Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕೋಟಿ ಕೋಟಿ ರೂ. ಗೋಲ್​ಮಾಲ್​ ಆರೋಪ; ತನಿಖೆಗೆ ಒತ್ತಾಯ

ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆಯುತ್ತಿದ್ದು, ಮಂಚ, ಹಾಸಿಗೆ, ದಿಂಬಿನ ಜತೆಗೆ ಇತರೆ ವಸ್ತುಗಳ ಖರೀದಿಯಲ್ಲೂ ಭಾರೀ ಅಕ್ರಮ ಎಸಗಲಾಗಿದೆ ಎಂಬ ಮಾತು ಕೂಡಾ ಕೇಳಿಬಂದಿದೆ. ಪಾತ್ರೆ, ಡೆಸ್ಕ್, ಡೈನಿಂಗ್ ಟೇಬಲ್‌, ಬಕೆಟ್, ತಟ್ಟೆ, ಸೇರಿ ಅಡುಗೆ ಮನೆ ವಸ್ತುಗಳ ಖರೀದಿಯಲ್ಲೂ ಅವ್ಯವಹಾರ ನಡೆದಿದೆ ಎಂಬ ಆರೋಪ ಇದೆ.

ಹಾಸನ: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕೋಟಿ ಕೋಟಿ ರೂ. ಗೋಲ್​ಮಾಲ್​ ಆರೋಪ; ತನಿಖೆಗೆ ಒತ್ತಾಯ
ಮಂಚ ಖರೀದಿಯಲ್ಲೂ ಭಾರೀ ಅವ್ಯವಹಾರದ ಅನುಮಾನ
Follow us
TV9 Web
| Updated By: Skanda

Updated on: Sep 04, 2021 | 7:59 AM

ಹಾಸನ: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕೋಟಿ ಕೋಟಿ ರೂಪಾಯಿ ಗೋಲ್‌ಮಾಲ್ ಆಗಿರುವ ಬಗ್ಗೆ ಅತ್ಯಂತ ಗಂಭೀರವಾದ ಆರೋಪ ಕೇಳಿಬಂದಿದೆ. ಅನುದಾನ ಉಳಿಕೆ ಹಣವನ್ನು ಬಳಕೆ‌ ಮಾಡುವ ಹೆಸರಿನಲ್ಲಿ ಅವ್ಯವಹಾರ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇಲಾಖೆಯ 9 ಕೋಟಿ 81 ಲಕ್ಷ ರೂಪಾಯಿ ಹಣದಲ್ಲಿ ಭಾರೀ ಅಕ್ರಮ ಮಾಡಿರುವ ಅನುಮಾನ ಹೊರಬಿದ್ದಿದೆ. ಮಂಚ, ಹಾಸಿಗೆ, ದಿಂಬು ಖರೀದಿಯಲ್ಲಿ ಭಾರೀ ಅವ್ಯವಹಾರ ಮಾಡಲಾಗಿದೆ. ಕರ್ನಾಟಕ ರಾಜ್ಯ ತೆಂಗಿನ ನಾರು ನಿಗಮದ ಜೊತೆ ಸೇರಿ ಅಕ್ರಮ ಎಸಗಲಾಗಿದೆ ಎಂದು ಆರ್​ಟಿಐ ಕಾರ್ಯಕರ್ತ ವಾಗೀಶ್ ದಾಖಲೆ ಸಮೇತ ಆರೋಪ ಮಾಡಿದ್ದು, ಕಟ್ಟುನಿಟ್ಟಿನ ತನಿಖೆಗೆ ಆಗ್ರಹಿಸಿದ್ದಾರೆ.

ಮಾರುಕಟ್ಟೆಯಲ್ಲಿ 13 ಸಾವಿರ ರೂಪಾಯಿ ಬೆಲೆ ಇರುವ ಮಂಚಕ್ಕೆ 24,577 ರೂಪಾಯಿ ಪಾವತಿ ಮಾಡಲಾಗಿದೆ. ಜಿಲ್ಲೆಯ 102 ಹಾಸ್ಟೆಲ್​ಗಳಿಗೆ ಬರೊಬ್ಬರಿ 1124 ಮಂಚಗಳ ಖರೀದಿ ಮಾಡಲಾಗಿದ್ದು, ಇದಕ್ಕಾಗಿ 2,76,49,125 ರೂಪಾಯಿ (2 ಕೋಟಿ 76 ಲಕ್ಷದ 49 ಸಾವಿರದ 125 ರೂ) ಪಾವತಿಸಲಾಗಿದೆ. ಮಾರುಕಟ್ಟೆ ದರಕ್ಕಿಂತ 1,30,24,125 ರೂಪಾಯಿ ಹೆಚ್ಚಿಗೆ ಪಾವತಿ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

RTI ಕಾರ್ಯಕರ್ತ ವಾಗೀಶ್​ ದಾಖಲೆ ಸಮೇತ ಹಗರಣವನ್ನು ಬಯಲು ಮಾಡಿದ್ದು, ಹಾಸಿಗೆ ಖರೀದಿಯಲ್ಲೂ ಭಾರೀ ಗೋಲ್‌ಮಾಲ್ ಮಾಡಿರುವ ಆರೋಪ ಹೊರಿಸಿದ್ದಾರೆ. 3366 ಹಾಸಿಗೆ ಖರೀದಿಗೆ ಒಟ್ಟು 2,15,82,792 ರೂ ಪಾವತಿ ಮಾಡಿದ್ದಾರೆ. ಇದನ್ನು ತೆಂಗಿನ ನಾರು ನಿಗಮದಿಂದಲೇ ಖರೀದಿ ಮಾಡಲಾಗಿದೆ. ಮಾರುಕಟ್ಟೆಯಲ್ಲಿ 3,200 ರೂಪಾಯಿ ಬೆಲೆ ಇರುವ ಹಾಸಿಗೆಗೆ 6,412 ರೂಪಾಯಿ ಪಾವತಿ ಮಾಡಲಾಗಿದೆ. ಹಾಸಿಗೆ ಖರೀದಿಯಲ್ಲೂ 1,08,11,592 ರೂಪಾಯಿ ಗುಳುಂ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಪಾರದರ್ಶಕ ಕಾಯಿದೆಯ 4ಜಿ ವಿನಾಯಿತಿ ಉಲ್ಲಂಘನೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪಾರದರ್ಶಕ ಕಾಯಿದೆಯನ್ನು ಮೀರಿ ಖರೀದಿ ಮಾಡಲಾಗಿದೆ. 20 ಲಕ್ಷ ರೂಪಾಯಿವರೆಗೆ ಮಾತ್ರ ಟೆಂಡರ್ ಇಲ್ಲದೆ ಖರೀದಿಗೆ ಅವಕಾಶ ಇದ್ದರೂ ಐದು ಕೋಟಿ ರೂಪಾಯಿ ವ್ಯವಹಾರ ನಡೆಸಲಾಗಿದೆ. ಟೆಂಡರ್ ಇಲ್ಲದೇ ಐದು ಕೋಟಿ ರೂಪಾಯಿ ಮೊತ್ತದ ವಸ್ತುಗಳನ್ನು ಅಧಿಕಾರಿಗಳು ಖದೀದಿಸಿದ್ದಾರೆ. ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಹರ್ಷಾ ಇದರಲ್ಲಿ ಪಾಲುದಾರರಾಗಿದ್ದಾರೆ ಎಂದು ಅವರ ವಿರುದ್ಧ ಆರೋಪ ಹೊರಿಸಲಾಗಿದೆ.

ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆಯುತ್ತಿದ್ದು, ಮಂಚ, ಹಾಸಿಗೆ, ದಿಂಬಿನ ಜತೆಗೆ ಇತರೆ ವಸ್ತುಗಳ ಖರೀದಿಯಲ್ಲೂ ಭಾರೀ ಅಕ್ರಮ ಎಸಗಲಾಗಿದೆ ಎಂಬ ಮಾತು ಕೂಡಾ ಕೇಳಿಬಂದಿದೆ. ಪಾತ್ರೆ, ಡೆಸ್ಕ್, ಡೈನಿಂಗ್ ಟೇಬಲ್‌, ಬಕೆಟ್, ತಟ್ಟೆ, ಸೇರಿ ಅಡುಗೆ ಮನೆ ವಸ್ತುಗಳ ಖರೀದಿಯಲ್ಲೂ ಅವ್ಯವಹಾರ ನಡೆದಿದೆ. ಮಾರುಕಟ್ಟೆಯಲ್ಲಿ ಸಾವಿರ ರೂಪಾಯಿ ಇರುವ ಕಿಟಕಿ ಪರದೆಗೆ 2,500 ರೂಪಾಯಿ ಬಿಲ್ ಹಾಕಲಾಗಿದೆ. ಕೆಲವೇ ತಿಂಗಳ ಅಂತರದಲ್ಲಿ ಕೋಟಿ ಕೋಟಿ ರೂಪಾಯಿ ವಸ್ತುಗಳ ಖರೀದಿ ಮಾಡಲಾಗಿದೆ ಎನ್ನಲಾಗಿದೆ.

ಹಾಸ್ಟೆಲ್​ಗಳ ಫ್ರಿಡ್ಜ್, ಯು.ಪಿ.ಎಸ್. ಕಂಪ್ಯೂಟರ್, ಗ್ಯಾಸ್ ರಿಪೇರಿ ಹೆಸರಿನಲ್ಲಿ ಕೋಟಿ ಕೋಟಿ ರೂಪಾಯಿ ಲೂಟಿ ಹೊಡೆದಿರುವ ಅನುಮಾನವೂ ಇದ್ದು, ಜನವರಿ ಫೆಬ್ರವರಿ ತಿಂಗಳಲ್ಲೇ ಜಿಲ್ಲೆಯ ಎಲ್ಲಾ ಹಾಸ್ಟೆಲ್​ಗಳ ಕಂಪ್ಯೂಟರ್, ಗ್ಯಾಸ್, ಸೋಲಾರ್ ಸಿಸ್ಟಮ್ ಕೆಟ್ಟು ದುರಸ್ತಿ ಆಗಿರೋ ಬಗ್ಗೆ ಅನುಮಾನ ಮೂಡಿದೆ. ಒಂದೊಂದು ವಸ್ತುಗಳ ರಿಪೇರಿಗೂ ಹತ್ತು ಸಾವಿರ ರೂಪಾಯಿವರೆಗೆ ಬಿಲ್ ಹಾಕಲಾಗಿದ್ದು, ಕಿಟಕಿ ಪರದೆಗಳ‌ ಖರೀದಿ ಹೆಸರಿನಲ್ಲಿ ಲಕ್ಷ ಲಕ್ಷ ರೂಪಾಯಿ ಗುಳುಂ ಸ್ವಾಹ ಮಾಡಲಾಗಿದೆ. ಬಾಕಿ ಉಳಿದಿದ್ದ 9 ಕೋಟಿ ರೂಪಾಯಿ ಅನುದಾನದಲ್ಲಿ ಮೂಲಭೂತ ಸೌಲಭ್ಯ ನೀಡುವ ಬಗ್ಗೆ ಯೋಜನೆ ರೂಪಿಸಿ ಜಿಪಂ ಸಭೆಯಲ್ಲಿ ಅನುಮೋದನೆ ಪಡೆದು ವಸ್ತುಗಳ ಖರೀದಿ ಮಾಡಲಾಗಿದೆ. ಆದರೆ ಮಾರುಕಟ್ಟೆ ಬೆಲೆ ಪರಿಶೀಲನೆ ಮಾಡದೆಯೇ ಬಿಲ್ ಪಾವತಿ ಮಾಡಿರುವ ಅಧಿಕಾರಿಗಳ ನಡೆ ಅನುಮಾನಕ್ಕೆ ಕಾರಣವಾಗಿದೆ ಹೀಗಾಗಿ ಸೂಕ್ತ ತನಿಖೆ ನಡೆಸಿ ಎಂದು ದೂರುದಾರ ವಾಗೀಶ್ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಬಡವರಿಗೆ ಸಿಗಬೇಕಿದ್ದ ಅಕ್ಕಿಯ ಅಕ್ರಮ ಸಾಗಾಟ; ಗದಗದಲ್ಲಿ 80ಕ್ಕೂ ಹೆಚ್ಚು ಅಕ್ಕಿ ಮೂಟೆ ವಶಕ್ಕೆ 

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ; ತನಿಖೆಗೆ ಒತ್ತಾಯ

(RTI Activist alleged Backward Classes welfare department in Hassan involved in Corruption and demands investigation)

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!