ಮಾನಸಿಕ ಖಿನ್ನತೆ: ಯಾರು ಇಲ್ಲದ ವೇಳೆ ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

| Updated By: ಆಯೇಷಾ ಬಾನು

Updated on: Oct 07, 2021 | 10:02 PM

ಮನೆಯಲ್ಲಿ ಯಾರೂ ಇಲ್ಲದಾಗ ಬಸವಲಿಂಗಪ್ಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಲಿಂಗಪ್ಪ ಕೆಲವು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದರು.

ಮಾನಸಿಕ ಖಿನ್ನತೆ: ಯಾರು ಇಲ್ಲದ ವೇಳೆ ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ
ಮಾನಸಿಕ ಖಿನ್ನತೆ: ಯಾರು ಇಲ್ಲದ ವೇಳೆ ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ
Follow us on

ಹಾಸನ: ತಲೆಗೆ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮನೆಯಲ್ಲಿ ಬಸವಲಿಂಗಪ್ಪ(71) ಆತ್ಮಹತ್ಯೆಗೆ ಶರಣಾದ ವೃದ್ಧ.

ಮನೆಯಲ್ಲಿ ಯಾರೂ ಇಲ್ಲದಾಗ ಬಸವಲಿಂಗಪ್ಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಲಿಂಗಪ್ಪ ಕೆಲವು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದರು. ಇವರ ಪತ್ನಿ ಹಾಗೂ ಪುತ್ರ ವಿದೇಶದಲ್ಲಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ಗಳನ್ನ ಕದಿಯುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಕೋಲಾರ ಜಿಲ್ಲೆ ವೇಮಗಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್​ಗಳನ್ನ ಕದಿಯುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿನೋದ್ ರಾವ್, ಮಧುಕುಮಾರ್, ಹೆಚ್.ಎನ್.ರವಿತೇಜ, ಕೃಷ್ಣ ಕುಮಾರ್​​ ಬಂಧಿತ ಆರೋಪಿಗಳು. ಬಂಧಿತರಿಂದ‌ 7.7 ಲಕ್ಷ ಮೌಲ್ಯದ 17 ಬೈಕ್​ಗಳನ್ನು ಜಪ್ತಿ ಮಾಡಲಾಗಿದೆ.

ಐಪಿಎಲ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರ ಬಂಧನ
ಐಪಿಎಲ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರನ್ನು ದಾವಣಗೆರೆ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಯುವಕರನ್ನ ಬಂಧಿಸಿ 10,400 ನಗದು ವಶಕ್ಕೆ ಪಡೆದಿದ್ದಾರೆ. ಇನ್ನು ಇದೇ ರೀತಿ ಬಳ್ಳಾರಿ ಡಿಸಿಆರ್​ಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐಪಿಎಲ್​ ಬೆಟ್ಟಿಂಗ್​​ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಇರ್ಷಾದ್ ಅಲಿ, ಖಮರ್ ಷರೀಫ್, ಅಬ್ದುಲ್ ಖಾದರ್​​ ಬಂಧಿತ ಆರೋಪಿಗಳು. ಬಂಧಿತರಿಂದ 4,02,500 ನಗದು ಚೀಟಿಗಳನ್ನು ಜಪ್ತಿ ಮಾಡಲಾಗಿದ್ದು ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ತಾಯಿ ಇಲ್ಲದ ತಬ್ಬಲಿಯಾದ ಇಬ್ಬರು ಮಕ್ಕಳು

ಖಿನ್ನತೆಯಿಂದ ಬಳಲುತ್ತಿದ್ದ ನನ್ನ ಹಿಂದೆ ಬಂಡೆಯಂತೆ ನಿಂತು ಶೋ ಪುನರಾರಂಭಿಸಲು ಪ್ರೇರೇಪಿಸಿದ್ದು ನನ್ನ ಪತ್ನಿ ಗಿನ್ನಿ: ಕಪಿಲ್ ಶರ್ಮ

Published On - 9:25 pm, Thu, 7 October 21