ಹಾಸನಾಂಬೆ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗಲೆಂದು ಪ್ರಾರ್ಥನೆ

ಹಾಸನ(Hassan) ನಗರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಭೇಟಿ ನೀಡಿದ್ದು, ಕಾರ್ಯಕರ್ತರು, ಸಂಬಂಧಿಕರೊಂದಿಗೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ ಲೋಕಸಭಾ ಚುನಾವಣೆ ಬರುತ್ತಿದೆ. ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಮೋದಿಯವರು ಪ್ರಧಾನಿ ಆಗಬೇಕು ಎನ್ನುವುದು ನಮ್ಮ‌ಅಪೇಕ್ಷೆಯಾಗಿದೆ ಎಂದರು.

ಹಾಸನಾಂಬೆ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗಲೆಂದು ಪ್ರಾರ್ಥನೆ
ಶೋಭಾ ಕರಂದ್ಲಾಜೆ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 09, 2023 | 10:51 PM

ಹಾಸನ, ನ.09: ಇಂದು ಹಾಸನ(Hassan) ನಗರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಭೇಟಿ ನೀಡಿದ್ದು, ಕಾರ್ಯಕರ್ತರು, ಸಂಬಂಧಿಕರೊಂದಿಗೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ ಲೋಕಸಭಾ ಚುನಾವಣೆ ಬರುತ್ತಿದೆ. ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಮೋದಿಯವರು ಪ್ರಧಾನಿ ಆಗಬೇಕು ಎನ್ನುವುದು ನಮ್ಮ‌ಅಪೇಕ್ಷೆಯಾಗಿದ್ದು, ಜೊತೆಗೆ ಮೋದಿಯವರಿಗೆ ಆಯುರ್, ಆರೋಗ್ಯ ಕೊಡಲಿ ಎಂದು ದೇವಿಯಲ್ಲಿ ಬೇಡಿದ್ದೇನೆ ಎಂದರು.

ಇನ್ನು ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಾಗಿದ್ದು, ಈಗಷ್ಟೇ ಕೆಲವು ಕಡೆ ಮಳೆಯಾಗುತ್ತಿದೆ. ರೈತ ನೆಮ್ಮದೆಯಾಗಿದ್ದರೆ, ಇಡೀ ದೇಶ ಸಮೃದ್ದಿಯಾಗಿರುತ್ತದೆ. ಇನ್ನು ಇದೇ ವೇಳೆ ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ‘ರಾಜ್ಯ ಸರ್ಕಾರ ಅವರ ವರದಿಯನ್ನು ಕೊಡಬೇಕು. ಕೇಂದ್ರದ ತಂಡವೂ ಬರ ಅಧ್ಯಯನ ಮಾಡಿದೆ. ಕೇಂದ್ರ ಸರ್ಕಾರ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್‌ನಲ್ಲಿ ಹಣವನ್ನು ಕೊಡುತ್ತೆ. ಈಗಾಗಲೇ ಎಸ್‌ಡಿಆರ್‌ಎಫ್ ನಿಧಿಯಲ್ಲಿ ಡಿಸಿ ಅವರ ಅಕೌಂಟ್‌ನಲ್ಲಿ ಹಲವಾರು ಜಿಲ್ಲೆಗಳಲ್ಲಿ ದುಡ್ಡು ಇದೆ. ತಕ್ಷಣ ಕಾರ್ಯಕ್ಕೆ ಅದನ್ನು ಉಪಯೋಗಿಸಬೇಕು ಎಂದರು.

ಇದನ್ನೂ ಓದಿ:ಹಾಸನಾಂಬೆಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ಇತಿಹಾಸವನ್ನು ಅರ್ಚಕರಿಂದ ಕೇಳಿ ತಿಳಿದುಕೊಂಡ ಸಿದ್ದರಾಮಯ್ಯ

ಮುಂದಿನ ದಿನಗಳಲ್ಲಿ ಎನ್‌ಡಿ‌ಆರ್‌ಎಫ್‌ನಿಂದ ಹಣ ಕೊಡಿಸುವುದಕ್ಕೆ ನಾವೆಲ್ಲ ಶ್ರಮಿಸುತ್ತೇವೆ. ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಎಲ್ಲಾ ರಾಜ್ಯಗಳಿಗೂ ಹಣವನ್ನು ಕೊಡುತ್ತಾರೆ. ಕರ್ನಾಟಕಕ್ಕೂ ಕೂಡ ಹೆಚ್ಚಿನ ಅನುದಾನ ಎನ್‌ಡಿಆರ್‌ಎಫ್ ಮೂಲಕ ಬರಬೇಕು. ಅದಕ್ಕಾಗಿ ನಮ್ಮದೇ ಪ್ರಯತ್ನವನ್ನು ಹಾಕುತ್ತೀವಿ, ಆ ರೀತಿ ಅಧ್ಯಯನ ಕೂಡ ನಡೆಯುತ್ತಿದೆ ಎಂದರು. ದೆಹಲಿ ರಾಜ್ಯದ ಸಚಿವರು ಬಂದರೆ, ಕೇಂದ್ರ ಸಚಿವರು ಸಮಯ ನೀಡಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರ ‘ ಸಿದ್ದರಾಮಯ್ಯ ಅವರು ಅನವಶ್ಯಕವಾದ ಆರೋಪವನ್ನು ನರೇಂದ್ರಮೋದಿ ಅವರ ಮೇಲೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಮಾಡುತ್ತಿದ್ದಾರೆ. ನರೇಂದ್ರ ಮೋದಿಯವರೇ ರಾಜ್ಯಕ್ಕೆ ಬಂದಾಗ ಅವರ ಭೇಟಿಗೆ ಹೋಗಲಿಲ್ಲ. ಜೊತೆಗೆ ಅವರೇ ಸಭೆಗೆ ಕರೆದರೂ ಹೋಗಲ್ಲ, ಹಿಂದೆ ಮುಖ್ಯಮಂತ್ರಿ ಆದಾಗಲೂ ಹೋಗಿಲ್ಲ, ಈಗಲೂ ಅವರಿಗೆ ಆಸಕ್ತಿ ಇಲ್ಲ ಎಂದರು.

ಸಿದ್ದರಾಮಯ್ಯನವರು ಅವರವರ ಪಕ್ಷದ ಆಂತರಿಕ ಹೊಡೆದಾಟದ ತೊಳಲಾಟದಲ್ಲಿ ಇದ್ದಾರೆ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ‌ ನ್ಯಾಯವನ್ನು ಕೊಡುತ್ತಿದೆ. ಒಂದೇ ಒಂದು ಎಂಪಿ, ಎಂಎಲ್‌ಎ ಇಲ್ಲದ ಕೇರಳಕ್ಕೂ ಒಂದೇ ನ್ಯಾಯ, ಕರ್ನಾಟಕ ರಾಜ್ಯಕ್ಕೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕೊಡಲು ಮುಂಚೂಣಿಯಲ್ಲಿ ನಿಂತು ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಹಿಂದೆಂದೂ ಆಗದಂತಹ ಅಭಿವೃದ್ಧಿ, ಮೂಲಭೂತ ಸೌಕರ್ಯಗಳು ಕರ್ನಾಟಕಕ್ಕೆ ಸಿಕ್ಕಿದೆ. ರಾಜ್ಯಯ ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಆಗುತ್ತೆ ಇದು ಮೋದಿಯವರ ಸಂಕಲ್ಪ. ಮುಖ್ಯಮಂತ್ರಿಗಳು ಮುತುವರ್ಜಿ ವಹಿಸಿ ನಮ್ಮ ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಮುಂದೆ ಇಡಬೇಕು. ಕಾಲ ಕಾಲಕ್ಕೆ ಆಯಾ ಇಲಾಖೆಗಳ ವರದಿಯನ್ನು ಸಲ್ಲಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್