AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ದೇಶದ ಯಾವುದೇ ರಾಜ್ಯದಲ್ಲೂ ರಸಗೊಬ್ಬರ ಕೊರತೆಯಿಲ್ಲ; ಕೇಂದ್ರ ಸಚಿವ ಭಗವಂತ್ ಖೂಬಾ

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಟ್ವೀಟ್ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಭಗವಂತ್ ಖೂಬಾ ಅವರು ‘ಅಂತಹದ್ದನ್ನು ಹುಡುಕುವುದರಲ್ಲಿ ಕಾಂಗ್ರೆಸ್‌ನವರ ಆಯುಷ್ಯ ಕಳೆದು ಹೋಯ್ತು, ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಒಬ್ಬ ನಾಯಕ. ಭಾರತೀಯ ಜನತಾ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ಕೂಡ ನಾಯಕನನ್ನು ಹೆಮ್ಮೆಯಿಂದ ಸ್ವಾಗತ ಮಾಡುವುದು ನಮ್ಮ ಮನಸ್ಥಿತಿ ಎಂದರು.

ಹಾಸನ: ದೇಶದ ಯಾವುದೇ ರಾಜ್ಯದಲ್ಲೂ ರಸಗೊಬ್ಬರ ಕೊರತೆಯಿಲ್ಲ; ಕೇಂದ್ರ ಸಚಿವ ಭಗವಂತ್ ಖೂಬಾ
ಕೇಂದ್ರ ಸಚಿವ ಭಗವಂತ್ ಖೂಬಾ
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 26, 2023 | 7:30 PM

Share

ಹಾಸನ, ಆ.26: ದೇಶದ ಯಾವುದೇ ರಾಜ್ಯ, ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ರಸಗೊಬ್ಬರ ಕೊರತೆಯಿಲ್ಲ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ್ ಖೂಬಾ (Bhagawanth Khuba) ಹೇಳಿದ್ದಾರೆ. ಹಾಸನದಲ್ಲಿ (Hassan) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮಳೆ ಕೊರತೆಯಾಗಿರುವುದರಿಂದ ರಾಜ್ಯ ಸರ್ಕಾರ ಈಗಾಗಲೇ ಸಮೀಕ್ಷೆಯನ್ನು ಮಾಡುತ್ತಿದೆ. ಅನೇಕ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಬೇಕು ಎಂಬ ಕೂಗಿಗೆ ಸ್ಪಂದನೆ ಮಾಡಿದ್ದು, ಇನ್ನೂ ಮುಂದಿನ ದಿನಗಳಲ್ಲಿ ಅದನ್ನು ಕೂಡ ಮಾಡುತ್ತಾರೆ ಎಂದರು.

ದೇಶದಲ್ಲಿ ಯಾವುದೇ ತರಹದ ರಸಗೊಬ್ಬರದ ಕೊರತೆ ಇಲ್ಲ

ದೇಶದಲ್ಲಿ ಯಾವುದೇ ರಾಜ್ಯ, ಜಿಲ್ಲೆ, ತಾಲ್ಲೂಕು ಕೇಂದ್ರವಾಗಲಿ ಎಲ್ಲಿಯು ಕೂಡ ಯಾವುದೇ ತರಹದ ರಸಗೊಬ್ಬರದ ಕೊರತೆ ಇಲ್ಲ. ಕಳೆದ ಒಂಭತ್ತುವರೆ ವರ್ಷದಿಂದ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಭಾರತದ ರೈತನಿಗೆ ಬೇಕಾಗುವಷ್ಟು ರಬಿ ಮತ್ತು ಖಾರಿಫ್ ಸಮಯದಲ್ಲಿ ಎಲ್ಲಾ ರೀತಿಯ ರಸಗೊಬ್ಬರಗಳನ್ನು ಭಾರತ ಸರ್ಕಾರ ಸಬ್ಸಿಡಿ ದರದಲ್ಲಿ ಪೂರೈಸುತ್ತಿದೆ ಎಂದರು.

ಇದನ್ನೂ ಓದಿ:ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ: ಸರ್ಕಾರಿ ವಕೀಲರಿಗೆ ಸಿಎಂ ಸಿದ್ದರಾಮಯ್ಯ ಪಾಠ

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಟ್ವೀಟ್

ಇದೇ ವೇಳೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು ‘ ಅಂತಹದ್ದನ್ನು ಹುಡುಕುವುದರಲ್ಲಿ ಕಾಂಗ್ರೆಸ್‌ನವರ ಆಯುಷ್ಯ ಕಳೆದು ಹೋಯ್ತು, ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಒಬ್ಬ ನಾಯಕ. ಭಾರತೀಯ ಜನತಾ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ಕೂಡ ನಾಯಕನನ್ನು ಹೆಮ್ಮೆಯಿಂದ ಸ್ವಾಗತ ಮಾಡುವುದು ನಮ್ಮ ಮನಸ್ಥಿತಿ. ನಮಗೆ ನಮ್ಮ ಹಿರಿಯರು ಹಾಕಿಕೊಟ್ಟಿರುವ ದಾರಿ. ನಾವು ಇವತ್ತು ಎಷ್ಟೇ ದೊಡ್ಡ ನಾಯಕರಿದ್ದರೂ ಕೂಡ ಸಾಮಾನ್ಯ ಕಾರ್ಯಕರ್ತರ ಜೊತೆ ನಿಂತು, ಬೆರೆತು, ವಿಚಾರ ಹಂಚಿಕೊಂಡು ಸ್ವಾಗತ ಮಾಡುವವರು ಭಾರತೀಯ ಜನತಾ ಪಕ್ಷದ ಮುಖಂಡರು ಎಂದು ಕಾಂಗ್ರೆಸ್ ವಿರುದ್ದ ಕಿಡಿ ಕಾರಿದರು.

ಚಂದ್ರಯಾನ-3 ಸಕ್ಸಸ್ ಕ್ರೆಡಿಟ್ ಪೈಪೋಟಿ

ಇನ್ನು ಚಂದ್ರಯಾನ-3 ಸಕ್ಸಸ್ ನಂತರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕ್ರೆಡಿಟ್ ಪೈಪೋಟಿ ಏರ್ಪಟ್ಟಿದೆ. ಈ ವಿಚಾರವಾಗಿ ‘ಚಂದ್ರಯಾನ-3 ಯಶಸ್ವಿ ಭಾರತದ 140 ಕೋಟಿ ಜನರ ಯಶಸ್ವಿ. ವಿಜ್ಞಾನಿಗಳ ಪರಿಶ್ರಮದ ಫಲಿತಾಂಶ ಇದು. ಕಳೆದ ನಾಲ್ಕು ವರ್ಷಗಳ ಹಿಂದೆ ಚಂದ್ರಯಾನ-2 ವಿಫಲವಾದಾಗ ನರೇಂದ್ರ ಮೋದಿಯವರು ದೇಶದ ವಿಜ್ಞಾನಿಗಳಿಗೆ ಸಂಪೂರ್ಣವಾಗಿ ಧೈರ್ಯ ತುಂಬಿ, ಬೆನ್ನು ತಟ್ಟಿ ಮತ್ತೆ ಪ್ರೇರಣೆಯನ್ನು ತುಂಬಿದರ ಪರಿಣಾಮವಾಗಿ ಇಂದು ಚಂದ್ರಯಾನ-3 ಯಾವುದೇ ಅಡಚಣೆ ಇಲ್ಲದೆ ಯಶಸ್ವಿಯನ್ನು ಕಂಡಿದೆ. ಇದಕ್ಕೆ ರಾಜ್ಯ ಸರ್ಕಾರ ಅಥವಾ ರಾಜ್ಯ ಸರ್ಕಾರದ ಮಂತ್ರಿಗಳು ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ಇಸ್ರೋ ತಂಡ ಭಾರತಕ್ಕೆ ಸೇರಿದ್ದು, ಯಾವುದೇ ರಾಜಕೀಯ ಘಟಕವಲ್ಲ: ಚಂದ್ರಯಾನ-3 ಬಗ್ಗೆ ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ಗೆ ಕೆಲ ಬಿಜೆಪಿ ನಾಯಕರು ಸೇರ್ಪಡೆ

ಎಲ್ಲರೂ ರಾಜ್ಯದ ಮುಖ್ಯಮಂತ್ರಿ ಬಳಿ ಅವರವರ ಕ್ಷೇತ್ರದ ಬೇಡಿಕೆಗಳನ್ನು, ಸಮಸ್ಯೆಗಳನ್ನು ತಗೊಂಡು ಮಾಮೂಲಿಯಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳನ್ನು ಅಥವಾ ಸಂಬಂಧಪಟ್ಟ ಇಲಾಖಾ ಸಚಿವರನ್ನು ಭೇಟಿಯಾಗುವುದು ಸರ್ವೆ ಸಾಮಾನ್ಯ. ಹೀಗಾಗಿ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹೋಗಿ ಭೇಟಿ ಆಗುತ್ತಾರೆ. ಇದರಲ್ಲಿ ಹೊಸದೇನು ಇಲ್ಲ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ್ ಖೂಬಾ ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ