸದ್ಯ ಅರಣ್ಯ ಇಲಾಖೆ ಈ ಪ್ರದೇಶವನ್ನ ನಿರ್ಬಂಧ ಮಾಡುವ ಇಂಗಿತ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಾಸನ ತಾಲೂಕು ತಹಶೀಲ್ದಾರ್ ಗೀತಾ, ‘ಈ ಅರಣ್ಯ ಇಲಾಖೆ ಅಧಿಕಾರಿಗಳ ವರದಿ ಬಗ್ಗೆ ಡಿಸಿ ಅವರ ಗಮನಕ್ಕೆ ತರಲಾಗಿದ್ದು, ಮೇಲಾಧಿಕಾರಿಗಳು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ

ಒಟ್ಟಿನಲ್ಲಿ ಸಿನಿಮಾ ಹಿಟ್ ಆದ ಬೆನ್ನಲ್ಲೇ ಸೀಗೆಗುಡ್ಡಕ್ಕೆ ಹೊಸ ರಂಗು ಬಂದಿದೆ. ಜನರ ದಂಡು ಸುಂದರ ತಾಣ ಕಣ್ತುಂಬಿಕೊಳ್ಳಲು ಬರುತ್ತಿದೆ. ಆದರೆ ಇದೀಗ ಮೀಸಲು ಅರಣ್ಯ ಎನ್ನುವ ಕಾರಣಕ್ಕೆ ಸೀಗೆಗುಡ್ಡಕ್ಕೆ ನಿರ್ಬಂಧ ಹೇರಲಾಗುತ್ತದೆ ಎನ್ನವು ಭೀತಿ ಎದುರಾಗಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ಏನು ತೀರ್ಮಾನ ಮಾಡಲಿದೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ