ಹಾಸನದಲ್ಲಿ ಗುಂಡೇಟಿಗೆ ವ್ಯಕ್ತಿ ಬಲಿ: ಕಾಡಂದಿ ಬೇಟೆ ವೇಳೆ ಮಿಸ್ ಫೈರ್ ಆಯ್ತೇ…?
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಗುಂಡು ಹಾರಿಸಿ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಗುಂಡು ಹಾರಿಸಿ ವ್ಯಕ್ತಿಯನ್ನು ಕೊಲೆ (Murder) ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮದ ಸುರೇಶ್(44) ಕೊಲೆಯಾದ ವ್ಯಕ್ತಿ. ಚಿಕ್ಕೂರು ತಾಂಡಾ ನಿವಾಸಿ ಗಂಗನಾಯ್ಕ ಮತ್ತು ನಂದೀಶ್ ಕಾಡು ಹಂದಿ ಬೇಟೆಗೆಂದು ತೆರೆಳಿದ್ದರು. ಈ ವೇಳೆ ಮಿಸ್ ಫೈರ್ ಆಗಿ ಸುರೇಶ್ಗೆ ಗುಂಡು ತಗುಲಿದೆ. ಇದರಿಂದ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮೃತ ಸುರೇಶ್ ಪತ್ನಿ ಭಾರತಿ ಬಾಣಾವರ ಠಾಣೆಗೆ ದೂರು ನೀಡಿದ್ದಾರೆ. ಇನ್ನೂ ಕೃತ್ಯವೆಸಗಿದ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಕ್ಯಾಂಟರ್ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ
ರಾಮನಗರ: ಕ್ಯಾಂಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮೋಹಳ್ಳಿ ಬಳಿ ನಡೆದಿದೆ. ಸವಾರ ಕಾರ್ತಿಕ್(20), ಶ್ರೀನಿವಾಸ್(19) ಮೃತ ದುರ್ದೈವಿಗಳು. ಘಟನೆಯಲ್ಲಿ ಲೋಹಿತ್ ಎಂಬುವರಿಗೆ ಗಾಯವಾವಾಗಿದ್ದು, ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನ ಗೋವಿಂದರಾಜನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:02 pm, Wed, 7 December 22