AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಗ್ರಾಮದ ಪುನೀತ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

Hassan News: ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದವನ ತಾಯಿ
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 09, 2023 | 2:46 PM

Share

ಹಾಸನ: ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಕಲೇಶಪುರ(Sakleshpura) ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಗ್ರಾಮದ ಪುನೀತ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಇನ್ನು ಪುನೀತ್ ಅಕ್ರಮವಾಗಿ ಮರ ಕಡಿದ ಕೇಸ್​ನ ಆರೋಪಿಯಾಗಿದ್ದಾನೆ. ಈ ಹಿನ್ನಲೆ ಅರಣ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಪುನೀತ್​ ಒಂದೂವರೆ ಲಕ್ಷ ಹಣ ನೀಡಿದ್ದಾನೆಂದು ಪುನೀತ್ ಸಂಬಂಧಿಕರು ಆರೋಪಿಸಿದ್ದಾರೆ.

ಅರಣ್ಯ ಇಲಾಖೆಯ ಸೋಷಿಯಲ್ ಗಾರ್ಡ್​ಗೆ ಹಣ ನೀಡಿದ ಆರೋಪ

ಅರಣ್ಯ ಇಲಾಖೆಯ ಸೋಷಿಯಲ್ ಗಾರ್ಡ್ ಆಗಿರುವ ಪರಮೇಶ್ ಎಂಬಾತನಿಗೆ ಪುನೀತ್​ ಹಣ ನೀಡಿದ್ದಾನೆಂದು ಆತನ ಸಂಬಂಧಿಕರು ಆರೋಪಿಸಿದ್ದು, ಅದರ ಜೊತೆಗೆ ಹಣ ನೀಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಈ ಹಿನ್ನಲೆ ಸಂಬಂಧಿಕರು ವಿಡಿಯೋ, ಆಡಿಯೋ ಸಮೇತ ಸಕಲೇಶಪುರ ಪೊಲೀಸ್ ಠಾಣೆ ಹಾಗೂ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಸದ್ಯ ಪುನೀತ್​ಗೆ ಹಾಸನ ಮೆಡಿಕಲ್​ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ:ರಾಜಕೀಯ ತಿರುವು ಪಡೆದುಕೊಂಡ KSRTC ಬಸ್ ಚಾಲಕ ಆತ್ಮಹತ್ಯೆ ಯತ್ನ ಕೇಸ್, ವರ್ಗಾವಣೆ ಆದೇಶಕ್ಕೆ ತಡೆ

3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಅವಘಡ; ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರು

ಬೆಂಗಳೂರು: ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುತ್ತಿದ್ದು, ಕಟ್ಟಡದಲ್ಲಿದ್ದ ಜನರನ್ನು ತೆರವುಗೊಳಿಸಲಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಬೆಂಕಿಯ ತೀವ್ರತೆಗೆ ದಟ್ಟ ಹೊಗೆ ಇಡೀ ಕಟ್ಟಡವನ್ನ ವ್ಯಾಪಿಸಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೆಂಕಿಯ ತೀವ್ರತೆಗೆ ಸುಟ್ಟು ಕರಕಲಾಗಿರುವ ಶಾಮಿಯಾನ ವಸ್ತುಗಳು

ಇನ್ನು ನೆಲಮಹಡಿಯಲ್ಲಿ ಶಾಮಿಯಾನ ಸಂಬಂಧಿತ ವಸ್ತುಗಳನ್ನ ಸಂಗ್ರಹಿಸಿಡಲಾಗಿತ್ತು. ಬೆಂಕಿಯ ತೀವ್ರತೆಗೆ ಶಾಮಿಯಾನ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಇದು ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಸಂಭವಿಸಿರುವ ಘಟನೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆ ಹಿನ್ನೆಲೆ 25 ಲಕ್ಷ ಕ್ಕೂ ಅಧಿಕ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​