ದಾನ ಕೇಳುವ ನೆಪದಲ್ಲಿ ಕಳ್ಳತನಕ್ಕೆ ಯತ್ನ: ನಕಲಿ ಸ್ವಾಮೀಜಿಗಳಿಗೆ ಹಿಗ್ಗಾಮುಗ್ಗಾ ಗೂಸಾ!

ಜೇನುಕಲ್​ ಸಿದ್ದೇಶ್ವರ ಕ್ಷೇತ್ರಕ್ಕೆ ದಾನ ಕೋರುವ ನೆಪದಲ್ಲಿ ಒಂಟಿ ಮನೆಗೆ ನುಗ್ಗಿ ಸುಲಿಗೆಗೆ ಯತ್ನಿಸಿದ್ದ ನಕಲಿ ಸ್ವಾಮೀಜಿಗಳು ಸಿಕ್ಕಿಬಿದ್ದಿದ್ದಾರೆ. ಕಾವಿ, ರುದ್ರಾಕ್ಷಿ, ವಿಭೂತಿ, ಲಿಂಗದ ಕಾಯಿ ಧರಿಸಿ ಸ್ವಾಮೀಜಿ ವೇಷದಲ್ಲಿ ಮನೆಗೆ ನುಗ್ಗಿದ್ದರು. ಆದ್ರೆ, ಮಹಿಳೆಯ ಚಾಣಾಕ್ಷತನದಿಂದ ಕಳ್ಳ ಸ್ವಾಮಿಗಳು ತಗ್ಲಾಕೊಂಡು ಗೂಸಾ ತಿಂದಿದ್ದಾರೆ.

ದಾನ ಕೇಳುವ ನೆಪದಲ್ಲಿ ಕಳ್ಳತನಕ್ಕೆ ಯತ್ನ: ನಕಲಿ ಸ್ವಾಮೀಜಿಗಳಿಗೆ ಹಿಗ್ಗಾಮುಗ್ಗಾ ಗೂಸಾ!
Fake Swamiji
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on:Jan 06, 2025 | 8:12 PM

ಹಾಸನ (ಜನವರಿ.6): ದಾನ ಕೇಳುವ ನೆಪದಲ್ಲಿ ಕಳ್ಳ ಸ್ವಾಮೀಜಿಗಳು ಒಂಟಿ ಮನೆಯೊಂದಕ್ಕೆ ನುಗ್ಗಿದ್ದ ಕಳ್ಳ ಸ್ವಾಮೀಜಿಗಳು, ಮತ್ತವರ ಸಹಚರರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾವು ಜೇನುಕಲ್ ಸಿದ್ದೇಶ್ವರಸ್ವಾಮಿ ಮಠದವರಾಗಿದ್ದು, ಹೆಚ್ಚಿನ ಧನ ಸಹಾಯ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡು ತಕ್ಷಣವೆ ಎಚ್ಚೆತ್ತ ಮಹಿಳೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು. ಸ್ಥಳೀಯರು ಬರುತ್ತಿದ್ದಂತೆ ಕಳ್ಳ ಸ್ವಾಮೀಜಿಗಳ ಗ್ಯಾಂಗ್ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇಬ್ಬರು ನಕಲಿ ಸ್ವಾಮೀಜಿ ಸೇರಿ ಐವರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಹಣದ ಸಮೇತ ಗ್ರಾಮಸ್ಥರು ಐವರನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಕಳೆದ ವರ್ಷ ನವೆಂಬರ್ 3 ರಂದು ಇದೇ ಗ್ಯಾಂಗ್ ಕಲ್ಲುಂಡಿ ಗ್ರಾಮಕ್ಕೆ ಭಿಕ್ಷೆ ಕೇಳುವ ನೆಪದಲ್ಲಿ ಬಂದಿದ್ದರು. ಆಗ ಪಿಸ್ತೂಲ್ ತೋರಿಸಿ ಪರಾರಿಯಾಗಿದ್ದರು. ಇದೀಗ ನಗದು ಸಹಿತ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಬಾಣಾವಾರ ಪೊಲೀಸರಿಗೊಪ್ಪಿಸಿದ್ದಾರೆ. ವಶಕ್ಕೆ ಪಡೆದಿರುವ ಪೊಲೀಸರು ಐವರನ್ನು ಎಲ್ಲ ಆಯಾಮಗಳಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಎಷ್ಟು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಯಾರಾರ ಮನೆಯಲ್ಲಿ ಕಳ್ಳತನ, ಭಿಕ್ಷೆ ನೆಪದಲ್ಲಿ ದರೋಡೆ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 8:10 pm, Mon, 6 January 25

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?