ಕಾರು-ಲಾರಿ ಮುಖಾಮುಖಿ ಡಿಕ್ಕಿ: ಅಕ್ಕನಿಗೆ ಬಾಗಿನ ಕೊಟ್ಟು ತವರಿಗೆ ಕರೆದೊಯ್ಯುತ್ತಿದ್ದ ಬಿಎಸ್ಎಫ್ ಯೋಧ, ಅಕ್ಕನ ಮಗು ಸಾವು
Road Accidents: ಗೌರಿ ಹಬ್ಬಕ್ಕೆ ಅಕ್ಕನ ಕರೆದೊಯ್ಯಲು ಬಂದ ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಅಕ್ಕ-ಭಾವ ಹಾಗೂ ಮಗುವನ್ನ ಜೊತೆಯಲ್ಲೇ ತವರಿಗೆ ಕರೆದೊಯ್ಯುವಾಗ ಈ ಭೀಕರ ಅಪಘಾತವಾಗಿದೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.
ಹಾಸನ: ಗೌರಿ ಹಬ್ಬಕ್ಕೆ ಅಕ್ಕನ ಕರೆದೊಯ್ಯಲು ಬಂದ ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಅಕ್ಕ-ಭಾವ ಹಾಗೂ ಮಗುವನ್ನ ಜೊತೆಯಲ್ಲೇ ತವರಿಗೆ ಕರೆದೊಯ್ಯುವಾಗ ಈ ಭೀಕರ ಅಪಘಾತವಾಗಿದೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಶಂಕರ್(22) ಹಾಗೂ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಲಾಳನಪುರದ ಶಂಕರ್ ಹಾಗು ಅರಕಲಗೂಡಿನ ಮಗು ಮೃತಪಟ್ಟವರು. ಗೌರಿ ಗಣೇಶ ಹಬ್ಬಕ್ಕಾಗಿ ಅಕ್ಕನಿಗೆ ಬಾಗಿನ ಕೊಟ್ಟು ಹಬ್ಬಕ್ಕೆ ಕರೆದೊಯ್ಯುತ್ತಿದ್ದ ತಮ್ಮ ಹಬ್ಬಕ್ಕೆಂದು ರಜೆ ಮೇಲೆ ಊರಿಗೆ ಬಂದಿದ್ದ ಬಿ.ಎಸ್.ಎಫ್ ಯೋಧ. ಮಧು ಮತ್ತು ಪತ್ನಿ ಚೈತ್ರಾಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಅರಕಲಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗೌರಿ ಹಬ್ಬಕ್ಕೆ ಅಕ್ಕನ ಕರೆದೊಯ್ಯಲು ಬಂದ ಯುವಕ ಹಾಗೂ ಅಕ್ಕನ ಮಗು ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಅಕ್ಕ-ಭಾವ ಹಾಗೂ ಮಗುವನ್ನ ಜೊತೆಯಲ್ಲೇ ತವರಿಗೆ ಕರೆದೊಯ್ಯುವಾಗ ಈ ಭೀಕರ ಅಪಘಾತವಾಗಿದೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಶಂಕರ್(22) ಹಾಗೂ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಲಾಳನಪುರದ ಶಂಕರ್ ಹಾಗು ಅರಕಲಗೂಡಿನ ಮಗು ಮೃತಪಟ್ಟವರು. ಗೌರಿ ಗಣೇಶ ಹಬ್ಬಕ್ಕಾಗಿ ಅಕ್ಕನಿಗೆ ಬಾಗಿನ ಕೊಟ್ಟು ಹಬ್ಬಕ್ಕೆ ಕರೆದೊಯ್ಯುತ್ತಿದ್ದ ತಮ್ಮ ಹಬ್ಬಕ್ಕೆಂದು ರಜೆ ಮೇಲೆ ಊರಿಗೆ ಬಂದಿದ್ದ ಬಿ.ಎಸ್.ಎಫ್ ಯೋಧ. ಮಧು ಮತ್ತು ಪತ್ನಿ ಚೈತ್ರಾಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಅರಕಲಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತೊದು ದುರಂತ 2 ಬೈಕ್ಗಳು ಮುಖಾಮುಖಿ ಡಿಕ್ಕಿ, ಮೂವರ ಮೃತ್ಯು
ಕಲಬುರಗಿ: ಮತ್ತೊದು ದುರಂತದಲ್ಲಿ 2 ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಡಕಿ ತಾಂಡಾ ಬಳಿ ಸಂಭವಿಸಿದ ಅಪಘಾತದಲ್ಲಿ ಅಂಬರೀಶ್, ಅನಿಲ್ ಗುತ್ತೇದಾರ್ ಮತ್ತು ನಾಗೇಶ್ ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬ ಯುವಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಹೋಗ್ತಿದ್ದಾಗ ಭೀಕರ ಅಪಘಾತ; ಮೂವರ ಮೃತ್ಯು
ದಾವಣಗೆರೆ: ಮತ್ತೊಂದು ಅಪಘಾತದಲ್ಲಿ ಬೊಲೆರೊ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಭಾಗಿ ಬಳಿ ಸಂಭವಿಸಿರುವ ಭೀಕರ ಅಪಘಾತ ಇದಾಗಿದೆ. ಬೈಕ್‌ನಲ್ಲಿದ್ದ ಮಲ್ಲೇಶಪುರ ಗ್ರಾಮದ ಮಂಜುನಾಥ್(17), ಅಜ್ಜಯ್ಯ(18) ಮತ್ತು ದೇವರಾಜ್(17) ಮೃತ ದುರ್ದೈವಿಗಳು.
ಇಬ್ಬರು ಯುವಕರು ಅಪಘಾತ ನಡೆದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮತ್ತೊಬ್ಬ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾನೆ. ಮೃತ ಯುವಕರು ಚನ್ನಗಿರಿ ತಾಲ್ಲೂಕ್ ಮಲ್ಲೇಶಪುರ ನಿವಾಸಿಗಳು. ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಹೋಗ್ತಿದ್ದಾಗ ಈ ದುರಂತ ಸಂಭವಿಸಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
(Road Accidents at Hassan, Davangere, kalaburagi 8 people died)
Published On - 6:56 am, Fri, 10 September 21