AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ನರಕಮಯವಾದ ಬಾಲಕಿಯರ ಹಾಸ್ಟೆಲ್​​! ಕನಿಷ್ಠ ಮೂಲ ಸೌಕರ್ಯವಿಲ್ಲದೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಕ್ಕಳು

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯ ಹಿನ್ನಲೆ ಒಂದು ವಾರಗಳು ಶಾಲೆಗಳಿಗೆ ರಜೆ ನೀಡಲಾಗಿತ್ತು. ಅದರಂತೆ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ನೆಲೆಸಿರುವ ಮಕ್ಕಳಿಗೂ ಮಳೆ ಅವಾಂತರದ ಬಿಸಿ ತಟ್ಟಿದ್ದು, ಕನಿಷ್ಠ ಮೂಲ ಸೌಕರ್ಯವಿಲ್ಲದೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Hassan News: ನರಕಮಯವಾದ ಬಾಲಕಿಯರ ಹಾಸ್ಟೆಲ್​​! ಕನಿಷ್ಠ ಮೂಲ ಸೌಕರ್ಯವಿಲ್ಲದೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಕ್ಕಳು
ನರಕಮಯವಾದ ಸಕಲೇಶಪುರ ತಾಲ್ಲೂಕಿನ ಬಾಲಕಿಯರ ಹಾಸ್ಟೆಲ್
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 28, 2023 | 8:05 AM

Share

ಹಾಸನ, ಜು.28: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಂತೆ ಮತ್ತಷ್ಟು ಮಳೆ ಹೆಚ್ಚಾಗುವ ಆತಂಕದಿಂದ ಜಿಲ್ಲೆಯ ಶಾಲೆಗಳಿಗೆ ಇವತ್ತೀನವರೆಗೂ ರಜೆ ಘೋಷಿಸಲಾಗಿತ್ತು. ಆದ್ರೆ, ವಸತಿ ಶಾಲೆಗಳಲ್ಲಿ ನೆಲೆಸಿರುವ ಮಕ್ಕಳಿಗೂ ಮಳೆ ಅವಾಂತರದ ಬಿಸಿ ತಟ್ಟಿದ್ದು, ಹಾಸನ ಜಿಲ್ಲೆಯ ಸಕಲೇಶಪುರ(Sakleshpur) ತಾಲ್ಲೂಕಿನ ಹೆತ್ತೂರು ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆ(Girls Residential School)ಯಲ್ಲಿ ಅವ್ಯವಸ್ಥೆಗಳ ಆಗರದ ಜೊತೆಗೆ ಮಳೆಯಿಂದ ಸೋರುವಂತಹ ಕೊಠಡಿಗಳಲ್ಲಿ ಮಕ್ಕಳು ಪಾಠ ಕಲಿಯಬೇಕಾದ ದುಸ್ಥಿತಿ ಎದುರಾಗಿದ್ದು, ಸೂಕ್ತ ವ್ಯವಸ್ಥೆ ಮಾಡದ ಆಧಿಕಾರಿಗಳು ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು, ಕಳೆದ ಹಲವು ವರ್ಷಗಳಿಂದ ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ನಡೆಸಲಾಗುತ್ತಿದೆ. ವಸತಿ ಶಾಲೆಯಲ್ಲಿ ಯಾವಾಗಬೇಕಿದ್ದರೂ ಕುಸಿದು ಬೀಳುವ ಸ್ಥಿತಿಯ ಕಟ್ಟಡದಲ್ಲಿ ಮಕ್ಕಳು ಆತಂಕದ ನಡುವೆ ದಿನ ದೂಡುತ್ತಿದ್ದಾರೆ. 160 ವಿದ್ಯಾರ್ಥಿನಿಯರು ನೆಲೆಸಿರುವ ಈ ವಸತಿ ಶಾಲೆಯಲ್ಲಿ ಕೇವಲ 5 ಶೌಚಾಲಯ ಇದೆ. ಅದರಲ್ಲಿ ಎರಡಕ್ಕೆ ಬಾಗಿಲೇ ಇಲ್ಲವೆನ್ನುವ ಆಘಾತಕಾರಿ ವಿಚಾರ ಇದೀಗ ಬೆಳಕಿಗೆ ಬಂದಿದೆ. 6 ತರಗತಿಯಿಂದ 10ನೇ ತರಗತಿವರೆಗೆ ಮಕ್ಕಳು ಇಲ್ಲಿ ನೆಲೆಸಿದ್ದು, ಒಂದೇ ಕೋಠಡಿಯಲ್ಲಿ ವಾಸ, ನೆಲದ ಮೇಲೆ ಕೂತು ಊಟ ಮಾಡಬೇಕಾದ ಪರಿಸ್ಥೀತಿ ಇದೆ.

ಇದನ್ನೂ ಓದಿ:Chikkaballapur: ಬಾಲಕಿಯರ ವಸತಿ ನಿಲಯಕ್ಕೆ ಬೀದಿ ಕಾಮಣ್ಣರ ಕಾಟ! ಹಾಸ್ಟೆಲ್ ಸಿಬ್ಬಂದಿಯ ವಿರುದ್ದ ಸ್ಥಳೀಯರ ಪ್ರತಿಭಟನೆ

ಅಗತ್ಯ ಮೂಲಸೌಕರ್ಯವೂ ಇಲ್ಲ

ಕಳೆದ ಒಂದು ವಾರಗಳಿಂದ ಸತತವಾಗಿ ಹೆತ್ತೂರು ಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದ ಮಳೆ ಸುರಿಯುತ್ತಿದ್ದು, ಸ್ನಾನಕ್ಕೆ ಬಿಸಿನೀರು ಸಿಗುತ್ತಿಲ್ಲ. ಶಾಲಾ ಕೊಠಡಿ, ಡೈನಿಂಗ್ ಹಾಲ್, ವಾಸದ ಮನೆ ಎಲ್ಲವೂ ಸೋರುತ್ತಿದೆ. ಹಲವು ತಿಂಗಳಿನಿಂದ ಇದೇ ಸ್ಥಿತಿ ಇದ್ದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಈ ಹಾಸ್ಟೆಲ್​ಗೆ ಸ್ವಂತ ಕಟ್ಟಡ ಇಲ್ಲ. ಲಕ್ಷ ಲಕ್ಷ ಬಾಡಿಗೆ ಹಣ ಕೊಟ್ಟು ಖಾಸಗಿ ಕಟ್ಟಡದಲ್ಲಿ ಹಾಸ್ಟೆಲ್​ ನಡೆಸಲಾಗುತ್ತಿದೆ. ಆದ್ರೆ, ಯಾವುದೇ ಕನಿಷ್ಟ ಮೂಲಸೌಲಭ್ಯ ಇಲ್ಲದ ಕಡೆಯಲ್ಲಿ, ಹೇಗೆ ಹೆಣ್ಣು ಮಕ್ಕಳನ್ನು ಉಳಿದುಕೊಳ್ಳಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ ಎಂದು ಪೋಷಕರು ಅಸಮಧಾನ ಹೊರ ಹಾಕಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ದೂರು

ಇದರಿಂದ ಬೇಸತ್ತ ಮಕ್ಕಳು ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಮಕ್ಕಳ ಹಕ್ಕುಗಳ ಸಮಿತಿ ಸಂಘಟನೆ ಕಾರ್ಯಕರ್ತರು ಕೂಡಲೇ ಸಮಸ್ಯೆಯ ಸುಳಿಗೆ ಸಿಲುಕಿರುವ ಮಕ್ಕಳಿಗೆ ಯಾವುದೇ ಅಪಾಯ ಆಗುವ ಮೊದಲು ಮಕ್ಕಳಿಗೆ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರ ಮಾಡಿ ಹಾಗೂ ಶೀಘ್ರವಾಗಿ ಸ್ವಂತ ಕಟ್ಟಡ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ