Hassan Firing: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ, ವ್ಯಕ್ತಿಯ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ
ಹಾಡಹಗಲೇ ಮೊರೆದ ಗುಂಡಿನ ಸದ್ದಿಗೆ ಹಾಸನ ಬೆಚ್ಚಿಬಿದ್ದಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದರೆ, ಇನ್ನೊಬ್ಬರು ಸ್ವತಃ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಘಟನೆ ಬಗ್ಗೆ ಪೊಲೀಸರು ಹೇಳಿದ್ದೇನು? ಇಲ್ಲಿದೆ ನೋಡಿ.
ಹಾಸನ, ಜೂನ್ 20: ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, (Murder) ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಘಟನೆ ಬಗ್ಗೆ ಮಾಹಿತಿ ನೀಡಿದ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿಸಿದರು.
ಘಟನಾ ಸ್ಥಳದಲ್ಲಿದ್ದ ಕಾರು ಮೈಸೂರು ಮೂಲದ್ದು ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಕಾರಿನ ಹೊರಗಿರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಸೈಟ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿರುವ ಮಾಹಿತಿ ಇದೆ. ಆದರೆ, ವಾಸ್ತವ ಏನೆಂಬುದು ತನಿಖೆಯ ನಂತರ ತಿಳಿಯಬೇಕಿದೆ ಎಂದು ಮೊಹಮ್ಮದ್ ಸುಜೀತಾ ತಿಳಿಸಿದರು.
ಇದನ್ನೂ ಓದಿ: ರಕ್ಷಣೆ ಮಾಡುವವರಿಗೆ ರಕ್ಷಣೆ ಇಲ್ಲ, ಗನ್ ತೋರಿಸಿ ಮಹಿಳಾ ಹೆಡ್ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ ಮಾಡಿದ ಎಸ್ಐ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:16 pm, Thu, 20 June 24