AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ರಾಷ್ಟ್ರಪತಿಯಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಸಿಪಿ ರಾಧಾಕೃಷ್ಣನ್: ಇಲ್ಲಿದೆ ಕಾರಣ?

ಇತ್ತೀಚೆಗೆ ನಡೆದಿದ್ದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವ ಮೂಲಕ ಉಪ ರಾಷ್ಟ್ರಪತಿ ಸ್ಥಾನ ಅಲಂಕರಿಸಿರುವ ಸಿಪಿ ರಾಧಾಕೃಷ್ಣನ್​ ಅವರು, ಮೊಟ್ಟಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9 ರಂದು ಹಾಸನದ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಜೈನ ಮಠದ ಸ್ವಸ್ತ್ರಿಶ್ರೀ ಮಾಹಿತಿ ನೀಡಿದ್ದಾರೆ.

ಉಪ ರಾಷ್ಟ್ರಪತಿಯಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಸಿಪಿ ರಾಧಾಕೃಷ್ಣನ್: ಇಲ್ಲಿದೆ ಕಾರಣ?
ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 04, 2025 | 7:15 PM

Share

ಹಾಸನ, ನವೆಂಬರ್ 04: ದೇಶದ 17ನೇ ನೂತನ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ (CP Radhakrishnan)​​ ಅವರು ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕಕ್ಕೆ (Karnataka) ಆಗಮಿಸುತ್ತಿದ್ದಾರೆ. ನವೆಂಬರ್​ 9ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಅವರು, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.

ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪ ರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್​​ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಹಾಗೂ ನಾಲ್ಕನೇ ಬೆಟ್ಟದ ಪದನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಇದೇ ನ 28ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಶೇಷತೆ ಏನು ಗೊತ್ತಾ?

ಇದೇ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಹ ಭಾಗಿಯಾಗಲಿದ್ದಾರೆ ಎಂದು ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ವಿರುದ್ಧ ಭರ್ಜರಿ ಜಯ

ಇತ್ತೀಚೆಗೆ ನಡೆದಿದ್ದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಒಟ್ಟು 452 ಮತ ಪಡೆದು ಭರ್ಜರಿ ಬಹುಮತದೊಂದಿಗೆ ಗೆಲುವು ದಾಖಲಿಸಿದ್ದರು. 1957ರ ಅಕ್ಟೋಬರ್ 20ರಂದು ತಮಿಳುನಾಡಿನಲ್ಲಿ ಜನಿಸಿದ ಸಿಪಿ ರಾಧಾಕೃಷ್ಣನ್​​ ಅವರು, ತಮ್ಮ 17ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್ ಸೇರ್ಪಡೆಯಾಗಿ ಸ್ವಯಂ ಸೇವಕನಾಗಿ ಕೆಲಸ ಮಾಡಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ ಭೇಟಿ ನೀಡಿದ ಭಕ್ತರೆಷ್ಟು ಗೊತ್ತಾ? ಸಂಗ್ರಹವಾಯ್ತು ಬರೋಬ್ಬರಿ ಆದಾಯ!

1998ರಲ್ಲಿ ಕೊಯಮತ್ತೂರು ಕ್ಷೇತ್ರದಿಂದ ತಂದರೆ ತಮಿಳುನಾಡಿನಲ್ಲೇ ಏಕಾಂಗಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸತ್‌ ಪ್ರವೇಶಿಸಿದ್ದರು. 2020ರಿಂದ 2022ರವರೆಗೆ ಬಿಜೆಪಿಯ ಕೇರಳದ ಉಸ್ತುವಾರಿಯಾಗಿದ್ದರು. ತೆಲಂಗಾಣದ ರಾಜ್ಯಪಾಲರಾಗಿದ್ದ ಸಿ.ಪಿ.ರಾಧಾಕೃಷ್ಣನ್, ಪುದುಚೇರಿ ಎಲ್‌ಜಿ ಆಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಿದ್ದರು. 2024ರ ಜುಲೈರಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ರಾಧಾಕೃಷ್ಣನ್ ಕರ್ತವ್ಯ ನಿರ್ವಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ