AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಆಪರೇಷನ್ ಹಿಂದೆ ಸರ್ಕಾರದ ಪಿತೂರಿ: ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ; ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ

ಸ್ಟಿಂಗ್ ಆಪರೇಷನ್ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಬಳಿಕ, ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೆಪಿಎಸ್‌ಸಿ ಹಗರಣ ಮುಚ್ಚಿಹಾಕಲು ಸರ್ಕಾರ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಮ್ಮ ಕಾರ್ಯಕರ್ತರ ಕುಟುಂಬಗಳಿಗೆ ಕಿರುಕುಳ ನೀಡಲಾಗುತ್ತಿದೆ, ಮತ್ತು ಪ್ರಿಯಾಂಕ್ ಖರ್ಗೆ ಈ ಸ್ಟಿಂಗ್ ಪ್ರೇರಣೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸ್ಟಿಂಗ್ ಆಪರೇಷನ್ ಹಿಂದೆ ಸರ್ಕಾರದ ಪಿತೂರಿ: ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ; ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ
ಹೆಚ್​ಡಿಕೆ ಮತ್ತು ಪ್ರಿಯಾಂಕ ಖರ್ಗೆ
ಮಂಜುನಾಥ ಕೆಬಿ
| Edited By: |

Updated on:Oct 24, 2026 | 1:31 PM

Share

ಹಾಸನ, ಅ.24: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Sting Operation) ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕೆಪಿಎಸ್ಸಿ (KPSC) ಹಗರಣ ಮುಚ್ಚಿಕೊಳ್ಳಲು ಸರ್ಕಾರವು ಕೆಲ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.

ಸಚಿವ ಡಾ.ಯತೀಂದ್ರ ಅವರು ಪಕ್ಷದ ಕಾರ್ಯಕರ್ತರು ಹಾಗೂ ಖಾಸಗಿ ವಾಹಿನಿಯೊಬ್ಬರು ಸೇರಿ ಈ ಪಿತೂರಿ ನಡೆಸಿರುವುದನ್ನು ತಾತ್ಕಾಲಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ನಮ್ಮ ಪಕ್ಷದ ವಾರ್ ರೂಮ್‌ನಲ್ಲಿ ಕೆಲಸ ಮಾಡುವ ಯುವಕರ ಕುಟುಂಬಗಳಿಗೆ ಗೃಹ ಇಲಾಖೆಯಿಂದ ಸರ್ಚ್ ವಾರಂಟ್ ಕೊಟ್ಟು, ನೀವು ಕ್ರೈಂ ಚಟುವಟಿಕೆಗಳಲ್ಲಿದ್ದೀರಾ ಎಂದು ಪೊಲೀಸರ ಮೂಲಕ ಬೆದರಿಕೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನೆಯಲ್ಲಿದ್ದ ಹೆಣ್ಣುಮಕ್ಕಳಲ್ಲಿ ಭಯ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸ್ಟಿಂಗ್ ಆಪರೇಷನ್ ಮಾಡಿರುವ ವ್ಯಕ್ತಿ ತಾನೇ ನೇರವಾಗಿ ಮಾಡಿದ್ದೇನೆ ಎಂದು ಜಗಜ್ಜಾಹೀರು ಮಾಡಿದ್ದರೂ ಸಹ, ಆ ವ್ಯಕ್ತಿ ಸ್ವತಂತ್ರವಾಗಿ ಓಡಾಡಲು ರಾಜ್ಯ ಸರ್ಕಾರವೇ ಸಂಪೂರ್ಣ ಅವಕಾಶ ಕಲ್ಪಿಸಿದೆ ಎಂದು ವಾಗ್ದಾಳಿ ನಡೆಸಿದರು. ಯಾವ ಕಾರಣಕ್ಕಾಗಿ ಈ ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂಬುದು ರಾಜ್ಯದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಿಗೆ ಸಂಪೂರ್ಣವಾಗಿ ತಿಳಿದಿದೆ. ಆ ಸತ್ಯ ಮುಚ್ಚಿಟ್ಟು ನಮ್ಮನ್ನು ಬ್ಲಾಕ್‌ಮೇಲ್ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕೆಪಿಎಸ್​​ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್​ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಡಿ.ಕೆ. ಶಿವಕುಮಾರ್ ಅನುಮತಿ

ಈ ಸ್ಟಿಂಗ್ ಮಾಡಲು ಪ್ರೇರೇಪಣೆ ಮಾಡಿದ್ದು ಯಾರು? ಪ್ರಿಯಾಂಕ್ ಖರ್ಗೆ ಅವರು ಇದನ್ನ ಯಾಕೆ ಸೃಷ್ಟಿ ಮಾಡಿದ್ದಾರೆ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ, ಜೆಡಿಎಸ್ ಪಕ್ಷದಿಂದಲೇ ಇದನ್ನು ಮಾಡಲಾಗಿದೆ ಎಂದು ಬಿಂಬಿಸಲು ಹೊರಟಿದ್ದಾರೆ. ಇಂತಹ ಕುತಂತ್ರಗಳನ್ನು ಎದುರಿಸಲು ನಮ್ಮ ಪಕ್ಷ ಸಂಪೂರ್ಣ ಶಕ್ತವಾಗಿದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Sat, 24 October 26

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More