ಮಳೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ, ಹಸು ಹಾವು; ಶವ ಮುಂದಿಟ್ಟು ಧರಣಿ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಂಗಮ್ಮ (60) ಹಾಗೂ ಹಸು ಮೃತಪಟ್ಟಿದ್ದರು. ನಿನ್ನೆ ಸಂಜೆಯಿಂದ ಮೃತ ಮಹಿಳೆ ಶವ ಮೇಲೆತ್ತಲು ಬಿಡದೆ ಘಟನೆ ನಡೆದ ಸ್ಥಳದಲ್ಲೇ ಪ್ರತಿಭಟನೆ ನಡೆಸಲಾಗುತ್ತಿದೆ.

ಮಳೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ, ಹಸು ಹಾವು; ಶವ ಮುಂದಿಟ್ಟು ಧರಣಿ
ಪ್ರತಿಭಟನೆ ನಡೆಯುತ್ತಿರುವ ಸ್ಥಳ
Follow us
ಮಂಜುನಾಥ ಕೆಬಿ
| Updated By: ಆಯೇಷಾ ಬಾನು

Updated on:Jul 08, 2023 | 1:34 PM

ಹಾಸನ: ಹಾಸನ ಸುತ್ತಮುತ್ತ ಧಾರಕಾರ ಮಳೆ ಸುರಿದಿದೆ(Hassan Rain). ಹಳೇಬೀಡು ಮತ್ತು ಹೊಳೆನರಸೀಪುರ ಪಟ್ಟಣಗಳಲ್ಲಿ ಉತ್ತಮ ಮಳೆಯಾಗಿದ್ದು ಭಾರೀ ಮಳೆಯಿಂದ ದುರಂತವೊಂದು ಸಂಭವಿಸಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮಹಿಳೆ ಹಾಗೂ ಹಸು ಸಾವನ್ನಪ್ಪಿದೆ(Electric Shock Death). ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಬೇಜವಾಬ್ದಾರಿ ತೋರಿರುವ ಚೆಸ್ಕಾಂ ಸಿಬ್ಬಂದಿ ಅಮಾನತು ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ(ಜುಲೈ 07) ಸಂಜೆ ಹಸು ಮೇಯಿಸಿಕೊಂಡು ಬರುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಂಗಮ್ಮ (60) ಹಾಗೂ ಹಸು ಮೃತಪಟ್ಟಿದ್ದರು. ನಿನ್ನೆ ಸಂಜೆಯಿಂದ ಮೃತ ಮಹಿಳೆ ಶವ ಮೇಲೆತ್ತಲು ಬಿಡದೆ ಘಟನೆ ನಡೆದ ಸ್ಥಳದಲ್ಲೇ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಭೇಟಿ ನೀಡಿದ್ದು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಆದ್ರೆ ಪ್ರತಿಭಟನಾಕಾರರು ಶಾಸಕರ ಮನವೊಲಿಕೆಗೆ ಕ್ಯಾರೆ ಎನ್ನುತ್ತಿಲ್ಲ. ತಮ್ಮ ಬೇಡಿಕೆ ಈಡೇರಿಸುವವರೆಗೂ ಶವ ಮೇಲೆತ್ತಲು ಬಿಡಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Davanagere: ಮಲೆನಾಡ ಭಾಗದಲ್ಲಿ ಧಾರಾಕಾರ ಮಳೆ, ತುಂಗಭದ್ರೆಯಲ್ಲಿ ಹರಿಯಲಾರಂಭಿಸಿತು ನೀರು, ರೈತರು ಖುಷ್!

ಭಾರಿ ಗಾಳಿ, ಮಳೆಯಿಂದ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿತ್ತು. ಆದರೆ, ಇದನ್ನು ಯಾರೂ ಗಮನಿಸಿರಲಿಲ್ಲ. ಈ ವೇಳೆ ಹೊಲಕ್ಕೆ ಹೋಗಿ ಹಸುವನ್ನು ಮೇಯಿಸಿಕೊಂಡು ಬರುತ್ತಿದ್ದಾಗ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಗಮನಿಸದೆ ತುಳಿದಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆ ಹಾಗೂ ಹಸು ಮೃತಪಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:32 pm, Sat, 8 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ