Hassan News: ಕರ್ತವ್ಯ ಲೋಪವೆಸಗಿದ ಆರೋಪ, ಒಂದೇ ತಾಲೂಕಿನ ಮೂವರು ಪಿಡಿಒಗಳು ಸಸ್ಪೆಂಡ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2023 | 10:36 AM

ಸಗಿದ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

Hassan News: ಕರ್ತವ್ಯ ಲೋಪವೆಸಗಿದ ಆರೋಪ, ಒಂದೇ ತಾಲೂಕಿನ ಮೂವರು ಪಿಡಿಒಗಳು ಸಸ್ಪೆಂಡ್
ಪ್ರಾತಿನಿಧಿಕ ಚಿತ್ರ
Follow us on

ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒ(PDO)ಗಳನ್ನು ಅಮಾನತು(Suspension) ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು. ಈ ಹಿನ್ನಲೆ ಡಿ.ಕಾಳೇನಹಳ್ಳಿ ಪಿಡಿಒ C.N.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅಮಾನತುಗೊಂಡವರು. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಾಡಿಕೊಟ್ಟಿದ್ದಾರೆಂಬ ಆರೋಪ‌ದ ಮೇಲೆ, ಅಮಾನತು ಮಾಡಲಾಗಿದೆ.

ಬಾಲಕಿ ಕಿಡ್ನ್ಯಾಪ್​ಗೆ ಯತ್ನಿಸಿದ್ದ ಆರೋಪಿ ಬಂಧನ

ಬೆಳಗಾವಿ: ನಿನ್ನೆ(ಜು.12) ಸಾಯಂಕಾಲ ಟ್ಯೂಷನ್​ಗೆ ಹೋಗುತ್ತಿದ್ದ 10 ವರ್ಷದ ಬಾಲಕಿಯನ್ನ ಅಪರಿಚಿತ ವ್ಯಕ್ತಿಯೊರ್ವ ಅಪಹರಿಸಲು ಯತ್ನಿಸಿದ ಘಟನೆ ನಡೆದಿತ್ತು. ಈ ಕುರಿತು ಪೊಲೀಸ್​ ಠಾಣೆಗೆ ದೂರು ಬಂದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ಆಧರಿಸಿ ಖಡೇಬಜಾರ್​ನಲ್ಲಿ ಆರೋಪಿ ಗಜಾನನ ಪಾಟೀಲ್(35) ಎಂಬಾತನನ್ನ ಅರೆಸ್ಟ್ ಬಂಧಿಸಿದ್ದಾರೆ. ಬೆಳಗಾವಿಯ ಮಾರುತಿ ನಗರದ ನಿವಾಸಿಯಾದ ಆರೋಪಿಯನ್ನ ಎಸಿಪಿ ಅರುಣ್‌ ಕುಮಾರ್​​ ಕೋಳೂರ್​​ ಅವರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ:Kalaburagi News: ಬಾಡಿಗೆ ಶಿಕ್ಷಕಿ ಮೂಲಕ ಮಕ್ಕಳಿಗೆ ಪಾಠ ಮಾಡಿಸಿದ ಶಿಕ್ಷಕ ಅಮಾನತು

ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ

ತುಮಕೂರು: ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಎತ್ತಿನಹಳ್ಳಿಯಲ್ಲಿ ನಡೆದಿದೆ. ಪ್ರತಾಪ್​ ರೆಡ್ಡಿ(45)ಕರಡಿ ದಾಳಿಗೊಳಗಾದ ರೈತ. ಗಾಯಗೊಂಡ ರೈತ ಪ್ರತಾಪ್​ ರೆಡ್ಡಿಗೆ ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಪಾವಗಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ