ಕಾರು ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ಸಾವು
ಕಾರು ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ನಡೆದಿದೆ.
ಹಾಸನ, ಜುಲೈ 24: ಕಾರು ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ (collision) ಹೊಡೆದ ಪರಿಣಾಮ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ನಡೆದಿದೆ. ಮೋಹನ್‌ಕುಮಾರ್(58) ಮೃತ ಲೋಕೋಪಯೋಗಿ ಇಲಾಖೆ ಎಇಇ. ಸಕಲೇಶಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಗಾಯಗೊಂಡಿದ್ದ ಮೋಹನ್ರನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಾರ್ ಕ್ಯಾಶಿಯರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಸುಲಿಗೆ
ಬೆಂಗಳೂರು: ಡಿ.ಜೆ ಹಳ್ಳಿಯ ಮೋದಿ ರಸ್ತೆಯಲ್ಲಿರುವ ಬಾರ್ ಕ್ಯಾಶಿಯರ್ಗೆ ಚಾಕುವಿನಿಂದ ಹಲ್ಲೆ ನಡೆಸಿ 83 ಸಾವಿರ ಹಣ ಕಸಿದು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಉನ್ನತಿ ಬಾರ್ನಲ್ಲಿ ಬುಲ್ಲಿ ಬಾಬು ಎಂಬಾತನಿಂದ ಕೃತ್ಯ ವ್ಯಸಗಲಾಗಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Kalaburagi News: ನಿರಂತರ ಮಳೆಗೆ ಕುಸಿದ ಮಣ್ಣಿನ ಗೋಡೆ: ಮಹಿಳೆ ಸಾವು
ಅಪರಿಚಿತ ವಾಹನ ಡಿಕ್ಕಿ ಪಾದಚಾರಿ ವೃದ್ದ ಸಾವು ಪ್ರಕರಣ: ಗುರುತು ಪತ್ತೆ ಮಾಡಿದ ಪೊಲೀಸರು
ಮೈಸೂರು: ಅಪರಿಚಿತ ವಾಹನ ಡಿಕ್ಕಿ ಪಾದಚಾರಿ ವೃದ್ದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹೆಚ್ಡಿ ಕೋಟೆ ನಿವಾಸಿ ಪುಟ್ಟಸ್ವಾಮಿ 65 ಮೃತ ದುರ್ದೈವಿ. ಜಿಲ್ಲೆಯ ಹುಣಸೂರಿನ ನರಸಿಂಹ ಸ್ವಾಮಿ ತಿಟ್ಟಿನ ಬಳಿ ಎರಡು ದಿನದ ನಡೆದುಕೊಂಡು ಹೋಗುವಾಗ ಅಪಘಾತ ಸಂಭವಿಸಿತ್ತು. ಮೃತರ ಗುರುತು ಪತ್ತೆಯಾಗಿರಲಿಲ್ಲ.
ಇದನ್ನೂ ಓದಿ: Chikkaballapur: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ
ಮೃತರ ಬಳಿ ಹೆಚ್ ಡಿ ಕೋಟೆಯಿಂದ ಹುಣಸೂರಿಗೆ ಬಂದ ಬಸ್ ಟಿಕೆಟ್ ಇತ್ತು. ಮೃತರ ಗುರುತು ಪತ್ತೆ ಹಚ್ಚಲು ಸಹಾಯ ಮಾಡುವಂತೆ ಪೊಲೀಸರು ಮನವಿ ಮಾಡಿದ್ದರು. ಗಾಯಾಳು ಪುಟ್ಟಸ್ವಾಮಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.