ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಅಪ್ಪ, ಅಮ್ಮ, ಮಗ ವಿಷ ಸೇವಿಸಿ ಸಾವಿಗೆ ಶರಣು

| Updated By: preethi shettigar

Updated on: Feb 24, 2022 | 1:49 PM

ಮೃತದೇಹಗಳನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಅಪ್ಪ, ಅಮ್ಮ, ಮಗ ವಿಷ ಸೇವಿಸಿ ಸಾವಿಗೆ ಶರಣು
ಪ್ರಾತಿನಿಧಿಕ ಚಿತ್ರ
Follow us on

ಹಾಸನ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೇಮಾವತಿ ನಗರದಲ್ಲಿ  ನಡೆದಿದೆ. ಅಪ್ಪ, ಅಮ್ಮ, ಮಗ ಮೂವರು ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ಸತ್ಯಪ್ರಸಾದ್(54), ಅನ್ನಪೂರ್ಣ(50), ಗೌರವ್(21) ಸಾವನ್ನಪ್ಪಿದ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ(Hospital) ಸ್ಥಳಾಂತರ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ(Police station) ಪ್ರಕರಣ ದಾಖಲಾಗಿದೆ.

ತುಮಕೂರು: ಆಸ್ಪತ್ರೆಯ ಬಾತ್ ರೂಮ್​ನಲ್ಲಿ ನವಜಾತ ಹೆಣ್ಣು ಶಿಶು ಶವ ಪತ್ತೆ

ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಮಗುವನ್ನು ಬಿಸಾಡಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಶೌಚಾಲಯವನ್ನು  ಸ್ವಚ್ಛಗೊಳಿಸಲು ಸಿಬ್ಬಂದಿ ಹೋದಾಗ ನವಜಾತ ಶಿಶು ಪತ್ತೆಯಾಗಿದೆ. ಸದ್ಯ ಹೆಣ್ಣು ನವಜಾತ ಶಿಶು ಸಾವನ್ನಪ್ಪಿದೆ. ಕೊರಟಗೆರೆ ಆಸ್ಪತ್ರೆಯಲ್ಲಿ ಹೃದಯವಿದ್ರಾವಕ ಘಟನೆ ನಡೆಸಿದ್ದು, ಸುಮಾರು 8 ತಿಂಗಳ ನವಜಾತ ಶಿಶು ಸಾವನ್ನಪ್ಪಿದೆ ಎಂದು ಮೂಲಗಳು ತಿಳಿಸಿವೆ.

ತುಮಕೂರಿನಲ್ಲಿ ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ; ತಾಯಿ, ನವಜಾತ ಶಿಶು ಸಾವು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಹೊಸಕೆರೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದ್ದು ಸರ್ಕಾರಿ ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ತಾಯಿ-ಮಗು ಬಲಿಯಾದ ಘಟನೆ ನಡೆದಿದೆ. ಮಧುಗಿರಿ ತಾಲೂಕಿನ‌ ಬ್ರಹ್ಮದೇವರಹಳ್ಳಿ ಗ್ರಾಮದ ನಿವಾಸಿ ಕಮಲಮ್ಮ ಮತ್ತು ನವಜಾತ ಶಿಶು ಮೃತಪಟ್ಟಿದೆ.

ಮೃತ ಕಮಲಮ್ಮ ಹೆರಿಗೆಗೆಂದು ಹೊಸಕೆರೆ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಯಾವ ವೈದ್ಯರೂ ಇಲ್ಲದ ಕಾರಣ ಕುಟುಂಬಸ್ಥರು ಪರದಾಡಿದ್ದಾರೆ. ಬಳಿಕ ನರ್ಸ್ಗಳೇ ಚಿಕಿತ್ಸೆ ಕೊಟ್ಟಿದ್ದಾರೆ. ನರ್ಸ್ಗಳ ಚಿಕಿತ್ಸೆ ಬಳಿಕ ನವಜಾತ ಶಿಶು ಮೃತಪಟ್ಟಿದ್ದು ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಈ ವೇಳೆ ತಾಯಿಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಇಲ್ಲದೇ ಕಮಲಮ್ಮ ಕುಟುಂಬಸ್ಥರು ಒದ್ದಾಡಿದ್ದಾರೆ. ಕೊನೆಗೆ ಕಾರಿನಲ್ಲಿ ತಾಲೂಕು ಆಸ್ಪತ್ರೆಗೆ ಕರಿದೊಯ್ಯುವ ಮಾರ್ಗ ಮಧ್ಯೆ ಕಮಲಮ್ಮ ಪ್ರಾಣ ಬಿಟ್ಟಿದ್ದಾರೆ. ಹೊಸಕೆರೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಆರೋಪ ಕೇಳಿ ಬಂದಿದ್ದು ವೈದ್ಯರ ನಿರ್ಲಕ್ಷ್ಯಕ್ಕೆ ಹಸುಗೂಸು ಹಾಗೂ ತಾಯಿ ಬಲಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವೈದ್ಯರ ಹಾಗೂ ಸಿಬ್ಬಂದಿ ವಿರುದ್ಧ ಮೃತ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಸ್ಪತ್ರೆಯಲ್ಲಿ ಡಾಕ್ಟರೇ ಇರಲಿಲ್ಲ. ನರ್ಸ್ಗಳೇ ನಾರ್ಮಲ್ ಡಿಲೇವರಿ ಮಾಡ್ತೀನಿ ಅಂದ್ರು. ಆ ಮೇಲೆ ಮಗುನ ಹೊರಕ್ಕೆ ತೆಗೆದ್ರು. ಮಗು ಅಳ್ತಾ ಇರಲಿಲ್ಲ. ತಲೆಯಲ್ಲಿ ನೀರು ತುಂಬ್ಕೊಂಡಿದೆ ದೊಡ್ಡ ಆಸ್ಪತ್ರೆಗೆ ಕರ್ಕೊಂಡು ಹೋಗಿ ಅಂದ್ರು. ಆಂಬುಲೆನ್ಸ್ಗೆ ಫೋನ್ ಮಾಡುದ್ರೆ ಸರಿಯಾದ ಪ್ರತಿಕ್ರಿಯೆ ಇಲ್ಲ. ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಮಗು ಪ್ರಾಣ ಬಿಟ್ಟಿದ್ದಾರೆ ಎಂದು ಮೃತ ಮಹಿಳೆಯ ಗಂಡ ಕಣೀರು ಹಾಕಿದ್ದಾರೆ.

ಇದನ್ನೂ ಓದಿ:

ಪುತ್ರನ ಸಾವಿನಿಂದ ಮನನೊಂದಿದ್ದ ದಂಪತಿ ಆತ್ಮಹತ್ಯೆ; ತಮಿಳುನಾಡಿನಲ್ಲೊಂದು ಮನಕಲಕುವ ಘಟನೆ

ಹರ್ಷ ಕೊಲೆ ನಡೆಯುವ ಕೆಲ ಗಂಟೆ ಮೊದಲು ಹತ್ಯೆಗೆ ಸ್ಕೆಚ್; ಮಹತ್ವದ ವಿಚಾರಗಳು ಬಹಿರಂಗ

Published On - 1:11 pm, Thu, 24 February 22