ಲಾರಿ-ಬೈಕ್ ಮುಖಾಮುಖಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಹಾಸನ: ರಿಂಗ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯಾಗಿ ಕೆಳಗೆ ಬಿದ್ದ ಬಳಿಕ ಬೈಕ್​ ಸವಾರನ ಮೇಲೆ ಚಾಲಕ ಲಾರಿ ಹತ್ತಿಸಿದ್ದಾನೆ. ಇದರಿಂದ 27 ವರ್ಷದ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್​ನಲ್ಲಿ ವೇಗವಾಗಿ ಬಂದು ರಸ್ತೆಯನ್ನ ಕ್ರಾಸ್ ಮಾಡಿದ್ದಾನೆ. ಈ ವೇಳೆ ನೇರವಾಗಿ ಬೈಕ್​ಗೆ ಲಾರಿ ಡಿಕ್ಕಿಯೊಡೆದಿದೆ. ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]

ಲಾರಿ-ಬೈಕ್ ಮುಖಾಮುಖಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: May 31, 2020 | 2:28 PM

ಹಾಸನ: ರಿಂಗ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯಾಗಿ ಕೆಳಗೆ ಬಿದ್ದ ಬಳಿಕ ಬೈಕ್​ ಸವಾರನ ಮೇಲೆ ಚಾಲಕ ಲಾರಿ ಹತ್ತಿಸಿದ್ದಾನೆ. ಇದರಿಂದ 27 ವರ್ಷದ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೈಕ್​ನಲ್ಲಿ ವೇಗವಾಗಿ ಬಂದು ರಸ್ತೆಯನ್ನ ಕ್ರಾಸ್ ಮಾಡಿದ್ದಾನೆ. ಈ ವೇಳೆ ನೇರವಾಗಿ ಬೈಕ್​ಗೆ ಲಾರಿ ಡಿಕ್ಕಿಯೊಡೆದಿದೆ. ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 12:53 pm, Sun, 31 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us