AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದಲ್ಲಿ ನೈತಿಕತೆ ಮೂಡಿಸುವ ಶಿಕ್ಷಣ ಅವಶ್ಯಕತೆ ಇದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಇಂದು ಸಮಾಜದಲ್ಲಿ ನೈತಿಕತೆಯನ್ನು ಮೂಡಿಸುವ ಶಿಕ್ಷಣದ ಅವಶ್ಯಕತೆಯಿದೆ, ಆಧುನಿಕ ಜ್ಞಾನ, ರಾಷ್ಟ್ರದ ಏಕತೆ-ಸಮಗ್ರತೆ, ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯೊಂದಿಗೆ ಸಂಸ್ಕೃತಿಯನ್ನು ಸಂರಕ್ಷಿಸುವ ಶಿಕ್ಷಣದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಸಮಾಜದಲ್ಲಿ ನೈತಿಕತೆ ಮೂಡಿಸುವ ಶಿಕ್ಷಣ ಅವಶ್ಯಕತೆ ಇದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಥಾವರ್ ಚಂದ್ ಗೆಹ್ಲೋಟ್
Rakesh Nayak Manchi
|

Updated on: Jun 04, 2023 | 1:32 PM

Share

ಹಾಸನ: ಇಂದು ಸಮಾಜದಲ್ಲಿ ನೈತಿಕತೆಯನ್ನು ಮೂಡಿಸುವ ಶಿಕ್ಷಣದ ಅವಶ್ಯಕತೆಯಿದೆ, ಆಧುನಿಕ ಜ್ಞಾನ, ರಾಷ್ಟ್ರದ ಏಕತೆ-ಸಮಗ್ರತೆ, ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯೊಂದಿಗೆ ಸಂಸ್ಕೃತಿಯನ್ನು ಸಂರಕ್ಷಿಸುವ ಶಿಕ್ಷಣದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದ್ದಾರೆ. ಹಾಸನದ ಸೇಂಟ್ ಜೋಸೆಫ್ ಕಾಲೇಜಿನ ನವೀಕೃತ ಕಟ್ಟಡವನ್ನು ಉದ್ಘಾಟಿಸಿದ ನಂತರ ರಾಜ್ಯಪಾಲರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಭಾಷಣದ ವೇಳೆ ಗುಣಮಟ್ಟದ ಶಿಕ್ಷಣ ಮತ್ತು ಒಳಗೊಳ್ಳುವಿಕೆಯ ಮಹತ್ವವನ್ನು ಒತ್ತಿ ಹೇಳಿದ ರಾಜ್ಯಪಾಲರು, ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣದಿಂದ ನೈತಿಕತೆ ಮೂಡಬೇಕು ಎಂದರು.

ಸ್ವಾಮಿ ವಿವೇಕಾನಂದರ ಪ್ರಕಾರ, ಶಿಕ್ಷಣವು ವ್ಯಕ್ತಿತ್ವ, ಮಾನಸಿಕ ಬೆಳವಣಿಗೆ ಮತ್ತು ಬುದ್ಧಿವಂತಿಕೆಯನ್ನು ನಿರ್ಮಿಸುತ್ತದೆ. ಅದೇ ಚಿಂತನೆಯನ್ನು ಇಟ್ಟುಕೊಂಡು, ಸೇಂಟ್ ಜೋಸೆಫ್ ಸಂಸ್ಥೆಗಳು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ರಾಜ್ಯಪಾಲರು ಹೇಳಿದರು.

ಇದನ್ನೂ ಓದಿ: CBSE Supplementary Exam 2023: ತರಗತಿ 10, 12 ಪೂರಕ ಪರೀಕ್ಷೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 15

ಪ್ರಖರ ಮನಸ್ಸುಗಳನ್ನು ಪೋಷಿಸಲು ಮತ್ತು ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡುವ ಶ್ರೇಷ್ಠ ನಾಗರಿಕರನ್ನಾಗಿ ರೂಪಿಸಲು ಸಂಸ್ಥೆಯ ಬದ್ಧತೆಯನ್ನು ರಾಜ್ಯಪಾಲರು ಶ್ಲಾಘಿಸಿದರು. “ಸೇಂಟ್ ಜೋಸೆಫ್ಸ್ ಕಾಲೇಜ್ ಸತತವಾಗಿ ಒಳಗೊಳ್ಳುವಿಕೆಯನ್ನು ಬೆಳೆಸುವ ಜೊತೆಗೆ ಅತ್ಯುತ್ತಮ ಶಿಕ್ಷಣವನ್ನು ನೀಡುವ ತನ್ನ ಪರಂಪರೆಯನ್ನು ಉಳಿಸಿಕೊಂಡಿದೆ” ಎಂದು ಗೆಹ್ಲೋಟ್ ಹೇಳಿದರು.

ಸೇಂಟ್ ಜೋಸೆಫ್ಸ್ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಿಯೋನಿಸಿಯಸ್ ಫೆರ್ನಾಂಡಿಸ್ ಮಾತನಾಡಿ, ಕಾಲೇಜಿನ ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಸಮಗ್ರ ಅಭಿವೃದ್ಧಿಯ ಅನ್ವೇಷಣೆಯಲ್ಲಿ ಹೊಸ ಕಾಲೇಜು ಕಟ್ಟಡದ ನಿರ್ಮಾಣವು ಮಹತ್ವದ ಹೆಜ್ಜೆಯಾಗಿದೆ. ಇದು ವಿದ್ಯಾರ್ಥಿಗಳಿಗೆ ಸುಧಾರಿತ ತರಗತಿ ಕೊಠಡಿಗಳು, ಅತ್ಯಾಧುನಿಕ ಪ್ರಯೋಗಾಲಯಗಳು, ಸುಸಜ್ಜಿತ ಗ್ರಂಥಾಲಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ. ಹೊಸದಾಗಿ ನಿರ್ಮಿಸಲಾದ ಕಾಲೇಜು ಕಟ್ಟಡವು ತನ್ನ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಕಲಿಕೆಯ ವಾತಾವರಣವನ್ನು ಒದಗಿಸಲು ಸಂಸ್ಥೆಯ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರದಲ್ಲಿ 2009-22ರ ಹಿಂದಿನ ನೆನಪುಗಳು ಮತ್ತು ಸಂಸ್ಥೆಯ ವಾರ್ಷಿಕ ವರದಿಗಳನ್ನು ಒಳಗೊಂಡ ಸ್ಮರಣಿಕೆಯನ್ನು ರಾಜ್ಯಪಾಲರು ಬಿಡುಗಡೆ ಮಾಡಿದರು. ಇದೇ ವೇಳೆ ಹಾಸನದ ಸೇಂಟ್ ಜೋಸೆಫ್ಸ್ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಿಯೋನಿಸಿಯಸ್ ಫೆರ್ನಾಂಡಿಸ್ ಅವರು ರಾಜ್ಯಪಾಲರನ್ನು ಸನ್ಮಾನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?