ಸಲಿಂಗ ಕಾಮ ಕೇಸ್​ಗೆ ಬಿಗ್ ಟಿಸ್ಟ್: ಸೂರಜ್ ವಿರುದ್ಧವೇ ತಿರುಗಿ ಬಿದ್ದು ದೂರು ದಾಖಲಿಸಿದ ಆಪ್ತ ಶಿವಕುಮಾರ್​!

| Updated By: ರಮೇಶ್ ಬಿ. ಜವಳಗೇರಾ

Updated on: Jun 25, 2024 | 8:25 PM

ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಪರವಾಗಿ ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಇದೀಗ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಇದರಿಂದ ಸೂರಜ್​ ಮತ್ತೊಂದು ಸಂಕಷ್ಟ ಎದುರಾಗಿದೆ.​

ಸಲಿಂಗ ಕಾಮ ಕೇಸ್​ಗೆ ಬಿಗ್ ಟಿಸ್ಟ್: ಸೂರಜ್ ವಿರುದ್ಧವೇ ತಿರುಗಿ ಬಿದ್ದು ದೂರು ದಾಖಲಿಸಿದ ಆಪ್ತ ಶಿವಕುಮಾರ್​!
ಸೂರಜ್, ಶಿವಕುಮಾರ್
Follow us on

ಹಾಸನ, (ಜೂನ್ 25): ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಸೂರಜ್​ ರೇವಣ್ಣ (Suraj Revanna Case) ​​ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್​ ಪತ್ತೆಯಾಗಿದ್ದಾರೆ. ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ ಶಿವಕುಮಾರ್, ಸೂರಜ್ ರೇವಣ್ಣ ಬಂಧನವಾಗುತ್ತಿದ್ದಂತೆಯೇ ದಿಢೀರ್ ನಾಪತ್ತೆಯಾಗಿದ್ದ. ಆದ್ರೆ, ಇಂದು (ಜೂನ್ 25) ಶಿವಕುಮಾರ್ ಏಕಾಏಕಿ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಅಚ್ಚರಿ ಎಂಬಂತೆ ನೇರವಾಗಿ ಹೊಳೆನರಸೀಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಸೂರಜ್ ರೇವಣ್ಣ ವಿರುದ್ಧವೇ ದೂರು ನೀಡಿದ್ದಾರೆ.

ಜೆಡಿಎಸ್​ ಕಾರ್ಯಕರ್ತನೋರ್ವ ತನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಸೂರಜ್ ರೇವಣ್ಣ ವಿರುದ್ಧ ಸಿಎಂ, ಗೃಹ ಸಚಿವ ಕಚೇರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇತ್ತ ಸೂರಜ್​ ರೇವಣ್ಣನ ಆಪ್ತರಾಗಿದ್ದ ಶಿವಕುಮಾರ್ ಅವರು ಸಂತ್ರಸ್ತನ ವಿರುದ್ಧವೇ ಬ್ಲ್ಯಾಕ್​ ಮೇಲ್​ ದೂರು ದಾಖಲಿಸಿದ್ದರು. ಬಳಿಕ ಸಂತ್ರಸ್ತ, ಶಿವಕುಮಾರ್ ವಿರುದ್ಧವೇ ದೂರು ದಾಖಲಿಸಿದ್ದರು. ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಇದೀಗ ದಿಢೀರ್​ ಪ್ರತ್ಯಕ್ಷಗೊಂಡ ಶಿವಕುಮಾರ್ ತಮ್ಮ ನಿಲುವು ಬದಲಾಯಿಸಿ ಸೂರಜ್ ವಿರುದ್ಧವೇ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಸೂರಜ್ ರೇವಣ್ಣ ಪರ ದೂರು ನೀಡಿದ್ದ ಶಿವಕುಮಾರ್ ನಾಪತ್ತೆ, ಜತೆ ಇದ್ದು ಪಿತೂರಿ ಮಾಡಿದ್ನಾ?

ಶಿವಕಮಾರ ವಿರುದ್ಧವೂ ದಾಖಲಾಗಿದೆ ದೂರು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಹೀಗಾಗಿ ಸೂರಜ್‌ ಪ್ರಕರಣದಲ್ಲಿ ಶಿವಕುಮಾರ್ ಎರಡನೇ ಆರೋಪಿಯಾಗಿದ್ದಾನೆ.

ಸಿಐಡಿ ಕಸ್ಟಡಿಯಲ್ಲಿ ಸೂರಜ್

ಸಲಿಂಗ ಕಾಮ ಪ್ರಕರಣದಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಎಂಎಲ್‌ಸಿ ಸೂರಜ್‌ ರೇವಣ್ಣನನ್ನು (Suraj Revanna Case) 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್​ ಬುಧವಾರ ಆದೇಶ ಹೊರಡಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರಾದ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ. ಹೀಗಾಗಿ ಸಿಐಡಿ ಅಧಿಕಾರಿಗಳು ನಿನ್ನೆ (ಜೂನ್​ 24) ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ. ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Tue, 25 June 24