ಹಾಸನ: ತಟ್ಟೆಹಳ್ಳಿಯಲ್ಲಿ ಗೋಮಾಳ ಭೂಮಿಗಾಗಿ ವಿಷದ ಬಾಟಲಿ ಹಿಡಿದು ಗ್ರಾಮಸ್ಥರ ಹೈಡ್ರಾಮ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಟ್ಟೆಹಳ್ಳಿಯಲ್ಲಿ 50 ಕ್ಕೂ ಹೆಚ್ಚು ಕುಟುಂಬಗಳು ಗೋಮಾಳ ಜಮೀನಿನಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದೆ. ಈ ಭೂಮಿಯನ್ನು ಅಧಿಕಾರಿಗಳು ಗ್ರಾಮಸ್ಥರಿಂದ ಬಿಡಿಸಲು ಹೋದಾಗ ಹೈಡ್ರಾಮ ನಡೆದಿದೆ.

ಹಾಸನ: ತಟ್ಟೆಹಳ್ಳಿಯಲ್ಲಿ ಗೋಮಾಳ ಭೂಮಿಗಾಗಿ ವಿಷದ ಬಾಟಲಿ ಹಿಡಿದು ಗ್ರಾಮಸ್ಥರ ಹೈಡ್ರಾಮ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಟ್ಟೆಹಳ್ಳಿಯಲ್ಲಿ ಗೋಮಾಳ ಜಮೀನಿಗಾಗಿ ಪ್ರತಿಭಟನೆ
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on: Aug 07, 2023 | 3:28 PM

ಹಾಸನ, ಆಗಸ್ಟ್ 7: ಗೋಮಾಳ ಜಮೀನಿಗಾಗಿ (Gomala Land) ವಿಷದ ಬಾಟಲಿ ಹಿಡಿದುಕೊಂಡು ಅಧಿಕಾರಿಗಳ ಎದುರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಬೇಲೂರು (Belur) ತಾಲೂಕಿನ ತಟ್ಟೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ 50 ಕ್ಕೂ ಹೆಚ್ಚು ಕುಟುಂಬಗಳು ಕಳೆದ 30 ವರ್ಷಗಳಿಂದ ಗೋಮಾಳದಲ್ಲಿ ಉಳುಮೆ ಮಾಡಿಕೊಂಡು ಬರುತ್ತಿವೆ. ಈ ಜಮೀನನ್ನು ಅಧಿಕಾರಿಗಳು ಗ್ರಾಮಸ್ಥರಿಂದ ಬಿಡಿಸಲು ಹೋದಾಗ ಈ ಘಟನೆ ನಡೆದಿದೆ.

ಗೋಮಾಳ ಜಮೀನಿನಿಂದ ಕುಟುಂಬಗಳನ್ನು ತೆರವುಗೊಳಿಸಲು ಅಧಿಕಾರಿಗಳು ಆಗಸ್ಟ್ 7 ರಂದು ಮಧ್ಯಾಹ್ನ ಹೋದಾಗ ಗ್ರಾಮಸ್ಥರು ಕೈಯಲ್ಲಿ ವಿಷದ ಬಾಟಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಅದಾಗ್ಯೂ, ಜಮೀನಿನಲ್ಲಿ ಬೆಳೆದ ತೆಂಗಿನ ಮರಗಳನ್ನು ಕಿತ್ತುಹಾಕಿದ್ದಾರೆ. ಈ ವೇಳೆ ಪ್ರತಿಭಟನಾ ನಿರತ ವ್ಯಕ್ತಿಯೊಬ್ಬರು ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಹತ್ತು ದಿನಗಳ ನಂತರ ಸಾವು: ಕಾಫಿ ತೋಟದಲ್ಲಿ ಶವ ಪತ್ತೆ

ಇದೇ ರೀತಿ ಸರ್ಕಾರಿ ಭೂಮಿಗಳನ್ನು ಕಬಳಿಕೆ ಮಾಡುತ್ತಿರುವುದು ರಾಜ್ಯಾದ್ಯಂತ ನಡೆಯುತ್ತಲೇ ಇದೆ. ದಕ್ಷಿಣ ಕರ್ನಾಟಕದ ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ. ಜಿಲ್ಲೆಯಾದ್ಯಂತ ಎರಡು ಲಕ್ಷ ಎಕರೆಗೂ ಅಧಿಕ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ನಿಯಮಾವಳಿ ಉಲ್ಲಂಘಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವ 48 ಪ್ರಕರಣಗಳಿದ್ದು, ಒಂಬತ್ತು ತಹಶೀಲ್ದಾರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿವೆ.

ಸಾಗುವಳಿ ಮಾಡಲು ಗೋಮಾಳ ಜಮೀನು ಮಂಜೂರು ಮಾಡಲು ಯಾವುದೇ ಅಧಿಕಾರಿಗಳಿಗೆ ಅಧಿಕಾರವಿಲ್ಲ, ಮಂಜೂರು ಮಾಡಿದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 2002ಕ್ಕಿಂತ ಮೊದಲು ಯಾರಾದರೂ ಗೋಮಾಳದ ಭೂಮಿಯನ್ನು ಸಾಗುವಳಿ ಮಾಡುತ್ತಿದ್ದರೆ ಅದನ್ನು ಮಂಜೂರು ಮಾಡಬಹುದು. ಆದರೆ, ಖಾಸಗಿಯವರಿಗೆ ಗೋಮಾಳ ಭೂಮಿ ಮಂಜೂರು ಮಾಡುವಂತಿಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ನೋಡಲ್ ಕಾರ್ಯದರ್ಶಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?