AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಮರ ಏರಿ ರೈತನ ಪ್ರತಿಭಟನೆ; ತಾಲೂಕು ಆಡಳಿತದ ವಿರುದ್ಧ ಆಕ್ರೋಶ: ವಿಡಿಯೋ ವೈರಲ್

Hassan: ನನ್ನ ಕೆಲಸವಾಗುವವರೆಗೂ ಮರದಿಂದ ಕೆಳಗೆ ಇಳಿಯುವುದಿಲ್ಲ ಎಂದು ಹಠ ಹಿಡಿದು ಕೂತಿದ್ದ ರೈತನನ್ನು ನಂತರ ಅಧಿಕಾರಿಗಳು ಸಮಾಧಾನಿಸಿದ್ದಾರೆ. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.

ತೆಂಗಿನ ಮರ ಏರಿ ರೈತನ ಪ್ರತಿಭಟನೆ; ತಾಲೂಕು ಆಡಳಿತದ ವಿರುದ್ಧ ಆಕ್ರೋಶ: ವಿಡಿಯೋ ವೈರಲ್
ತೆಂಗಿನ ಮರ ಏರಿ ರೈತನ ಪ್ರತಿಭಟನೆ
TV9 Web
| Updated By: ganapathi bhat|

Updated on:Aug 18, 2021 | 5:48 PM

Share

ಹಾಸನ: ಸರ್ವೆ ಇಲಾಖೆಯಲ್ಲಿ ಕೆಲಸವಾಗಲಿಲ್ಲ ಎಂಬ ಕಾರಣಕ್ಕೆ ರೈತನೊಬ್ಬ ತೆಂಗಿನ ಮರ ಏರಿ ಪ್ರತಿಭಟನೆ ಮಾಡಿದ ಘಟನೆ ಚೆನ್ನರಾಯಪಟ್ಟದಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿಯ ಸೂರಪ್ಪ ಎಂಬ ರೈತ ಪ್ರತಿಭಟನೆ ನಡೆಸಿದ್ದಾನೆ. ಚನ್ನರಾಯಪಟ್ಟಣ ತಹಶೀಲ್ದಾರ್​ ಕಚೇರಿ ಎದುರು ಧರಣಿ ನಡೆಸಿದ ರೈತ ಸೂರಪ್ಪ ಮರವೇರಿ ಪ್ರತಿಭಟನೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಕೆಲಸ ಮಾಡಿಕೊಡದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದಾನೆ. ಬಳಿಕ. ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಮರದಿಂದ ಕೆಳಗಿಳಿದಿದ್ದಾನೆ.

ತಾಲ್ಲೂಕು ಆಡಳಿತದ ವಿರುದ್ಧ ಪ್ರತಿಭಟಿಸಲು ತೆಂಗಿನ ಮರ ಏರಿದ ರೈತ, ಸರ್ವೆ ಇಲಾಖೆಯಲ್ಲಿ ಕೆಲಸವಾಗದ್ದಕ್ಕೆ ಕೆಲಸ ಮಾಡಿಕೊಡದೆ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಕೆಲಸವಾಗುವವರೆಗೂ ಮರದಿಂದ ಕೆಳಗೆ ಇಳಿಯುವುದಿಲ್ಲ ಎಂದು ಹಠ ಹಿಡಿದು ಕೂತಿದ್ದ ರೈತನನ್ನು ನಂತರ ಅಧಿಕಾರಿಗಳು ಸಮಾಧಾನಿಸಿದ್ದಾರೆ. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅಣ್ಣ ತಮ್ಮಂದಿರೊಂದಿಗೆ ಜಮೀನು ವ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಸೂರಪ್ಪ ಎಂಬ ರೈತ ಹೀಗೆ ಮಾಡಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Shocking Video: ಗ್ರಾಹಕರಿಗೆ ಕೊಡಬೇಕಾಗಿದ್ದ ಊಟ ಕದ್ದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

ಪ್ರವಾಸಕ್ಕೆ ಬರುವ ಯುವತಿಯರ ಅಶ್ಲೀಲ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ

(Video goes viral of a Farmer protesting by climbing Coconut Tree in Hassan)

Published On - 5:44 pm, Wed, 18 August 21

ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ