ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಗನೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ನಿಗೂಢವಾಗಿದೆ.

ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ
Shruthi
Edited By:

Updated on: May 24, 2025 | 8:17 PM

ಹಾಸನ, (ಮೇ 24): ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ (virajpet Congress MLA ponnanna) ಅವರ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ (Government Teacher )ಶೃತಿ (35) ಹಾಸನ (Hassan) ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ, ಇಂದು (ಮೇ 24) ಮನೆಯಲ್ಲಿಯೇ ವಿಷ ಸೇವಿಸಿದ್ದು, ಕುಡಲೇ ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶೃತಿ ಕೊನೆಯುಸಿರೆಳೆದಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ, ನಿಖರವಾದ ಕಾರಣ ತಿಳಿದುಬಂದಿಲ್ಲ.

ಹೊತ್ತಿ ಉರಿದ 2 ಬೈಕ್​ಗಳು, ಓರ್ವ ಸಾವು

ಕಲಬುರಗಿ: ಎರಡು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಳಿಕ ಬೈಕ್​ಗಳು ಹೊತ್ತಿ ಉರಿದಿವೆ. ಈ ಘಟನೆಯಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಘಟನೆ ಕಲಬುರಗಿ ಜಿಲ್ಲೆ ಕಾಳಗಿ ಪಟ್ಟಣದ ಕೊಡದೂರು ಗ್ರಾಮದಲ್ಲಿ ನಡೆದಿದೆ. ದಶರಥ್ ಮಡಿವಾಳ(28) ಮೃತ ದುರ್ವೈವಿ. ಮೈಮೇಲೆ ಪೆಟ್ರೋಲ್ ಬಿದ್ದು ಏಕಾಏಕಿ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದಾನೆ. ಇನ್ನು ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಮೈಸೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು

ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸಾವು

ಬಾಗಲಕೋಟೆ: ಅಡುಗೆ ಎಣ್ಣೆ ಮಿಲ್​ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟಿರುವ ಘಟನೆ ಜಮಖಂಡಿಯ ರಹಮತ್ ನಗರದಲ್ಲಿ ನಡೆದಿದೆ. ರಫಿಕ್ ಸೈಯದ್ ಕುಡಚಿ (35) ಮೃತದುರ್ದೈವಿ. ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ
ಪ್ರೀತಿಸುತ್ತಿದ್ದ ಮಾವನ ಮಗಳ ಜೊತೆ ಮದ್ವೆಗೆ ನಕಾರ: ಯುವಕ ಆತ್ಮಹತ್ಯೆ!
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಓಡಿ ಹೋದ ಮಗಳು: ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು?
ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

ಹೃದಯಾಘಾತದಿಂದ ಯುವಕ ಸಾವು

ವಿಜಯಪುರ: ಹೃದಯಾಘಾತದಿಂದ ಯುವಕ ಮೊಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಮೃತಪಟ್ಟಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಘಟನೆ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಮೊಹಮ್ಮದ್ ಪೈಗಂಬರ್ ಮೃತಪಟ್ಟಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ