AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಯೋಧನಿಗೆ ಗೌರವ ಸಲ್ಲಿಸಿಲ್ಲವೆಂದು ಹಾಸನ ಡಿಸಿ ಕಚೇರಿ ಬಳಿ ಪಾರ್ಥಿವ ಶರೀರ ತಂದು ಪ್ರತಿಭಟನೆ

ಮೃತ ಯೋಧ ಮಧು ಅವರ ಪಾರ್ಥಿವ ಶರೀರವನ್ನು ನೇರವಾಗಿ ಡಿಸಿ ಕಚೇರಿಗೆ ತಂದಿದ್ದರಿಂದ ಪ್ರತಿಭಟನೆ ತೀವ್ರಗೊಂಡಿತು. ಜಿಲ್ಲಾಧಿಕಾರಿ ಲತಾಕುಮಾರಿ ಸ್ಥಳಕ್ಕೆ ಧಾವಿಸಿ, ಆಲೂರಿನಲ್ಲಿ ವ್ಯವಸ್ಥೆ ಮಾಡಿದ್ದ ಬಗ್ಗೆ ಸ್ಪಷ್ಟನೆ ನೀಡಿದರು. ಕುಟುಂಬಸ್ಥರನ್ನು ಸಮಾಧಾನಪಡಿಸಿ, ಪಾರ್ಥಿವ ಶರೀರವನ್ನು ಅಂತಿಮ ಸಂಸ್ಕಾರಕ್ಕಾಗಿ ಹಂಜೀಹಳ್ಳಿಗೆ ಕೊಂಡೊಯ್ಯಲು ಮನವೊಲಿಸಿದರು. ಗೊಂದಲ ನಿವಾರಿಸಿ, ಕುಟುಂಬಕ್ಕೆ ಸಾಂತ್ವನ ನೀಡಲಾಯಿತು.

ಮೃತ ಯೋಧನಿಗೆ ಗೌರವ ಸಲ್ಲಿಸಿಲ್ಲವೆಂದು ಹಾಸನ ಡಿಸಿ ಕಚೇರಿ ಬಳಿ ಪಾರ್ಥಿವ ಶರೀರ ತಂದು ಪ್ರತಿಭಟನೆ
ಪಾರ್ಥಿವ ಶರೀರ, ಜಿಲ್ಲಾಧಿಕಾರಿ ಲತಾಕುಮಾರಿ
ಮಂಜುನಾಥ ಕೆಬಿ
| Edited By: |

Updated on: Sep 12, 2026 | 8:21 PM

Share

ಹಾಸನ, ಸೆ.12: ಕರ್ತವ್ಯದಲ್ಲಿದ್ದಾಗ ಅನಾರೋಗ್ಯದಿಂದ ಮೃತಪಟ್ಟ ಯೋಧನ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ಸೂಕ್ತ ಗೌರವ ಸಲ್ಲಿಸಿಲ್ಲ ಎಂದು ಆರೋಪಿಸಿ, ಯೋಧನ ಪಾರ್ಥಿವ ಶರೀರವನ್ನು ಹಾಸನ ಜಿಲ್ಲಾಧಿಕಾರಿ (DC) ಕಚೇರಿಯ ಮುಂಭಾಗ ತಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಭಾರಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಂಜೀಹಳ್ಳಿ ಗ್ರಾಮದ ಯೋಧ ಮಧು ಹೆಚ್. ಅವರು ಅನಾರೋಗ್ಯದ ಕಾರಣದಿಂದ ಸೆಪ್ಟೆಂಬರ್ 10ರ ಗುರುವಾರ ಕರ್ತವ್ಯ ನಿರತರಾಗಿದ್ದಾಗಲೇ ಮೃತಪಟ್ಟಿದ್ದರು. ಶನಿವಾರ (ಸೆ.12) ಅವರ ಪಾರ್ಥಿವ ಶರೀರ ಹಾಸನಕ್ಕೆ ಆಗಮಿಸಿತ್ತು.

ಪಾರ್ಥಿವ ಶರೀರ ಹಾಸನಕ್ಕೆ ತಲುಪುತ್ತಿದ್ದಂತೆಯೇ, ಯೋಧನ ಕುಟುಂಬಸ್ಥರು ಹಾಗೂ ನೂರಾರು ಸಾರ್ವಜನಿಕರು ಆಂಬ್ಯುಲೆನ್ಸ್ ಅನ್ನು ನೇರವಾಗಿ ಡಿಸಿ ಕಚೇರಿ ಮುಂಭಾಗಕ್ಕೆ ತಂದಿದ್ದರು. ಆದರೆ, ಈ ವೇಳೆ ಶವಕ್ಕೆ ಅಂತಿಮ ನಮನ ಸಲ್ಲಿಸಲು ಜಿಲ್ಲಾಡಳಿತದ ಯಾವುದೇ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಇಲ್ಲದಿರುವುದನ್ನು ಕಂಡು ಅಕ್ರೋಶಗೊಂಡರು.

ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಯೋಧನ ಪಾರ್ಥಿವ ಶರೀರ ಇದ್ದ ವಾಹನವನ್ನೇ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಬಿಎಂ ರಸ್ತೆ ತಡೆದು ದಿಢೀರ್ ಧರಣಿ ನಡೆಸಿದರು. ಸ್ಥಳಕ್ಕೆ ತಕ್ಷಣವೇ ಜಿಲ್ಲಾಧಿಕಾರಿಗಳು ಆಗಮಿಸಬೇಕೆಂದು ಪಟ್ಟು ಹಿಡಿದ ಕಾರಣ ಕೆಲ ಕಾಲ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪರದಾಡಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಮೃತ ಯೋಧ ಮಧು ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಕುಟುಂಬ ಸದಸ್ಯರನ್ನು ಸಮಾಧಾನಪಡಿಸಿ ಗೊಂದಲದ ಕುರಿತು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ; ಬಯಲು ಸೀಮೆಯ ಜನರ ದಶಕಗಳ ಕನಸು ನನಸು: ಅಕ್ಟೋಬರ್ ಅಂತ್ಯಕ್ಕೆ ‘ಎತ್ತಿನಹೊಳೆ’ ಟ್ರಯಲ್ ರನ್‌ಗೆ ಮುಹೂರ್ತ

“ಯೋಧನ ಪಾರ್ಥಿವ ಶರೀರವು ನೇರವಾಗಿ ಅವರ ಸ್ವಗ್ರಾಮವಿರುವ ಆಲೂರು ತಾಲೂಕಿಗೆ ತೆರಳಲಿದೆ ಎಂಬ ಮಾಹಿತಿ ನಮಗಿತ್ತು. ಹೀಗಾಗಿ ಆಲೂರಿನಲ್ಲಿಯೇ ಎಲ್ಲಾ ರೀತಿಯ ಸರ್ಕಾರಿ ಗೌರವ ಸಲ್ಲಿಕೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ, ಪಾರ್ಥಿವ ಶರೀರವನ್ನು ನೇರವಾಗಿ ಡಿಸಿ ಕಚೇರಿಗೆ ತರಲಾಗಿದ್ದರಿಂದ ಈ ರೀತಿಯ ಗೊಂದಲ ಉಂಟಾಗಿದೆ,” ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆದ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಅಂತಿಮ ಸಂಸ್ಕಾರಕ್ಕಾಗಿ ಆಲೂರು ತಾಲೂಕಿನ ಹಂಜೀಹಳ್ಳಿ ಗ್ರಾಮಕ್ಕೆ ತೆಗೆದುಕೊಂಡು ಹೋದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!