AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಶೋಭಾ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಮೃತದೇಹ ಕೊಂಡೊಯ್ಯಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ. 50 ಲಕ್ಷ ರೂ. ಪರಿಹಾರ ಹಾಗೂ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಈ ದುರ್ಘಟನೆ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು
ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು
ಮಂಜುನಾಥ ಕೆಬಿ
| Edited By: |

Updated on: Jan 13, 2026 | 2:06 PM

Share

ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮೂವರು ಓಡಿದರೂ, ಶೋಭಾ ಅವರನ್ನು ಬೆನ್ನಟ್ಟಿದ ಸಲಗ ತುಳಿದು ಸ್ಥಳದಲ್ಲೇ ಸಾಯಿಸಿದೆ. ಘಟನೆಯ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿದ್ದಾರೆ.

ಶವ ಮೇಲೆತ್ತಲು ನಿರಾಕರಣೆ, ಗ್ರಾಮಸ್ಥರ ಆಕ್ರೋಶ

ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು, ಮೃತದೇಹವನ್ನು ಸ್ಥಳದಲ್ಲೇ ಇಟ್ಟು ಶವ ಮೇಲೆತ್ತಲು ಬಿಡದೆ ಧರಣಿ ನಡೆಸಿದರು. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿದರು. ಕಾಡಾನೆಗಳ ಸಂಚಾರದ ಬಗ್ಗೆ ಮುಂಚಿತ ಮಾಹಿತಿ ನೀಡುತ್ತಿಲ್ಲ. ಪುಂಡಾನೆಗಳನ್ನು ಸೆರೆಹಿಡಿಯುತ್ತಿಲ್ಲ ಹಾಗೂ ರೆಡಿಯೋ ಕಾಲರ್ ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಜನಪ್ರತಿನಿಧಿಗಳ ಭೇಟಿ

ಘಟನಾ ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್​ಕೆ ಕುಮಾರಸ್ವಾಮಿ, ಹಾಗೂ ಡಿಎಫ್‌ಒ ಸೌರಭ್ ಕುಮಾರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆದರೆ, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪರಿಹಾರದ ಹಣ ನಮಗೆ ಬೇಡ, ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಶವ ಮೇಲೆತ್ತಲು ನಿರಾಕರಿಸಿ ಪ್ರತಿಭಟನೆ ತೀವ್ರಗೊಳಿಸಿದ್ದರಿಂದ ಜಿಲ್ಲಾಧಿಕಾರಿ ಲತಾ ಕುಮಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು. ಡಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಜನರನ್ನು ಮನವೊಲಿಸಲು ಪ್ರಯತ್ನಿಸಿದರು.

ಇದನ್ನೂ ಓದಿ: ಮೈಸೂರು: ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್

ಕಳೆದ ಕೆಲವು ವರ್ಷಗಳಿಂದ ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗಳು ಹೆಚ್ಚುತ್ತಿದ್ದು, ಅಮಾಯಕರು ಬಲಿಯಾಗುತ್ತಿರುವುದು ಜನರಲ್ಲಿ ಭಯ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂಬ ಒತ್ತಾಯ ಮತ್ತಷ್ಟು ಗಟ್ಟಿಯಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ