AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ(ಮೇ.29) ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ಅವಾಂತರವೇ ಸೃಷ್ಠಿಯಾಗಿದೆ. ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೇಷ್ಟು ಹಾನಿಯಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ಮಳೆ ಅವಾಂತರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 31, 2023 | 11:18 AM

Share

ಹಾಸನ: ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ(ಮೇ.29) ಜಿಲ್ಲೆಯ ಬೇಲೂರು(Belur) ತಾಲ್ಲೂಕಿನ ಹಲವೆಡೆ ಸುರಿದ ಧಾರಾಕಾರ ಮಳೆ(Rain)ಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಹೌದು ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು ನೆಲಕ್ಕುರಳಿದ್ದು. ವಾಸದ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಬೇಲೂರು, ಚೀಕನಹಳ್ಳಿ,, ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು, ಮೂರು ಟ್ರಾನ್ಸ್‌ಫಾರ್ಮರ್‌ಗಳು ಧರೆಗುರುಳಿವೆ. ಜೊತೆಗೆ ಧರ್ಮೇಗೌಡ ಎಂಬುವವರ ಜಮೀನಿನಲ್ಲಿದ್ದ ನೂರಾರು ಬಾಳೆಗಿಡಗಳು ಬಿದ್ದಿದ್ದು, ರೈತ ಕಂಗಲಾಗಿದ್ದಾನೆ.

ಇನ್ನು ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ನೆಲಕ್ಕುರುಳಿದ ಮರಗಳನ್ನು ಸಾರ್ವಜನಿಕರು ತೆರವುಗೊಳಿಸುತ್ತಿದ್ದಾರೆ. ಇಷ್ಟೇಲ್ಲ ಅಪಾರ ಹಾನಿ ಸಂಭವಿಸಿದ್ದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಾರದೆ ಬೇಜವಾಬ್ದಾರಿ ತೋರಿಸಿದ್ದಾರೆ. ಇವರ ಈ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ:Karnataka Rain Photos: ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳ ಮಳೆ ಅವಾಂತರ ಫೋಟೋಗಳು ಇಲ್ಲಿವೆ

ಬಿರುಗಾಳಿ, ಮಳೆಗೆ ಮೇಲ್ಚಾವಣಿ ಕುಸಿತ; ದೃಷ್ಟವಶಾತ್ ತಪ್ಪಿದ ಬಾರಿ ಅನಾಹುತ

ಚಿತ್ರದುರ್ಗ: ಜಿಲ್ಲೆಯ ಕೆಲವೆಡೆ ನಿನ್ನೆ(ಮೇ.29) ರಾತ್ರಿ ಬಿರುಗಾಳಿ‌ ಸಹಿತ ಸುರಿದ ಮಳೆಗೆ ಎಂ.ಡಿ.ಕೋಟೆಯಲ್ಲಿ ಮೇಲ್ಚಾವಣಿ ಕುಸಿತವಾಗಿದರೇ, ಬಸಪ್ಪನಮಾಳಿಗೆಯಲ್ಲಿ ಮನೆಯ ಶೀಟುಗಳು ಗಾಳಿಗೆ ಹಾರಿವೆ. ಸದ್ಯ ಮನೆಗಳಲ್ಲಿದ್ದ ನಿವಾಸಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಕೊಪ್ಪಳದಲ್ಲಿ ಗಾಳಿ ಮಳೆಗೆ ನೆಲಕ್ಕುರಳಿದ ಮರಗಳು

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನಮಸಾಗರ ಗ್ರಾಮದ ವಾರ್ಡ್ ನಂಬರ್ ಒಂದರಲ್ಲಿ ಬಿರುಗಾಳಿ ಸಹಿತ ಮಳೆಗೆ ಮರಗಿಡಗಳು ನೆಲಕ್ಕೆ ಉರುಳಿದಿವೆ. ಇದರ ಪರಿಣಾಮ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಕೆಲವು ಕಡೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ.

ಬಿರುಗಾಳಿ ಮಳೆ ಅವಾಂತರದ ಎಫೆಕ್ಟ್; ಪ್ರಸಿದ್ದ KRS ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ

ಮಂಡ್ಯ: ಜಿಲ್ಲೆಯಲ್ಲಿ ನಿನ್ನೆ ಸುರಿದ ಬಿರುಗಾಳಿ ಮಳೆ ಅವಾಂತರದ ಪರಿಣಾಮದಿಂದ ಪ್ರಸಿದ್ದ KRS ಬೃಂದಾವನಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಹೌದು ಮರ ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದ ಹಿನ್ನಲೆ KRS ಬೃಂದಾವನ, ಕಾವೇರಿ ನೀರಾವರಿ ನಿಗಮದಿಂದ ಪ್ರವಾಸಿಗರಿಗೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಇಂದು(ಮೇ.30) ಬೃಂದಾವನದಲ್ಲಿ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ, ಉರುಳಿ ಬಿದ್ದ ಮರಗಳು ತೆರವು ಕಾರ್ಯಾ ನಡೆಯಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Tue, 30 May 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ