AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಾಡೂಟಕ್ಕೆ ಕರೆಯದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್ ಸಂಬಂಧಿಕರು ಪೂಜೆ ಮಾಡಿ ಬಾಡೂಟ ಏರ್ಪಡಿಸಿದ್ದರು. ತಮ್ಮನ್ನ ಕರೆಯದೇ ಹಬ್ಬದೂಟ ಮಾಡಿದ್ದೀರಾ ಎಂದು ಕ್ಯಾತೆ ಎತ್ತಿದ್ದಾರೆ.

ಹಾಸನದಲ್ಲಿ ಬಾಡೂಟಕ್ಕೆ ಕರೆಯದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on:Jan 18, 2022 | 3:04 PM

Share

ಹಾಸನ: ಬಾಡೂಟಕ್ಕೆ ಕರೆಯದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. ಹಾಸನ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನ ಪುರಲೆಹಳ್ಳಿಯಲ್ಲಿ ಶರತ್(28) ಎಂಬ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್ ಸಂಬಂಧಿಕರು ಪೂಜೆ ಮಾಡಿ ಬಾಡೂಟ ಏರ್ಪಡಿಸಿದ್ದರು. ತಮ್ಮನ್ನ ಕರೆಯದೇ ಹಬ್ಬದೂಟ ಮಾಡಿದ್ದೀರಾ ಎಂದು ಕ್ಯಾತೆ ಎತ್ತಿದ್ದಾರೆ. ಅಲ್ಲದೇ ಪುರಲೆಹಳ್ಳಿಯ ಧನಪಾಲ್, ಅರ್ಜುನ್, ನಟರಾಜ್, ಮಂಜುನಾಥ ಮತ್ತಿತರಿಂದ ಶರತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಶರತ್, ರಾಕೇಶ್, ಯೋಗೇಶ್ ಎಂಬುವವರು ಹಲ್ಲೆಯಲ್ಲಿ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಶರತ್ನ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅರಸೀಕೆರೆ ತಾಲೂಕಿನ ಬಾಣಾವರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಕೊಲೆ ಕೇಸ್ ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆ                                                                                                                                                          ಗದಗದಲ್ಲಿ ಯುವಕರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಯುವಕ ಸಮೀರ್ ಶಾಪುರ(20) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಯುವಕ ಸಮೀರ್ ಶಾಪುರ ಮೃತಪಟ್ಟಿದ್ದು, ಮತ್ತೊಬ್ಬ ಗಾಯಾಳು ಶಮ್ಮಶಾನ್ ಪಠಾಣ(21) ಪರಿಸ್ಥಿತಿ ಗಂಭೀರವಾಗಿದೆ. ಪುರಸಭಾ ಕಚೇರಿ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆ ಮಾಡಿದ್ದಾರೆ. ಮಚ್ಚು, ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ನರಗುಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ

ಈ ವಾರ ಮಹಾರಾಷ್ಟ್ರ, ಹರ್ಯಾಣ, ಗುಜರಾತ್‌ನಲ್ಲಿ ಕೊವಿಡ್ ಮೂರನೇ ಅಲೆ ಉತ್ತುಂಗಕ್ಕೇರಲಿದೆ: ಮುನ್ಸೂಚನೆ ನೀಡಿದ ಐಐಟಿ

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

Published On - 2:42 pm, Tue, 18 January 22

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ