AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿ ಆರತಕ್ಷತೆಗೆಂದು ಹಾಲು ತರಲು ಹೋಗಿ ಹೆಣವಾದ ಅಣ್ಣ: ಹಾಸನದಲ್ಲೊಂದು ಮನಕಲಕುವ ಘಟನೆ

ಹಾಸನದಲ್ಲಿ ತಂಗಿಯ ಆರತಕ್ಷತೆಗಾಗಿ ಹಾಲು ತರಲು ಹೋಗಿದ್ದ ಅಣ್ಣ ಮತ್ತು ಸಂಬಂಧಿ ಬೈಕ್ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಂಬವೇ ತುಂಡಾಗಿದೆ. ಘಟನಾ ಸ್ಥಳಕ್ಕೆ ಸೂಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ತಂಗಿ ಆರತಕ್ಷತೆಗೆಂದು ಹಾಲು ತರಲು ಹೋಗಿ ಹೆಣವಾದ ಅಣ್ಣ: ಹಾಸನದಲ್ಲೊಂದು ಮನಕಲಕುವ ಘಟನೆ
ಸಾಂದರ್ಭಿಕ ಚಿತ್ರ
ಮಂಜುನಾಥ ಕೆಬಿ
| Updated By: ಪ್ರಸನ್ನ ಹೆಗಡೆ|

Updated on:Nov 27, 2025 | 5:19 PM

Share

ಹಾಸನ, ನವೆಂಬರ್​​ 27: ತಂಗಿ ಮದುವೆ ಹಿನ್ನಲೆ ಆರತಕ್ಷತೆ ಕಾರ್ಯಕ್ರಮಕ್ಕೆಂದು ಹಾಲು-ಮೊಸರು ತಲರಲು ಹೋದ ಅಣ್ಣ ಬೈಕ್​ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಲೋಕೇಶ್​​ (25) ಮತ್ತು ಆತನ ಸಂಬಂಧಿ ಕಿರಣ್​​ ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ಮದುವೆ ಸಂಭ್ರಮದಲ್ಲಿ ಮುಳುಗಿದ್ದ ಮನೆಯಲ್ಲಿ ಸೂತಕದ ಛಾಯೆ ಮೂಡಿದೆ.

ಬೈಕ್​ ಡಿಕ್ಕಿ ರಭಸಕ್ಕೆ ವಿದ್ಯುತ್​ ಕಂಬವೇ ತುಂಡು

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ತಂಗಿ ಮದುವೆ ಮುಗಿಸಿ ಬಂದಿದ್ದ ಲೋಕೇಶ್​​, ಆರತಕ್ಷತೆ ಕಾರ್ಯಕ್ರಮಕ್ಕಾಗಿ ತಯಾರಿ ಮಾಡುತ್ತಿದ್ದರು. ಬೆಳಗ್ಗೆ ಹೋಗಿ ಹಾಲು ಮತ್ತು ಮೊಸರು ತರಲು ಸಮಯ ಸಿಗಲ್ಲ ಎಂದು ರಾತ್ರಿ ಸಂಬಂಧಿ ಕಿರಣ್​ ಜೊತೆ ಬೇಲೂರು ಪಟ್ಟಣಕ್ಕೆ ಬಂದಿದ್ದರು. ಆದರೆ ಅವರಿಬ್ಬರೂ ಹಿಂದಿರುಗಿ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಗ್ರಾಮದ ರಸ್ತೆ ಬಳಿಯೇ ಲೋಕೇಶ್​​ ಮತ್ತು ಕಿರಣ್​​ ಮೃತದೇಹ ಪತ್ತೆಯಾಗಿವೆ. ವೇಗವಾಗಿ ಬಂದ ಬೈಕ್​​ ವಿದ್ಯುತ್​ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ವಿದ್ಯುತ್​ ಕಂಬವೇ ತುಂಡಾಗಿರೋದು ಕಂಡುಬಂದಿದೆ.

ಇದನ್ನೂ ಓದಿ: ಬೆಳಗ್ಗೆ ನಮಾಜ್​ಗೆ ಬಂದವನ ಅಟ್ಟಾಡಿಸಿ ಚುಚ್ಚಿ ಚುಚ್ಚಿ ಕೊಂದ ದುಷ್ಕರ್ಮಿಗಳು 

ಮನೆ ಮಗಳ ಮದುವೆ ಬಳಿಕ ಆರತಕ್ಷತೆಯನ್ನು ಊರಲ್ಲಿಯೇ ಮಾಡಬೇಕೆಂದು ನಿರ್ಧರಿಸಿದ್ದ ಲೋಕೆಶ್​​ ಕುಟುಂಬ ಅದಕ್ಕೆ ಅಗತ್ಯ ಸಿದ್ಧತೆಯನ್ನೂ ನಡೆಸಿತ್ತು. ಆದ್ರೆ ವಿಧಿ ಆಟ ಬೇರೆಯದೇ ಇತ್ತು. ಇನ್ನೇನು ಸ್ವಲ್ಪ ದೂರ ತೆರಳಿದರೆ ಇವರು ಮನೆ ತಲುಪುತಿದ್ದರು ಎನ್ನುವ ವೇಳೆ ಅಪಘಾತ ನಡೆದಿದೆ. ರಾತ್ರಿ ವೇಳೆಯಾದ್ದರಿಂದ ಘಟನೆ ಯಾರ ಗಮನಕ್ಕೂ ಬಾರದೆ ಗಂಭೀರ ಗಾಯಗೊಂಡಿದ್ದ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೂ ಘಟನೆ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನಲೆ ಸ್ಥಳಕ್ಕೆ ಸೂಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಾಸನದ ಹಿಮ್ಸ್​​ನಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಟುಂಬಕ್ಕೆ ಆಧಾರವಾಗಿದ್ದ ಮಕ್ಕಳ ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:15 pm, Thu, 27 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ