ಹಾಸನ: ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ-75 ತಡೆದು ವಿದ್ಯಾರ್ಥಿಗಖು ಧರಣಿ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಸಕಲೇಶಪುರದಿಂದ ಹಾಸನಕ್ಕೆ ಹೋಗಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿ ಕೂಡಲೇ ಶಾಲಾ, ಕಾಲೇಜು ಸಮಯಕ್ಕೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದಾರೆ. ಸಕಲೇಶಪುರ ಡಿಪೋವನ್ನು ಚಿಕ್ಕಮಗಳೂರು ವಿಭಾಗದಿಂದ ಹಾಸನ ವಿಭಾಗಕ್ಕೆ ಬದಲಾಯಿಸುವಂತೆಯೂ ಒತ್ತಾಯಿಸಿದ್ದಾರೆ.
ಇನ್ನು ಬೀದರ್ ಜಿಲ್ಲೆಯ ಸುಮಾರು 80 ಹಳ್ಳಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ. ಮಕ್ಕಳು ನಡೆದುಕೊಂಡೇ ಶಾಲೆಗಳಿಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಕೆಲ ಗ್ರಾಮಗಳಲ್ಲಿ ಬಸ್ ಇಲ್ಲ. ಇನ್ನು ಕೆಲ ಗ್ರಾಮಗಳಲ್ಲಿ ಬಸ್ ಇದ್ದರೂ ಸಮಯಕ್ಕೆ ಸರಿಯಾಗಿ ಬರಲ್ಲ. ಹೀಗಾಗಿ ಮಕ್ಕಳು ನಡೆದುಕೊಂಡು ಹೋಗಿ ಶಿಕ್ಷಣ ಪಡೆಯಬೇಕಾಗಿದೆ. ಸಮಯಕ್ಕೆ ಸರಿಯಾಗಿ ಬಸ್ ಬಿಡಿ, ಬಸ್ ಹೋಗದ ಊರಿಗೂ ಬಸ್ ಬಿಡಿ ಅಂತ ಎಬಿವಿಪಿ ಕಾರ್ಯಕರ್ತರು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದಾರೆ.
ಹೆಣ್ಣು ಮಕ್ಕಳು ನಡೆದುಕೊಂಡೆ ಶಾಲೆಗೆ ಹೋಗುತ್ತಿದ್ದಾರೆ. ಸುಮಾರು 4ರಿಂದ 5ಕಿಲೋಮೀಟರ್ ನಡೆದು ಶಾಲೆಗೆ ಹೋಗುತ್ತಿದ್ದಾರೆ. ಮಕ್ಕಳಿಗೆ ತುಂಬಾ ಸುಸ್ತಾಗುತ್ತಿದೆ. ಬಸ್ ವ್ಯವಸ್ಥೆಯಿಲ್ಲದೆ ರಾತ್ರಿ ವೇಳೆ ನಡೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕೇರ್ ಮಾಡುತ್ತಿಲ್ಲ ಅಂತ ಮಹಿಳೆಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ
ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಬೆಳಗಾವಿ ವೈಭವನಗರದ ‘ಲಂಚ ವೈಭವ’ ಮನೆ ಮೇಲೆ ಎಸಿಬಿ ದಾಳಿ; ಡಾಲರ್ ನೋಟುಗಳು ಪತ್ತೆ- ಇದು ಗ್ರೂಪ್ ಸಿ ನೌಕರನ ಮನೆ