ಹಾಸನ: ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗೆ ಸೆರೆ ಕಾರ್ಯಾಚರಣೆ ಮತ್ತೆ ಆರಂಭ

| Updated By: Ganapathi Sharma

Updated on: Jan 12, 2024 | 11:16 AM

ಅಭಿಮನ್ಯು, ಪ್ರಶಾಂತ, ಹರ್ಷ, ಅಶ್ವತ್ಥಾಮ, ಸುಗ್ರೀವ, ಧನಂಜಯ, ಭೀಮ, ಮಹೇಂದ್ರ ಆನೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾಡಾನೆ ಸೆರೆಗೆ ಕರೆತಂದಿರುವ ಈ ಸಾಕಾನೆಗಳು ಇದೀಗ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಬಂದಿವೆ.

ಹಾಸನ: ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಕಾಡಾನೆಗೆ ಸೆರೆ ಕಾರ್ಯಾಚರಣೆ ಮತ್ತೆ ಆರಂಭ
ಹಾಸನ: ಕಾಡಾನೆಗೆ ಸೆರೆಗೆ ಈಗ ದಸರಾ ಆನೆ ಅಭಿಮನ್ಯು ಎಂಟ್ರಿ
Follow us on

ಹಾಸನ, ಜನವರಿ 12: ಹಾಸನ ಜಿಲ್ಲೆಯಲ್ಲಿ ಮುಂದುವರಿದಿರುವ ಕಾಡಾನೆ ಹಾವಳಿ (Wild Elephant) ನಿಯಂತ್ರಣಕ್ಕೆ ಇದೀಗ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಗುರುವಾರದಿಂದ ಆರಂಭವಾಗಿರುವ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದಿದ್ದು, ಇದೀಗ ದಸರಾ ಆನೆ ಅಭಿಮನ್ಯು (Dasara Elephant Abhimanyu) ಕಾರ್ಯಾಚರಣೆಗೆ ಎಂಟ್ರಿಯಾಗಿದೆ. ಒಟ್ಟು ಎಂಟು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ಶುಕ್ರವಾರ ಬೆಳಗ್ಗೆಯೇ ಆರಂಭವಾಗಿದೆ.

ಡಿಸೆಂಬರ್ 4ರಂದು ಕಾರ್ಯಾಚರಣೆ ವೇಳೆ ದಸರಾ ಆನೆ ಕ್ಯಾಪ್ಟನ್ ಅರ್ಜುನ ಕಾಡಾನೆ ದಾಳಿಯಿಂದ ಗಾಯಗೊಂಡು ಮೃತಪಟ್ಟಿತ್ತು. ಆ ನಂತರ ಕಾಡಾನೆ ಸೆರೆ ಕಾರ್ಯಾಚರಣೆಗೆ ತಾತ್ಕಾಲಿಕ ತೆರೆ ಬಿದ್ದಿತ್ತು. ಆದರೆ, ಅರ್ಜುನನ ಬಲಿ ಪಡೆದ ಆನೆ ಸೆರೆಹಿಡಿಯಲು ಜನ ಒತ್ತಾಯಿಸಿದ್ದರು.

ಕಾಡಾನೆ ಸೆರೆಗೆ ಕರೆತಂದಿರುವ ಸಾಕಾನೆಗಳು ಇದೀಗ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಬಂದಿವೆ.

ಕಾರ್ಯಾಚರಣೆಯಲ್ಲಿ ಯಾವೆಲ್ಲ ಆನೆಗಳು ಭಾಗಿ?

ಅಭಿಮನ್ಯು, ಪ್ರಶಾಂತ, ಹರ್ಷ, ಅಶ್ವತ್ಥಾಮ, ಸುಗ್ರೀವ, ಧನಂಜಯ, ಭೀಮ, ಮಹೇಂದ್ರ ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರದಲ್ಲಿ ಸಾಕಾನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆಗೆ ಶಾಸಕ ಸುರೇಶ್ ಚಾಲನೆ ನೀಡಿದರು. ಸಿಸಿಎಫ್ ರವಿಶಂಕರ್, ಡಿಸಿಎಫ್ ಸದರನ್ ಕುಮಾರ್ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು.

ಜನವರಿ 4 ರಂದು ಬೇಲೂರು ತಾಲ್ಲೂಕಿನ ಮತ್ತಾವರ ಸಮೀಪ ಕಾರ್ಮಿಕರೊಬ್ಬರನ್ನು ಒಂಟಿ ಸಲಗ ಬಲಿಪಡೆದಿತ್ತು. ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಸ್ಥಳೀಯರ ಹೋರಾಟ ತೀವ್ರಗೊಂಡಿತ್ತು. ಏತನ್ಮಧ್ಯೆ, ಬೇಲೂರು ತಾಲೂಕಿನ ಸಿಂಗ್ರವಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಪ್ರತಿಭಟನಾ ನಿರತರು ಸರ್ಕಾರವನ್ನು ಆಗ್ರಹಿಸಿದ್ದರು. ಜನರ ಹೋರಾಟಕ್ಕೆ ಮಣಿದು ಇದೀಗ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ನಿಲ್ಲದ ಕಾಡಾನೆ ಹಾವಳಿ, ಜಮೀನುಗಳಿಗೆ ನುಗ್ಗಿ ಕಾಫಿ, ಭತ್ತ ಮತ್ತು ಮೆಣಸು ಬೆಳೆ ಸರ್ವನಾಶ

ಕಾಡಾನೆ ಹಾವಳಿ ತಡೆಗಟ್ಟಲು ಶೀಘ್ರದಲ್ಲೇ ಸರ್ಕಾರ ಕಾರ್ಯಾಚರಣೆ ನಡೆಸಲಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಇತ್ತೀಚೆಗೆ ಭರವಸೆ ನೀಡಿದ್ದರು.

ಕಳೆದ ಬಾರಿ ನಿಂತಿದ್ದೇಕೆ ಕಾರ್ಯಾಚರಣೆ?

ಕಳೆದ ತಿಂಗಳು ಹಾಸನ ಜಿಲ್ಲೆಯಲ್ಲಿ ನಡೆದಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದಸರಾ ಖ್ಯಾತಿಯ ಆನೆ ಅರ್ಜುನ ದಾರುಣವಾಗಿ ಸಾವನ್ನಪ್ಪಿತ್ತು. ಇದಾದ ಬಳಿಕ ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಈ ಮಧ್ಯೆ, ಕಾಡಾನೆ ಸೆರೆ ಕಾರ್ಯಾಚರಣೆಗೆ ಸಾಕಷ್ಟು ಸಾಕಾನೆಗಳು ಅರಣ್ಯ ಇಲಾಖೆ ಬಳಿ ಇಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದರು. ಸಾಕಷ್ಟು ಸಾಕಾನೆಗಳು ಇಲ್ಲದ ಕಾರಣವೊಡ್ಡಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಸ್ಥಳೀಯರ ಒತ್ತಡಕ್ಕೆ ಮಣಿದ ಇಲಾಖೆ ಮತ್ತೆ ಕಾರ್ಯಾಚರಣೆ ಶುರುಮಾಡಿದೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 am, Fri, 12 January 24