AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ.

ಹಾಸನ: ಸಾಕುನಾಯಿ ಹೊತ್ತೊಯ್ದ ಚಿರತೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ ಓಡಾಟ
TV9 Web
| Updated By: sandhya thejappa|

Updated on: Jun 16, 2021 | 2:05 PM

Share

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಕಾಟ ಜನರನ್ನು ಬೆಂಬಿಡದಂತೆ ಕಾಡುತ್ತಿದ್ದರೆ, ಇತ್ತ ಬಯಲು ಸೀಮೆಯಲ್ಲಿ ಚಿರತೆಗಳು ಜನರಲ್ಲಿ ಜೀವ ಭಯ ಸೃಷ್ಟಿ ಮಾಡುತ್ತಿವೆ. ಹೊಲ ಗದ್ದೆಗಳಲ್ಲಿ ಕಾಣಿಸಿಕೊಂಡು ಭೀತಿ ತರುತ್ತಿದ್ದ ಚಿರತೆಗಳು ಈಗೀಗ ಊರೊಳಗೆ ಬರುವುದಕ್ಕೆ ಶುರುಮಾಡಿವೆ. ಅಹಾರಕ್ಕಾಗಿ ಮನೆಯೊಳಗೆ ನುಗ್ಗುತ್ತಿರುವ ಹಲವು ಪ್ರಕರಣಗಳು ವರದಿಯಾಗುತ್ತಿದ್ದು, ನಿನ್ನೆ (ಜೂನ್ 15) ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.

ಗ್ರಾಮದ ಮಲ್ಲೆಗೌಡ ಎಂಬುವವರ ಸಾಕುನಾಯಿಯನ್ನ ಚಿರತೆಯೊಂದು ರಾತ್ರಿ ಹೊತ್ತೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಸುರಕ್ಷತೆಗಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆಯ ಕರಾಮತ್ತು ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ 38 ನಿಮಿಷದಲ್ಲಿ ಮನೆ ಬಳಿ ಬಂದಿರುವ ಚಿರತೆ ಮನೆಯ ಸುತ್ತ ಒಂದು ಸುತ್ತು ಹಾಕಿ ಏನಾದರೂ ಅಹಾರ ಸಿಗುತ್ತಾ ಎಂದು ಹುಡುಕಾಡಿದೆ. ಕೊನೆಗೆ ಮನೆಯ ಕಾಂಪೌಂಡ್ ಒಳಗೆ ನಾಯಿಯೊಂದು ನಿದ್ರೆಗೆ ಜಾರಿರುವುದು ಗೊತ್ತಾಗುತ್ತಲೆ ಸದ್ದಿಲ್ಲದೆ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಶ್ವಾನವನ್ನ ಹೊತ್ತೊಯ್ದಿದೆ. ಬೆಳಿಗ್ಗೆ ಎದ್ದು ಮನೆಯ ಮುಂದೆ ನಾಯಿ ಇಲ್ಲದಿರೋದನ್ನ ಗಮನಿಸಿದ ಮನೆಯವರು ಸುತ್ತ ಮುತ್ತ ಹುಡುಕಾಡಿದ್ದಾರೆ.

ಯಾರೋ ಕಳ್ಳರು ನಾಯಿ ಹೊತ್ತೊಯ್ದಿದ್ದಾರಾ ಎಂದು ಮನೆಯಲ್ಲಿದ್ದ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಚಿರತೆ ದೃಶ್ಯ ಸೆರೆಯಾಗಿದೆ. ಮನೆಯ ಸಮೀಪವೇ ಚಿರತೆ ಬಂದು ಹೋಗಿರುವ ವಿಚಾರ ತಿಳಿಯುತ್ತಲೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದ್ದು, ಕೂಡಲೆ ಚಿರತೆ ಸೆರೆಗೆ ಜನರು ಒತ್ತಾಯಿಸಿದ್ದಾರೆ.

ಚಿರತೆ ಬಗ್ಗೆ ಮಾಹಿತಿ ಇದ್ದು ಪರಿಶೀಲನೆಗಾಗಿ ನಮ್ಮ ಸಿಬ್ಬಂದಿ ಯನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಮಾಹಿತಿ ಖಚಿತಪಡಿಸಿಕೊಂಡ ಮುಂದಿನ ಕ್ರಮ ವಹಿಸುತ್ತೇವೆ ಎಂದು ಹಾಸನ ಡಿಸಿಎಫ್ ಡಾ.ಬಸವರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ

Covid Diary : ಕವಲಕ್ಕಿ ಮೇಲ್ ; ಕ್ಷಮಿಸಿ, ತರುಣ ಭಾರತದ ಕಥೆಯಲ್ಲಿ ‘…….‘ ಪದ ಬಹಳಸಲ ಪ್ರಯೋಗಿಸಿದೆ

ಬಾಲ್ಯ ವಿವಾಹ ತಡೆಗೆ ಸುರಕ್ಷಿಣಿ ವೆಬ್​ಸೈಟ್ ಆರಂಭ; ಮೌಢ್ಯ ಪದ್ಧತಿ ನಿವಾರಣೆಗೆ ಬಾಗಲಕೋಟೆ ಜಿಲ್ಲಾಡಳಿತದಿಂದ ನೂತನ ಪ್ರಯೋಗ

(scene where the leopard attacks a dog is captured in cc camera at hassan)

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ